ನ್ಯಾಯಾಂಗ ಸುಧಾರಣೆ ಖಂಡಿಸಿ ಇಸ್ರೇಲ್‌ನಲ್ಲಿ ಹೋರಾಟ ತೀವ್ರ
Team Udayavani, Mar 13, 2023, 7:12 AM IST
ಜೆರುಸಲೇಂ: ಇಸ್ರೇಲ್‌ನಲ್ಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ನೇತೃತ್ವದ ಸಮ್ಮಿಶ್ರ ಸರ್ಕಾರ ಭಾರೀ ನ್ಯಾಯಾಂಗೀಯ ಸುಧಾರಣೆಗಳನ್ನು ಮಾಡಲು ಉದ್ದೇಶಿಸಿದೆ. ಇದರ ವಿರುದ್ಧ ತೀವ್ರಗೊಂಡಿರುವ ಜನರ ಹೋರಾಟ, ಸತತ 10ನೇ ವಾರ ಪೂರೈಸಿದೆ. ದೇಶಾದ್ಯಂತ ಜನ ಶಾಂತಿಯುತವಾಗಿ ಹೋರಾಟ ಮಾಡುತ್ತಿದ್ದಾರೆ. ಶನಿವಾರ ಪ್ರತಿಭಟನೆ ತೀವ್ರಗೊಂಡಿದ್ದು, ಟೆಲ್ ಅವಿವ್‌ನಲ್ಲಿ ಇದೇ ಮೊದಲ ಬಾರಿಗೆ 1 ಲಕ್ಷಕ್ಕೂ ಅಧಿಕ ಮಂದಿ ಪ್ರತಿಭಟನೆ ನಡೆಸಿದ್ದಾರೆ. ಈ ಪೈಕಿ ಮೂವರನ್ನು ವಶಕ್ಕೆ ಪಡೆಯಲಾಗಿದೆ.
ಈ ವಾರ ನೆತನ್ಯಾಹು ನೇತೃತ್ವದ ಸರ್ಕಾರ ಸಂಸತ್ತಿನಲ್ಲಿ ನ್ಯಾಯಾಂಗ ಸುಧಾರಣೆಗಳಿಗೆ ಚಾಲನೆ ನೀಡಲಿದೆ. ಈ ಸುಧಾರಣೆಗಳು ಇಸ್ರೇಲ್‌ನ ಪ್ರಜಾಪ್ರಭುತ್ವವನ್ನು ತೀವ್ರವಾಗಿ ದುರ್ಬಲಗೊಳಿಸಲಿದೆ ಎನ್ನುವುದು ಜನರ ಆತಂಕ. ಆದ್ದರಿಂದ ಈ ಬಗ್ಗೆ ಚರ್ಚೆ ನಡೆಯಬೇಕೆಂದು ಜನರು ಆಗ್ರಹಿಸುತ್ತಿದ್ದಾರೆ. ಆದರೆ ಸರ್ಕಾರ ಮಾತ್ರ ಏನಾದರಾಗಲೀ ಸುಧಾರಣೆ ಶತಃಸಿದ್ಧ ಎಂದು ಪಟ್ಟುಹಿಡಿದು ಕುಳಿತಿದೆ.
ಏನೇನು ಸುಧಾರಣೆಗಳು?:
ಜನರಿಗೆ ಆತಂಕ ಮೂಡಿಸಿರುವುದು ಎರಡು ಮುಖ್ಯ ಸುಧಾರಣೆಗಳು. ನ್ಯಾಯಾಧೀಶರ ಆಯ್ಕೆ ಸಮಿತಿಯಲ್ಲಿ ಸರ್ಕಾರಕ್ಕೆ ಇನ್ನು ಗರಿಷ್ಠ ಹಿಡಿತವಿರುತ್ತದೆ. ಹಾಗೆಯೇ ಇಸ್ರೇಲ್‌ನ ಮೂಲಭೂತ ಕಾನೂನುಗಳಿಗೆ ಮಾಡುವ ಯಾವುದೇ ತಿದ್ದುಪಡಿಯನ್ನು ರದ್ದುಪಡಿಸುವ ಅಧಿಕಾರ ಇನ್ನು ಅಲ್ಲಿನ ಸರ್ವೋಚ್ಚ ಪೀಠಕ್ಕೆ ಇರುವುದಿಲ್ಲ. ಇದನ್ನು ಜಾರಿ ಮಾಡುವುದಕ್ಕೆ ನೆತನ್ಯಾಹು ಸರ್ಕಾರ ಹೊರಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
MUST WATCH
ಹೊಸ ಸೇರ್ಪಡೆ
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.