Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ಮಾರುಕಟ್ಟೆಯಲ್ಲಿ ಏಕಸ್ವಾಮ್ಯ ತಡೆಯಲು ಮುಂದಾದ ಅಮೆರಿಕ
Team Udayavani, Nov 21, 2024, 7:40 AM IST
ವಾಷಿಂಗ್ಟನ್: ವಿಶ್ವದ ಅತಿಜನಪ್ರಿಯ ಅಂತರ್ಜಾಲ ಸರ್ಚ್ ಎಂಜಿನ್ “ಗೂಗಲ್ ಕ್ರೋಮ್’ನ್ನು ಅಮೆರಿಕದ ಅಧಿಕಾರಿಗಳು ಒತ್ತಾಯಪೂರ್ವಕವಾಗಿ ಮಾರಾಟ ಮಾಡಿಸುವ ಸಾಧ್ಯತೆ ಇದೆ. ಅಂತರ್ಜಾಲದಲ್ಲಿ ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರುಕಟ್ಟೆಯಲ್ಲಿ ಏಕಸ್ವಾಮ್ಯವನ್ನು ಸಾಧಿಸಿರುವ ಹಿನ್ನೆಲೆಯಲ್ಲಿ ಅಮೆರಿಕದ ನ್ಯಾಯಾಂಗ ಇಲಾಖೆ ಅಧಿಕಾರಿಗಳು ಒತ್ತಾಯಪೂರ್ವಕವಾಗಿ ಮಾರಾಟ ಮಾಡಿಸಲು ಅಲ್ಲಿನ ಸುಪ್ರೀಂಕೋರ್ಟ್‌ಗೆ ಕಳೆದ ತಿಂಗಳು ಪ್ರಸ್ತಾವನೆ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಅಮೆರಿಕದಲ್ಲಿ ವ್ಯಾಪಾರ ಏಕಸ್ವಾಮ್ಯಕ್ಕೆ ಅವಕಾಶವಿಲ್ಲ. ಆದರೆ ಗೂಗಲ್ ಕ್ರೋಮ್ ಸರ್ಚ್ ಎಂಜಿನ್ ಮಾರುಕಟ್ಟೆಯಲ್ಲಿ ಜಗತ್ತಿನಾದ್ಯಂತ ಶೇ.90 ಹಿಡಿತವನ್ನು ಹೊಂದಿದೆ. ಒಂದು ವೇಳೆ ಅಲ್ಲಿನ ಕೋರ್ಟ್ ಮಾರಾಟ ಪ್ರಸ್ತಾವನೆಯನ್ನು ಒಪ್ಪಿಕೊಂಡರೆ ಗೂಗಲ್ ಕ್ರೋಮ್ ಮೂಲ ಕಂಪನಿ ಅಲ್ಫಾಬೆಟ್ ತನ್ನ ಸರ್ಚ್ ಎಂಜಿನ್ ಮಾರಾಟ ಮಾಡುವುದು ಅನಿವಾರ್ಯವಾಗಲಿದೆ. ಕಂಪನಿಯ ಮೌಲ್ಯ 1.6 ಲಕ್ಷ ಕೋಟಿ ರೂ. (20 ಬಿಲಿಯನ್ ಡಾಲರ್) ಎಂದು ಅಂದಾಜಿಸಲಾಗಿದೆ. ಟ್ರಂಪ್ ಮೊದಲ ಅವಧಿಯಿಂದ ಹಿಡಿದು ಈಗಿನ ಜೋ ಬಿಡೆನ್ ಕಾಲದವರೆಗೆ ಗೂಗಲ್ ಕಾನೂನು ಹೋರಾಟವನ್ನು ಎದುರಿಸುತ್ತಲೇ ಇದೆ. ಜತೆಗೆ ಈ ವಿಚಾರದಲ್ಲಿ ಯಾವುದೇ ಕಾನೂನು ಹೋರಾಟಕ್ಕೆ ಸಿದ್ಧ ಎಂದು ಗೂಗಲ್ ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
Pakistan;ಬಲೂಚಿಸ್ಥಾನದಲ್ಲಿ ಉಗ್ರರ ವಿರುದ್ಧ ಸಮಗ್ರ ಕಾರ್ಯಾಚರಣೆಗೆ ಮುಂದಾದ ಪಾಕ್
Modi; 56 ವರ್ಷಗಳಲ್ಲಿ ಗಯಾನಾಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ
‘New Phase’ of War: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅಣ್ವಸ್ತ್ರ ದಾಳಿ ಎಚ್ಚರಿಕೆ!
Copper: ಕಾಂಗೋದಲ್ಲಿ ಕುಸಿದ ಪರ್ವತ: ಸಾವಿರಾರು ಟನ್ ತಾಮ್ರ ಪ್ರತ್ಯಕ್ಷ!
MUST WATCH
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು
ಹೊಸ ಸೇರ್ಪಡೆ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
Tollywood: ನಾನು ಸಿಂಗಲ್ ಅಲ್ಲ.. ರಶ್ಮಿಕಾ ಜತೆಗಿನ ಸಂಬಂಧ ದೃಢಪಡಿಸಿದ್ರಾ ದೇವರಕೊಂಡ?
BGT 2024: ಮೊದಲ ಪಂದ್ಯಕ್ಕೆ ನಮ್ಮ ಆಡುವ ಬಳಗ ಅಂತಿಮವಾಗಿದೆ ಎಂದ ನಾಯಕ ಬುಮ್ರಾ
Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.