ರಿಯಲ್ ಎಸ್ಟೇಟ್‌ಗೂ ಜಿಎಸ್‌ಟಿ
Team Udayavani, Oct 13, 2017, 6:50 AM IST
ವಾಷಿಂಗ್ಟನ್: ದೇಶದ ರಿಯಲ್ ಎಸ್ಟೇಟ್ ಉದ್ಯಮವೂ ಸರಕು ಮತ್ತು ಸೇವಾ ತೆರಿಗೆ ವ್ಯಾಪ್ತಿಗೆ ಬರಲಿದೆಯೇ. ಇಂಥದ್ದೊಂದು ಸುಳಿವು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ಕಡೆಯಿಂದಲೇ ಹೊರಬಿದ್ದಿದೆ. ಅಮೆರಿಕ ಪ್ರವಾಸ ದಲ್ಲಿರುವ ಅವರು, ಹಾರ್ವರ್ಡ್ ವಿವಿಯಲ್ಲಿ ನೀಡಿದ ಉಪನ್ಯಾಸದಲ್ಲಿ ಇಂಥದ್ದೊಂದು ಸಾಧ್ಯತೆಯನ್ನು ತೆರೆದಿಟ್ಟಿದ್ದಾರೆ. ನವೆಂಬರ್ ನಲ್ಲಿ ನಡೆಯಲಿರುವ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳ ಲಾಗುತ್ತದೆ ಎಂದು ಅವರು ಹೇಳಿದ್ದಾರೆ.
“ಭಾರತದಲ್ಲಿ ಅತಿ ಹೆಚ್ಚು ಹಣ ಹೂಡಿಕೆ ಯಾಗುವ ಪ್ರಮುಖ ಕ್ಷೇತ್ರಗಳಲ್ಲಿ ರಿಯಲ್ ಎಸ್ಟೇಟ್ ಉದ್ಯಮವೂ ಒಂದು. ಅಷ್ಟೇ ಅಲ್ಲ, ಅತಿ ಹೆಚ್ಚು ತೆರಿಗೆ ಹಣ ಸೋರಿಕೆಯಾಗುವ ಕ್ಷೇತ್ರಗಳ ಸಾಲಲ್ಲೂ ಇದು ಸೇರುತ್ತದೆ. ಹಾಗಾಗಿ ಈ ಕ್ಷೇತ್ರವನ್ನು ಜಿಎಸ್‌ಟಿ ವ್ಯಾಪ್ತಿ ಯಡಿ ತರಬೇಕೆಂದು ಕೆಲವು ರಾಜ್ಯ ಸರಕಾರಗಳು ಒತ್ತಡ ಹೇರುತ್ತಿವೆ. ಆದರೆ ಕೆಲವು ರಾಜ್ಯಗಳು ಇದನ್ನು ವಿರೋಧಿಸಿವೆ. ಇಬ್ಬರದ್ದೂ ಪ್ರತ್ಯೇಕ ದೃಷ್ಟಿಕೋನಗಳಿವೆ. ಆದ್ದರಿಂದ ನವೆಂಬರ್‌ನಲ್ಲಿ ನಡೆಯಲಿರುವ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗುವುದು. ಎರಡೂ ದೃಷ್ಟಿ ಕೋನಗಳ ಬಗ್ಗೆ ಕೂಲಂಕಷವಾಗಿ ಚರ್ಚಿಸಿದ ಬಳಿಕವೇ ಒಂದು ನಿರ್ಧಾರಕ್ಕೆ ಬರಲಾಗುತ್ತದೆ’ ಎಂದು ಅರುಣ್ ಜೇಟ್ಲಿ ತಿಳಿಸಿದರು.
ಹಾಗೊಮ್ಮೆ ಜಿಎಸ್‌ಟಿ ವ್ಯಾಪ್ತಿಯೊಳಗೆ ರಿಯಲ್ ಎಸ್ಟೇಟ್ ಬಂದರೆ ಮನೆ, ನಿವೇಶನ ಖರೀದಿ ಮಾಡುವ, ಮಾರಾಟ ಮಾಡಲಿಚ್ಛಿ ಸುವ ಗ್ರಾಹಕರು ಒಂದು “ಅಂತಿಮ ತೆರಿಗೆ’ ಯನ್ನು ಮಾತ್ರ ಪಾವತಿಸಬೇಕಾಗುತ್ತದೆ ಎಂದು ತಿಳಿಸಿದ ಸಚಿವ ಜೇಟ್ಲಿ, ಅಂತಿಮ ತೆರಿಗೆಯನ್ನು ಅತ್ಯಲ್ಪವಾಗಿಸುವ ಮೂಲಕ ಗ್ರಾಹಕರಿಗೆ ಹೊರೆಯಾಗದಂತೆ ನೋಡಿಕೊಳ್ಳ ಲಾಗುವುದು ಎಂದೂ ಸ್ಪಷ್ಟಪಡಿಸಿದರು.
ಜಿಎಸ್‌ಟಿ ವ್ಯಾಪ್ತಿಗೆ ರಿಯಲ್ ಎಸ್ಟೇಟ್ ಉದ್ಯಮವನ್ನು ತರುವುದರಿಂದ ಈ ಕ್ಷೇತ್ರ ದಲ್ಲಿರುವ ಕಾಳದಂಧೆಯ ಮೇಲೂ ಕಡಿವಾಣ ಹೇರಲು ಸಾಧ್ಯ ಎಂದು ಜೇಟ್ಲಿ ಅಭಿಪ್ರಾಯಪಟ್ಟರು.
ಬ್ಯಾಂಕಿಂಗ್ ಕ್ಷೇತ್ರ ಸದೃಢಗೊಳಿಸುವ ಗುರಿ
ಬ್ಯಾಂಕಿಂಗ್ ಕ್ಷೇತ್ರವನ್ನು ಮತ್ತಷ್ಟು ಸದೃಢಗೊಳಿಸುವುದು ಭಾರತ ಸರಕಾರದ ಸದ್ಯದ ಗುರಿಯಾಗಿದೆ. ಸದ್ಯಕ್ಕೆ ಭಾರತೀಯ ಬ್ಯಾಂಕ್‌ಗಳು ವಸೂಲಾಗದ ಸಾಲ, ಅನುತ್ಪಾದಕ ಆಸ್ತಿ ಸಹಿತ ಹಲವಾರು ಸಮಸ್ಯೆಗಳಿಂದ ಬಳಲುತ್ತಿವೆ. ಈ ಸಮಸ್ಯೆಗಳನ್ನು ತೊಡೆದು ಹಾಕಿ ಸದೃಢ, ಶಕ್ತಿಶಾಲಿ ಹಾಗೂ ಬೆಳೆಯುತ್ತಿರುವ ಜಾಗತಿಕ ಆರ್ಥಿಕ ಶಕ್ತಿಯೊಂದಿಗೆ ಕೈಜೋಡಿಸುವಂಥ ಸಮರ್ಥ ಬ್ಯಾಂಕಿಂಗ್ ವ್ಯವಸ್ಥೆಯನ್ನಾಗಿ ನಾವು ಬದಲಾಯಿಸಬೇಕಿದೆ. ಅದಕ್ಕಾಗಿ ಯೋಜನೆ ಸಿದ್ಧಪಡಿಸುತ್ತೇವೆ ಎಂದು ಸಚಿವ ಜೇಟ್ಲಿ ಪತ್ರಕರ್ತರಿಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್‌ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.