ಎಚ್-1 ಬಿ ವೀಸಾ ಅಮಾನತು? ಅಮೆರಿಕದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಹಿನ್ನೆಲೆಯಲ್ಲಿ ಈ ಕ್ರಮ
Team Udayavani, Jun 13, 2020, 7:30 AM IST
ಅ.1ರಿಂದ ಪರಿಷ್ಕೃತ ನಿರ್ಧಾರ: ಮಾಧ್ಯಮ ವರದಿಯಲ್ಲಿ ಉಲ್ಲೇಖ
ಸದ್ಯ ಅಮೆರಿಕದಲ್ಲಿ ನೆಲೆಸಿರುವ ವೀಸಾ ಹೊಂದಿರುವವರಿಗೆ ಸಮಸ್ಯೆ ಇಲ್ಲ
ವಾಷಿಂಗ್ಟನ್: ಕೋವಿಡ್ ಹಿನ್ನೆಲೆಯಲ್ಲಿ ಅಮೆರಿಕದಲ್ಲಿ ಭಾರೀ ನಿರುದ್ಯೋಗ ಸಮಸ್ಯೆ ಎದುರಾಗಿದೆ. ಹೀಗಾಗಿ, ಭಾರತೀಯ ಐಟಿ ವೃತ್ತಿಪರರಲ್ಲಿ ಹೆಚ್ಚು ಬೇಡಿಕೆ ಇರುವ ಎಚ್-1ಬಿ ಸೇರಿದಂತೆ ಹಲವಾರು ಉದ್ಯೋಗ ಸಂಬಂಧಿ ವೀಸಾಗಳನ್ನು ಅಮಾನತು ಗೊಳಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚಿಂತನೆ ನಡೆಸಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.
ಅಕ್ಟೋಬರ್ 1ರಿಂದ ಪ್ರಸ್ತಾವಿತ ಶಿಫಾರಸಗಳು ಜಾರಿಗೆ ಬರುವ ಸಾಧ್ಯತೆಗಳಿವೆ. ಇದರ ಜತೆಗೆ ನಿಯ ಮಗಳನ್ನು ಮುಂದಿನ ಹಣಕಾಸು ವರ್ಷಕ್ಕೂ ಅಮೆರಿಕ ಸರಕಾರ ವಿಸ್ತರಿಸುವ ಸಾಧ್ಯತೆಗಳೂ ಬರಬಹುದು ಎಂದು ಎಂದು ಅಧಿಕಾರಿಯೊಬ್ಬರ ಹೇಳಿಕೆ ಉಲ್ಲೇಖೀಸಿ “ದಿ ವಾಲ್ ಸ್ಟ್ರೀಟ್ ಜರ್ನಲ್’ ವರದಿ ಮಾಡಿದೆ. ಅಮಾನತು ತೆರವುಗೊಳಿಸುವವರೆಗೂ ಕೆಲಸ ಕ್ಕಾಗಿ ವಿದೇಶದಿಂದ ಯಾವುದೇ ಎಚ್-1ಬಿ ವೀಸಾದಾರರು ಬಾರದಂತೆ ತಡೆಯಬಹುದು. ಆದರೆ, ಈಗಾಗಲೇ ಅಮೆರಿಕದಲ್ಲಿ ನೆಲೆಸಿರುವ ವೀಸಾದಾರರಿಗೆ ಇದರಿಂದ ಪರಿಣಾಮ ಬೀರುವ ಸಾಧ್ಯತೆ ಇಲ್ಲ. ಎಚ್-1ಬಿ ವೀಸಾಗಳ ಜತೆಗೆ, ಅಲ್ಪಾವಧಿಯ ಪರಿಣಿತ ಕೆಲಸಗಾರರಿಗೆ ನೀಡ ಲಾಗುವ ಎಚ್-2ಬಿ, ಅಲ್ಪಾವಧಿಯ ಕೆಲಸಗಾ ರರಿಗೆ ನೀಡಲಾಗುವ ಜೆ-1, ಆಂತರಿಕ ಕಂಪನಿ ವರ್ಗಾವಣೆಗಾಗಿ ನೀಡಲಾಗುವ ಎಲ್-1 ವೀಸಾ ಗಳಿಗೂ ಈ ಅಮಾನತು ನಿಯಮ ಅನ್ವಯವಾ ಗಲಿದೆ ಎಂದು ವರದಿ ಹೇಳಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶ್ವೇತಭವನದ ವಕ್ತಾರ ಹೊಗನ್ ಗಿಡ್ಲಿ, ಅಮೆರಿಕದ ಕಾರ್ಮಿಕರ ಹಿತ ಕಾಯಲು ಅಗತ್ಯವಿರುವ ಹಲವು ಪ್ರಸ್ತಾವಗಳನ್ನು ಪರಿಗಣಿಸಲಾಗುತ್ತಿದೆ. ಆದರೆ, ಈವರೆಗೂ ಯಾವುದೇ ಅಂತಿಮ ನಿರ್ಧಾರವನ್ನು ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ. ಈ ಮಧ್ಯೆ, ಯುಎಸ್ ಚೇಂಬರ್ಸ್ ಆಫ್ ಕಾಮರ್ಸ್‌ನ ಸಿಇಒ ಥಾಮಸ್ ಡೊನೊಹ್ಯೂ ಅವರು ಟ್ರಂಪ್‌ಗೆ ಪತ್ರ ಬರೆದು, ಈ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
ಟ್ರಂಪ್ ವಿರುದ್ಧ ಬಿಡೆನ್ ವಾಗ್ಧಾಳಿ
ಅಮೆರಿಕ ಅಧ್ಯಕ್ಷ ಪಟ್ಟದ ರೇಸ್‌ನಲ್ಲಿರುವ ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅವರ ಎದುರಾಳಿ, ಡೆಮಾಕ್ರಟಿಕ್ ಪಕ್ಷದ ನಾಯಕ ಜೋ ಬಿಡೆನ್, ನಡುವಿನ ಬಹಿರಂಗ ವಾಗ್ಧಾಳಿ ಮತ್ತಷ್ಟು ತಾರಕಕ್ಕೇರಿದೆ. ಈ ಬಾರಿ ಟ್ರಂಪ್ ಅವರು ಮೋಸದಾಟಗಳಿಂದ ಚುನಾ ವಣೆ ಗೆಲ್ಲಬಹುದು ಎಂದು ಬಿಡೆನ್ ಅನುಮಾನವನ್ನು ವ್ಯಕ್ತ ಪಡಿ ಸಿದ್ದಾರೆ. ಜೊತೆಗೆ, ಟ್ರಂಪ್ ವೈಟ್‌ಹೌಸ್ ಬಿಡಲು ನಿರಾಕರಿಸಿದರೆ ಸೇನೆಯೇ ಅವರನ್ನು ಹೊರಹಾಕುತ್ತದೆ ಎಂದು ಲೇವಡಿ ಮಾಡಿದ್ದಾರೆ. ಬಿಡೆನ್‌ವರ ಟೀಕೆಯನ್ನು ಸಾರಾಸಗಟಾಗಿ ತಳ್ಳಿಹಾಕಿರುವ ಟ್ರಂಪ್ ಅವರ ಚುನಾವಣಾ ಪ್ರಚಾರದ ನಿರ್ದೇಶಕ ಟಿಮ್ ಮುರ್ಟಾಫ್, “”ಇಂಥ ಅನುಮಾನಗಳು ಆಧಾರ ರಹಿತ. ಜನರಿಗೆ ಚುನಾವಣೆಗಳ ಮೇಲೆ ಅಪನಂಬಿಕೆ ಬರುವಂತೆ ಬಿಡೆನ್ ಮಾತನಾಡಿರುವುದು ಸರಿಯಲ್ಲ” ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
Syria ಸರ್ವಾಧಿಕಾರಿ ಬಶರ್ ಅಸಾದ್ ಪತ್ನಿಗೆ ಲ್ಯುಕೇಮಿಯಾ: ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್‌ಪೋರ್ಟ್; ಕೇಸು ದಾಖಲು
Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.