G7 Summit: ಇಟಲಿಯಲ್ಲಿ ವಿಶ್ವ ನಾಯಕರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದ ಪ್ರಧಾನಿ ಮೋದಿ
ಫ್ರಾನ್ಸ್, ಯುಕೆ, ಉಕ್ರೇನ್ ನಾಯಕರೊಂದಿಗೆ ಮಹತ್ವದ ಮಾತುಕತೆ
Team Udayavani, Jun 14, 2024, 5:48 PM IST
ರೋಮ್ : ಸತತ ಮೂರನೇ ಅವಧಿಗೆ ಅಧಿಕಾರ ವಹಿಸಿಕೊಂಡ ನಂತರ ಪ್ರಧಾನಿ ಮೋದಿಯವರು ಮೊದಲ ವಿದೇಶ ಪ್ರವಾಸ ಕೈಗೊಂಡಿದ್ದಾರೆ. G7 ಶೃಂಗಸಭೆಗಾಗಿ ಇಟಲಿಯಲ್ಲಿರುವ ಪ್ರಧಾನಿ ಮೋದಿ ಅವರು ಶುಕ್ರವಾರ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್, ಯುಕೆ ಪ್ರಧಾನಿ ರಿಷಿ ಸುನಕ್ ಮತ್ತು ಉಕ್ರೇನ್ ಅಧ್ಯಕ್ಷ ವ್ಲಾಡಿಮಿರ್ ಝೆಲೆನ್ಸ್ಕಿ ಅವರನ್ನು ಭೇಟಿಯಾಗಿ ಪ್ರತ್ಯೇಕ ದ್ವಿಪಕ್ಷೀಯ ಸಭೆಗಳನ್ನು ನಡೆಸಿದರು.
ರಕ್ಷಣ, ಪರಮಾಣು ಮತ್ತು ಬಾಹ್ಯಾಕಾಶ ಕ್ಷೇತ್ರಗಳನ್ನು ಒಳಗೊಂಡಂತೆ ವ್ಯೂಹಾತ್ಮಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳನ್ನು ಮ್ಯಾಕ್ರನ್ ಮತ್ತು ಮೋದಿ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ. ರಷ್ಯಾ-ಉಕ್ರೇನ್ ಸಂಘರ್ಷದ ವಿವಿಧ ಅಂಶಗಳ ಕುರಿತು ಝೆಲೆನ್ಸ್ಕಿ ಮೋದಿಯವರಿಗೆ ವಿವರಿಸಿದರು. ರಿಷಿ ಸುನಕ್ ಅವರೊಂದಿಗಿನ ಅವರ ಸಂಕ್ಷಿಪ್ತ ಸಭೆ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಬಗ್ಗೆ ಕೇಂದ್ರೀಕೃತವಾಗಿತ್ತು ಎಂದು ತಿಳಿದು ಬಂದಿದೆ.
ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿ ಶುಕ್ರವಾರ ಬೆಳಗ್ಗೆ ಇಟಲಿಯ ಅಪುಲಿಯಾಗೆ ತಲುಪಿದರು. ಹಲವಾರು ಇತರ ನಾಯಕರನ್ನು ಭೇಟಿ ಮಾಡುವ ನಿರೀಕ್ಷೆಯಿದೆ.
ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ಮೋದಿ
”ಇಟಲಿಯಲ್ಲಿ ಯುಕೆ ಪ್ರಧಾನಿ ರಿಷಿ ಸುನಕ್ ಅವರನ್ನು ಭೇಟಿಯಾದುದು ಸಂತೋಷ ನೀಡಿತು. ಎನ್‌ಡಿಎ ಸರ್ಕಾರದ ಮೂರನೇ ಅವಧಿಯಲ್ಲಿ ಭಾರತ-ಯುಕೆ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಇನ್ನಷ್ಟು ಬಲಪಡಿಸುವ ನನ್ನ ಬದ್ಧತೆಯನ್ನು ನಾನು ಪುನರುಚ್ಚರಿಸಿದೆ. ಸೆಮಿಕಂಡಕ್ಟರ್‌ಗಳು, ತಂತ್ರಜ್ಞಾನ ಮತ್ತು ವ್ಯಾಪಾರದಂತಹ ಕ್ಷೇತ್ರಗಳಲ್ಲಿ ಬಾಂಧವ್ಯವನ್ನು ಗಾಢವಾಗಿಸಲು ಉತ್ತಮ ಅವಕಾಶವಿದೆ. ರಕ್ಷಣ ವಲಯದಲ್ಲಿ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವ ಬಗ್ಗೆಯೂ ಮಾತನಾಡಿದ್ದೇವೆ” ಎಂದು ಪ್ರಧಾನಿ ಮೋದಿ ಎಕ್ಸ್ ಪೋಸ್ಟ್ ಮಾಡಿದ್ದಾರೆ.
”ನನ್ನ ಸ್ನೇಹಿತ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಅತ್ಯುತ್ತಮವಾದ ಸಭೆಯನ್ನು ನಡೆಸಿದ್ದೇನೆ. ಇದು ಒಂದು ವರ್ಷದಲ್ಲಿ ನಮ್ಮ ನಾಲ್ಕನೇ ಸಭೆಯಾಗಿದ್ದು, ಬಲವಾದ ಭಾರತ-ಫ್ರೆಂಚ್ ಬಾಂಧವ್ಯಕ್ಕೆ ನಾವು ಆದ್ಯತೆ ನೀಡುತ್ತೇವೆ. ನಮ್ಮ ಮಾತುಕತೆಗಳು ರಕ್ಷಣೆ, ಭದ್ರತೆ, ತಂತ್ರಜ್ಞಾನ, AI, ನೀಲಿ ಆರ್ಥಿಕತೆ ಸೇರಿ ಹಲವಾರು ವಿಷಯಗಳನ್ನು ಒಳಗೊಂಡಿವೆ. ಯುವಕರಲ್ಲಿ ನಾವೀನ್ಯತೆ ಮತ್ತು ಸಂಶೋಧನೆಯನ್ನು ಹೇಗೆ ಪ್ರೋತ್ಸಾಹಿಸಬೇಕು ಎಂಬ ಕುರಿತು ನಾವು ಚರ್ಚಿಸಿದ್ದೇವೆ. ಮುಂದಿನ ತಿಂಗಳು ಆರಂಭವಾಗಲಿರುವ ಪ್ಯಾರಿಸ್ ಒಲಿಂಪಿಕ್ಸ್‌ನ ಆತಿಥ್ಯಕ್ಕಾಗಿ ನಾನು ನನ್ನ ಶುಭಾಶಯಗಳನ್ನು ತಿಳಿಸಿದ್ದೇನೆ” ಎಂದು ಮೋದಿ ಪೋಸ್ಟ್ ಮಾಡಿದ್ದಾರೆ.
”ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಅವರೊಂದಿಗೆ ಬಹಳ ಉತ್ಸಾಹದಾಯಕ ಸಭೆ ನಡೆಸಿದೆ. ಉಕ್ರೇನ್ ಜತೆಗಿನ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಗಟ್ಟಿಗೊಳಿಸಲು ಭಾರತ ಉತ್ಸುಕವಾಗಿದೆ. ನಡೆಯುತ್ತಿರುವ ಯುದ್ಧದ ಬಗ್ಗೆ ಭಾರತ ಮಾನವ ಕೇಂದ್ರಿತ ವಿಧಾನವನ್ನು ನಂಬುತ್ತದೆ. ಮಾತುಕತೆ ಮತ್ತು ರಾಜತಾಂತ್ರಿಕತೆ ಮೂಲಕ ಶಾಂತಿಯ ಮಾರ್ಗ ಕಂಡುಕೊಳ್ಳುವುದನ್ನು ನಂಬುತ್ತದೆ ಎಂದು ಪುನರುಚ್ಚರಿಸಿದ್ದೇನೆ” ಎಂದು ಪೋಸ್ಟ್ ಮಾಡಿದ್ದಾರೆ.
It was a delight to meet PM @RishiSunak in Italy. I reiterated my commitment to further strengthen the India-UK Comprehensive Strategic Partnership in the third term of the NDA Government. There is great scope to deepen ties in sectors like semiconductors, technology and trade.… pic.twitter.com/ehjhFY89cE
— Narendra Modi (@narendramodi) June 14, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.