ಉಯಿಘರ್ ಮುಸ್ಲಿಂ ಜನಸಂಖ್ಯೆ ನಿಗ್ರಹಕ್ಕೆ ಬಲವಂತದ ಗರ್ಭಪಾತ
Team Udayavani, Jun 30, 2020, 8:35 AM IST
ಬೀಜಿಂಗ್: ದೇಶದಲ್ಲಿನ ಮುಸ್ಲಿಂ ಜನಸಂಖ್ಯೆಯನ್ನು ನಿಗ್ರಹಿಸುವ ವ್ಯಾಪಕ ಅಭಿಯಾನದ ಅಂಗವಾಗಿ ಉಯಿಘರ್ ಮತ್ತು ಇತರ ಅಲ್ಪಸಂಖ್ಯಾಕರಲ್ಲಿ ಜನನದ ಪ್ರಮಾಣವನ್ನು ಕಡಿತಗೊಳಿಸಲು ಚೀನ ಸರಕಾರ ಕಠಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಅಲ್ಲದೆ, ದೇಶದ ಬಹುಸಂಖ್ಯಾಕ ಹ್ಯಾನ್ ಸಮುದಾಯದವರಿಗೆ ಹೆಚ್ಚಿನ ಮಕ್ಕಳನ್ನು ಹೊಂದಲು ಉತ್ತೇಜನ ನೀಡುತ್ತಿದೆ. ಈ ಅಭಿಯಾನವನ್ನು ಈಗ ಹಿಂದಿಗಿಂತ ಹೆಚ್ಚು ವ್ಯಾಪಕವಾಗಿ ಹಾಗೂ ವ್ಯವಸ್ಥಿತವಾಗಿ ನಡೆಸಲಾಗುತ್ತಿದೆ. ಅದರಲ್ಲೂ ವಿಶೇಷವಾಗಿ, ಉಯಿಘರ್ ಸ್ವಾಯತ್ತ ಪ್ರದೇಶವಾಗಿರುವ ಕ್ಸಿನ್‌ಜಿಯಾಂಗ್ ಪ್ರಾಂತ್ಯದಲ್ಲಿ ಇದು ಹೆಚ್ಚಿದೆ. ಇಲ್ಲಿನ ಅಲ್ಪಸಂಖ್ಯಾಕ ಮಹಿಳೆಯರನ್ನು ನಿಯಮಿತವಾಗಿ ಗರ್ಭಧಾರಣೆಯ ತಪಾಸಣೆಗೆ ಒಳಪಡಿಸಲಾಗುತ್ತದೆ. ಅವರಿಗೆ ಗರ್ಭನಿರೋಧಕ ಬಳಸಲು ಆಗ್ರಹಿಸಲಾಗುತ್ತದೆ. ಸಂತಾನ ಶಕ್ತಿಹರಣ ಹಾಗೂ ಬಲವಂತದ ಗರ್ಭಪಾತಕ್ಕೆ ಒತ್ತಾಯಿಸಲಾಗುತ್ತದೆ.
ಹೆಚ್ಚಿನ ಮಕ್ಕಳನ್ನು ಹೊಂದಿರುವವರನ್ನು ನಿರಾಶ್ರಿತರ ಶಿಬಿರಗಳಲ್ಲಿ ಬಲವಂತದ ಬಂಧನಕ್ಕೆ ಒಳಪಡಿಸಲಾಗುತ್ತದೆ. ಮೂರಕ್ಕಿಂತ ಹೆಚ್ಚಿನ ಮಕ್ಕಳಿದ್ದರೆ ದೊಡ್ಡ ಮೊತ್ತದ ದಂಡ ವಿಧಿಸಲಾಗುತ್ತದೆ. ಪೊಲೀಸರು ಮನೆಗಳ ಮೇಲೆ ಆಗಾಗ ದಾಳಿ ಮಾಡಿ, ಹೆಚ್ಚಿನ ಮಕ್ಕಳಿರುವ ಪೋಷಕರನ್ನು ಬೆದರಿಸುತ್ತಾರೆ. ಇಂಥ ಬಲವಂತದ ಜನಸಂಖ್ಯಾ ನಿಯಂತ್ರಣ, ಒಂದು ರೀತಿಯ ಜನಾಂಗೀಯ ಹತ್ಯಾಕಾಂಡದ ರೂಪ ಎಂದು “ಅಸೋಸಿಯೇಟೆಡ್ ಪ್ರಸ್’ ವರದಿ ಮಾಡಿದೆ. ಈ ಮಧ್ಯೆ, 2015-18ರ ಅವಧಿಯಲ್ಲಿ ಉಯಿಘರ್ ಪ್ರಾಂತ್ಯದ ಹೋಟನ್ ಮತ್ತು ಕಾಶರ್ ವಲಯಗಳಲ್ಲಿ ಜನನ ಪ್ರಮಾಣ ಶೇ.60ರಷ್ಟು ಕುಸಿದಿದೆ ಎಂಬುದನ್ನು ಚೀನ ಸರಕಾರದ ಅಂಕಿ-ಅಂಶಗಳೇ ಹೇಳುತ್ತವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Donald Trump: ನೀಲಿ ಚಿತ್ರ ತಾರೆಗೆ ಲಂಚ: ಅಧಿಕಾರಕ್ಕೆ ಮೊದಲೇ ಟ್ರಂಪ್ ಕೇಸಿನ ತೀರ್ಪು
House Of Representatives: ಈ ಬಾರಿ ಅಮೆರಿಕ ಸಂಸತ್ತಲ್ಲಿ ಗರಿಷ್ಠ ಸಂಖ್ಯೆ ಹಿಂದುಗಳು!
HMPV; ಚಳಿಗಾಲದಲ್ಲಿ ಸೋಂಕು ಸಾಮಾನ್ಯ: ಗಾಬರಿ ಬೇಡ ಎಂದ ಚೀನ
Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ
PM Modi Gifts: 2023ರಲ್ಲಿ ಬೈಡನ್ ಪತ್ನಿ ಜಿಲ್ ಅವರಿಗೆ ಮೋದಿ 17 ಲಕ್ಷದ ಉಡುಗೊರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UV Fusion: ಆತ್ಮಹತ್ಯೆಗೂ ಆಯಸ್ಸು ಮುಗಿದಿರಬೇಕು
Vavar Mosque: ಶಬರಿಮಲೆ ಯಾತ್ರಿಗಳು ವಾವರ ಮಸೀದಿಗೆ ಹೋಗಬಾರದು: ಬಿಜೆಪಿ ಶಾಸಕ
Sydney: ಆಸ್ಟ್ರೇಲಿಯಾ ಪ್ರೇಕ್ಷಕರಿಗೆ ಸ್ಯಾಂಡ್‌ಪೇಪರ್ ಕೇಸ್ ನೆನಪು ಮಾಡಿದ ವಿರಾಟ್|Video
Viral: ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ 16ರ ಬಾಲಕನ ಜತೆ ಮನೆ ಬಿಟ್ಟು ಓಡಿದ 10ರ ಬಾಲಕಿ!
Donald Trump: ನೀಲಿ ಚಿತ್ರ ತಾರೆಗೆ ಲಂಚ: ಅಧಿಕಾರಕ್ಕೆ ಮೊದಲೇ ಟ್ರಂಪ್ ಕೇಸಿನ ತೀರ್ಪು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.