ಭಾರತೀಯ ವಿದ್ಯಾರ್ಥಿಗಳಿಗೆ ನಾಲ್ಕು ವರ್ಷದ ವೀಸಾ?
Team Udayavani, Jun 17, 2020, 8:20 AM IST
ಸಾಂದರ್ಭಿಕ ಚಿತ್ರ
ಲಂಡನ್: ವಿದೇಶಿಯರಿಗೆ ನೀಡಲಾಗುವ “ಅಧ್ಯಯನ ನಂತರದ ವೀಸಾ’ವನ್ನು ನಾಲ್ಕು ವರ್ಷಗಳಿಗೆ ದ್ವಿಗುಣಗೊಳಿಸಬೇಕೆಂದು ನೂತನ ವರದಿಯೊಂದು ಬ್ರಿಟನ್ ಸರಕಾರಕ್ಕೆ ಸಲಹೆ ನೀಡಿದೆ. ಇದರಿಂದಾಗಿ 2024ರ ವೇಳೆಗೆ ಭಾರತೀಯ ವಿದ್ಯಾರ್ಥಿಗಳು ಬ್ರಿಟನ್ನ ವಿಶ್ವವಿದ್ಯಾಲಯಗಳನ್ನು ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ದ್ವಿಗುಣಗೊಳ್ಳುವ ನಿರೀಕ್ಷೆ ಇದೆ ಎಂದು ಆಶಿಸಲಾಗಿದೆ.
ಬ್ರಿಟನ್ನ ಮಾಜಿ ಸಚಿವ ಜೋ ಜಾನ್ಸನ್ ಈ ಬಗ್ಗೆ ವರದಿ ಸಿದ್ಧ ಪಡಿಸಿದ್ದು, ಕೋವಿಡ್ ಹಿನ್ನೆಲೆಯಲ್ಲಿ ಶೇ.50-75ರಷ್ಟು ವಿದೇಶಿ ವಿದ್ಯಾರ್ಥಿಗಳು ವ್ಯಾಸಂಗ ಮೊಟಕುಗೊಳಿಸುವ ಸಾಧ್ಯತೆ ಇದೆ. ಇದು ದೇಶದ ಉನ್ನತ ಶಿಕ್ಷಣ ವಲಯಕ್ಕೆ ಸವಾಲಾಗಲಿದೆ. ಪದವಿಯ ಕೊನೆಯಲ್ಲಿ ಕೆಲಸ ಮಾಡುವ ಅವಕಾಶ ವಿಸ್ತರಣೆ, ಭಾರತೀಯ ವಿದ್ಯಾರ್ಥಿಗಳನ್ನು ಕಡಿಮೆ-ಅಪಾಯದ ವಿದ್ಯಾರ್ಥಿ ವೀಸಾ ವಿಭಾಗದಲ್ಲಿ ಸೇರಿಸುವುದರಿಂದ, ಭಾರತೀಯ ವಿದ್ಯಾರ್ಥಿ ಗಳನ್ನು ಸೆಳೆಯಲು ಅನುಕೂಲವಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಭಾರತೀಯ ವಿದ್ಯಾರ್ಥಿಗಳು ಬ್ರಿಟನ್ನ ವಿವಿಗಳನ್ನು ಹೆಚ್ಚಾಗಿ ಆಯ್ಕೆ ಮಾಡಿಕೊಳ್ಳುತ್ತಿರುವುದು ಕಂಡು ಬರುತ್ತಿದೆ ಎಂದು ವರದಿಯಲ್ಲಿ ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
New York: ಅಮೆರಿಕದಲ್ಲಿ ಶೂಟೌಟ್: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ
Moscow: ಕೆಮಿಕಲ್ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ
Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.