Temple: ವಾಣಿಜ್ಯ ಕಟ್ಟಡ ನಿರ್ಮಾಣಕ್ಕೆ ಐತಿಹಾಸಿಕ ಹಿಂದೂ ದೇವಾಲಯವನ್ನೇ ನೆಲಸಮ ಮಾಡಿದ ಪಾಕ್
Team Udayavani, Apr 13, 2024, 8:55 AM IST
ಇಸ್ಲಾಮಾಬಾದ್: ಪಾಕಿಸ್ತಾನದ ಅಫ್ಘಾನಿಸ್ತಾನದ ಗಡಿಯಲ್ಲಿರುವ ಐತಿಹಾಸಿಕ ಹಿಂದೂ ದೇವಾಲಯವನ್ನು ಪಾಕ್ ಕೆಡವಿದೆ ಎಂದು ಮೂಲಗಳು ತಿಳಿಸಿವೆ.
ಮಾಹಿತಿ ಪ್ರಕಾರ ಹಿಂದೂ ದೇವಾಲಯವನ್ನು ಕೆಡವಿದ ಜಾಗದಲ್ಲಿ ವಾಣಿಜ್ಯ ಮಳಿಗೆ ನಿರ್ಮಾಣ ಕಾರ್ಯ ನಡೆಸಲಾಗುತ್ತಿದೆ ಎಂದು ಹೇಳಲಾಗಿದೆ. ವಾಸ್ತವವಾಗಿ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಈ ಐತಿಹಾಸಿಕ ದೇವಾಲಯವಿದೆ. 1947ರಲ್ಲಿ ಭಾರತ-ಪಾಕಿಸ್ತಾನ ವಿಭಜನೆಯಾದ ಬಳಿಕ ಈ ದೇವಸ್ಥಾನವನ್ನು ಮುಚ್ಚಲಾಗಿತ್ತು ಇದೀಗ ಅದೇ ಜಾಗದಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಾಣ ಮಾಡಲು ಪಾಕ್ ಸರಕಾರ ಮುಂದಾಗಿದೆ ಅಲ್ಲದೆ ಕಳೆದ ಹದಿನೈದು ದಿನಗಳಿಂದ ಕಟ್ಟಡ ಕಾಮಗಾರಿ ಕೂಡ ನಡೆಯುತ್ತಿದೆ ಎಂದು ಹೇಳಲಾಗಿದೆ.
ಮತ್ತೊಂದೆಡೆ, ಇಲ್ಲಿ ಯಾವುದೇ ಹಿಂದೂ ದೇವಾಲಯ ಇರಲಿಲ್ಲ ಎಂದು ಆಡಳಿತ ಅಧಿಕಾರಿಗಳು ಪ್ರತಿಪಾದಿಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿ ಲಾಂಡಿ ಕೋಟಾಲ್‌ನಲ್ಲಿರುವ ಪತ್ರಕರ್ತ ಇಬ್ರಾಹಿಂ ಶಿನ್ವಾರಿ ಅವರ ಹೇಳಿಕೆಯಂತೆ ಹಿಂದೂ ದೇವಾಲಯವು ಲಾಂಡಿ ಕೋಟಾಲ್ ಮಾರುಕಟ್ಟೆಯ ಮಧ್ಯಭಾಗದಲ್ಲಿತ್ತು ಮತ್ತೆ ಇದು 1947 ರಲ್ಲಿ ಮುಚ್ಚಲಾಯಿತು ಆ ಬಳಿಕ ಈ ದೇವಾಲಯ ಹಾಗೆಯೆ ಇತ್ತು 1992 ರಲ್ಲಿ ಅಯೋಧ್ಯೆಯಲ್ಲಿನ ಬಾಬರಿ ಮಸೀದಿಯನ್ನು ಧ್ವಂಸಗೊಳಿಸಿದ ನಂತರ ಇಲ್ಲಿನ ಕುಟುಂಬಗಳು ಭಾರತಕ್ಕೆ ವಲಸೆ ಬಂದರು ಆ ಬಳಿಕ ದೇವಾಲಯವನ್ನು ಕೆಡವಿ ಹಾಕಲಾಯಿತು ಇದೀಗ ಈ ಜಾಗದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದೆ, ಅಷ್ಟುಮಾತ್ರವಲ್ಲದೆ ಬಾಲ್ಯದಲ್ಲಿ ದೇವಸ್ಥಾನದ ಬಗ್ಗೆ ಅನೇಕ ಕಥೆಗಳನ್ನು ತಮ್ಮ ಪೂರ್ವಜರಿಂದ ಕೇಳಿದ್ದೆ ಎಂದು ನೆನಪಿಸಿಕೊಂಡ ಶಿನ್ವಾರಿ ಲಂಡಿ ಕೋಟಾಲ್ ನಲ್ಲಿ ಖೈಬರ್ ಟೆಂಪಲ್ ಎಂಬ ಹೆಸರಿನ ದೇವಸ್ಥಾನವಿತ್ತು ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ’ ಎಂದು ಹೇಳಿದ್ದಾರೆ.
ಮುಸ್ಲಿಮೇತರರಿಗೆ ಧಾರ್ಮಿಕ ಪ್ರಾಮುಖ್ಯತೆಯ ಐತಿಹಾಸಿಕ ಕಟ್ಟಡಗಳ ರಕ್ಷಣೆ ಮತ್ತು ಪುನರ್ವಸತಿಯನ್ನು ಖಚಿತಪಡಿಸಿಕೊಳ್ಳುವುದು ಜಿಲ್ಲಾಡಳಿತ ಮತ್ತು ಸಂಬಂಧಿತ ಸರ್ಕಾರಿ ಇಲಾಖೆಗಳ ಜವಾಬ್ದಾರಿಯಾಗಿದೆ ಎಂದು ಪಾಕಿಸ್ತಾನ್ ಹಿಂದೂ ಮಂದಿರ ನಿರ್ವಹಣಾ ಸಮಿತಿಯ ಹರೂನ್ ಸರಬ್ದಿಯಾಲ್ ಹೇಳಿದ್ದಾರೆ.
ಇದನ್ನೂ ಓದಿ: Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ, ನಿಗದಿತ ಕೆಲಸ ಮುಕ್ತಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್ ಕೋರ್ಟ್ ಆದೇಶ
New Virus: ಚೀನದಲ್ಲಿ ಹೊಸ ವೈರಸ್ ಹಬ್ಬುತ್ತಿರುವ ಬಗ್ಗೆ ವದಂತಿ!
Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!
Thumbay Group; ಶಾರ್ಜಾದಲ್ಲಿ ಮೊದಲ ಖಾಸಗಿ ಮನೋವೈದ್ಯಕೀಯ ಪುನರ್ ವಸತಿ ಆಸ್ಪತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.