HMPV; ಚಳಿಗಾಲದಲ್ಲಿ ಸೋಂಕು ಸಾಮಾನ್ಯ: ಗಾಬರಿ ಬೇಡ ಎಂದ ಚೀನ
Team Udayavani, Jan 5, 2025, 6:50 AM IST
ಬೀಜಿಂಗ್: ಕೋವಿಡ್ ರೀತಿಯ ಹ್ಯೂಮನ್ ಮೆಟಾ ನ್ಯೂಮೋ ವೈರಸ್ (ಎಚ್ಎಂಪಿವಿ) ಸೋಂಕು ತ್ವರಿತವಾಗಿ ಹರಡುತ್ತಿದೆ ಎಂಬ ಸುದ್ದಿಗಳನ್ನು ಅಲ್ಲಗಳೆ ದಿರುವ ಚೀನ ಸರಕಾರವು, ಇಂಥ ಉಸಿರಾಟ ಸಂಬಂಧಿ ಸೋಂಕು ಚಳಿಗಾಲದಲ್ಲಿ ಸಾಮಾನ್ಯ. ಇದು ಹೊಸದೇನೂ ಅಲ್ಲ. ಅಲ್ಲದೆ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಅದರ ತೀವ್ರತೆಯೂ ಕಡಿಮೆಯಿದೆ ಎಂದು ಹೇಳಿದೆ.
ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಚೀನದ ವಿದೇಶಾಂಗ ಸಚಿವಾಲಯದ ವಕ್ತಾರೆ ಮಾವೋ ನಿಂಗ್, ವಿದೇಶಿಯರು ಪ್ರವಾಸ ಕೈಗೊಳ್ಳಲು ಚೀನ ಸುರಕ್ಷಿತವಾಗಿದೆ. ಯಾರೂ ಆತಂಕ ಪಡಬೇಕಾಗಿಲ್ಲ ಎಂದಿದ್ದಾರೆ. ಚಳಿಗಾಲದಲ್ಲಿ ಉಸಿರಾಟ ಸಂಬಂಧಿ ಕಾಯಿಲೆಗಳ ಬಗ್ಗೆ ಮುಂಜಾಗ್ರತೆ ಕೈಗೊಳ್ಳುವ ಸಂಬಂಧ ಚೀನದ ರಾಷ್ಟ್ರೀಯ ರೋಗ ನಿಯಂತ್ರಣ ಮತ್ತು ತಡೆ ಆಡಳಿತ ನೀಡಿರುವ ಸಲಹೆಗಳನ್ನು ಇದೇ ವೇಳೆ ಉಲ್ಲೇಖೀಸಿದರು.
ಕೆಲವು ದಿನಗಳಿಂದ ಚೀನದಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಆಸ್ಪತ್ರೆಗಳು ತುಂಬಿ ತುಳುಕುತ್ತಿವೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಚೀನ ಸರಕಾರ ಈ ಸ್ಪಷ್ಟನೆ ನೀಡಿದೆ. ವಿಶೇಷವಾಗಿ ಭಾರತ ಮತ್ತು ಇಂಡೋನೇಷ್ಯಾಗಳಲ್ಲಿ ಈ ಬಗ್ಗೆ ವ್ಯಾಪಕ ಸುದ್ದಿ ಹರಡಿತ್ತು. ಈ ಕುರಿತು ವಿಶ್ವ ಆರೋಗ್ಯ ಸಂಸ್ಥೆ ಇನ್ನಷ್ಟೇ ಹೇಳಿಕೆಯನ್ನು ನೀಡಬೇಕಿದೆ.
ಅಂತಾರಾಷ್ಟ್ರೀಯ ಸಮುದಾಯ ಕೂಡ ನಮ್ಮ ದೇಶದಲ್ಲಿ ಉಂಟಾಗಿರುವ ಆರೋಗ್ಯ ಸಮಸ್ಯೆಯಲ್ಲಿ ಚಿಂತೆ ಹೊಂದಬೇಕಾದ ಅಗತ್ಯ ಇಲ್ಲ ಎಂದು ಚೀನ ಸರಕಾರ ಹೇಳಿದೆ. ನಿರಾತಂಕವಾಗಿ ವಿವಿಧ ಉದ್ದೇಶಗಳಿಗೆ ನಮ್ಮ ದೇಶಕ್ಕೆ ಆಗಮಿಸಬಹುದು ಎಂದು ಚೀನದ ವಿದೇಶಾಂಗ ಇಲಾಖೆ ವಕ್ತಾರರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.