ಪಾಕಿಸ್ತಾನದಲ್ಲಿ ಹಿಂದೂ ಸಮುದಾಯದ ಬಾಲಕಿಯ ಕಿಡ್ನ್ಯಾಪ್
15 ದಿನಗಳಲ್ಲಿ ಇದು ನಾಲ್ಕನೇ ಘಟನೆ
Team Udayavani, Oct 12, 2022, 7:25 AM IST
ಇಸ್ಲಾಮಾಬಾದ್: ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ರಾಜಧಾನಿ ಹೈದರಾಬಾದ್‌ನಲ್ಲಿ ಹಿಂದೂ ಸಮುದಾಯದ ಯುವತಿಯನ್ನು ಅಪಹರಿಸಲಾಗಿದೆ.
15 ದಿನಗಳ ಅವಧಿಯಲ್ಲಿ ಇದು 4ನೇ ಘಟನೆ. ಪುತ್ರಿ ಮನೆಗೆ ವಾಪಸಾಗುತ್ತಿದ್ದಾಗ ಕಿಡಿಗೇಡಿಗಳು ಅಪಹರಿಸಿದ್ದಾರೆ ಎಂದು ಆಕೆಯ ತಂದೆ ಚಂದ್ರ ಮೆಹ್ರಾಜ್ ಹೇಳಿದ್ದಾರೆ. ಪೊಲೀಸರಿಗೆ ದೂರು ಸಲ್ಲಿಸಲಾಗಿದ್ದು, ಇದುವರೆಗೆ ಆಕೆಯ ಬಗ್ಗೆ ಸುಳಿವು ಸಿಕ್ಕಿಲ್ಲ.
ಸೆ.24ರಂದು ಸಿಂಧ್ ಪ್ರಾಂತ್ಯದ ಮಿರ್‌ಪುರ್‌ಕಾಶ್‌ನಲ್ಲಿ 14ರ ಬಾಲಕಿಯನ್ನು ಅಪಹರಿಸಲಾಗಿತ್ತು. ಮತ್ತೊಂದು ಪ್ರಕರಣದಲ್ಲಿ ರವಿ ಕುರ್ಮಿ ಎಂಬಾತನ ಪತ್ನಿಯನ್ನು ಅಪಹರಿಸಿ ಬಲವಂತವಾಗಿ ಮತಾಂತರಗೊಳಿಸಿ, ಮುಸ್ಲಿಂ ಸಮುದಾಯದ ವ್ಯಕ್ತಿಗೆ ಮದುವೆ ಮಾಡಿಸಲಾಗಿತ್ತು. ಪೊಲೀಸರ ಪ್ರಕಾರ ರವಿ ಕುರ್ಮಿಯ ಪತ್ನಿಯೇ ಸ್ವಇಚ್ಛೆಯಿಂದ ಮತಾಂತರಗೊಂಡಿದ್ದಾಳೆ.
ಇತ್ತೀಚಿನ ದಿನಗಳಲ್ಲಿ ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಹಿಂದೂ ಸಮುದಾಯದವರ ಮೇಲೆ ದೌರ್ಜನ್ಯ ಹೆಚ್ಚುತ್ತಿದೆ. ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಪಾಕಿಸ್ತಾನದ ಸಂಸತ್‌ನಲ್ಲಿ ಮಂಡಿಸಲು ಉದ್ದೇಶಿಸಿದ್ದ ಬಲವಂತದ ಮತಾಂತರ ವಿಧೇಯಕಕ್ಕೆ ಅಲ್ಲಿನ ಸಂಸತ್ ಸಮಿತಿ ಆಕ್ಷೇಪಿಸಿ, ತಿರಸ್ಕರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Mangalore: ಅಡ್ಯಾರ್ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ
Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.