ಹಾಂಕಾಂಗ್: 200 ಮಂದಿ ಬಂಧನ
Team Udayavani, Jul 2, 2020, 6:31 AM IST
ಹಾಂಕಾಂಗ್: ಹಾಂಕಾಂಗ್‌ನಲ್ಲಿ ಜುಲೈ 1ರಿಂದ ನೂತನ ರಾಷ್ಟ್ರೀಯ ಭದ್ರತಾ ಕಾನೂನು ಜಾರಿಯಾಗಿದ್ದು, ಮೊದಲ ದಿನವೇ ಸ್ಥಳೀಯರಿಂದ ಭಾರೀ ವಿರೋಧ ವ್ಯಕ್ತವಾಗಿದೆ.
ಕಾನೂನು ವಿರೋಧಿಸಿ ಸಾವಿರಾರು ಸಂಖ್ಯೆಯಲ್ಲಿ ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.
ಪ್ರತಿಭಟನಕಾರರನ್ನು ನಿಯಂತ್ರಿಸಲು ಪೊಲೀಸರು ಜಲಫಿರಂಗಿ ಹಾಗೂ ಅಶ್ರುವಾಯು ಸಿಡಿಸಿದರು.
200ಕ್ಕೂ ಹೆಚ್ಚು ಪ್ರತಿಭಟನಕಾರರನ್ನು ಬಂಧಿಸಲಾಗಿದೆ.
ಹಾಂಕಾಂಗ್ ರಾಷ್ಟ್ರೀಯ ಭದ್ರತಾ ಕಾನೂನನ್ನು ಚೀನದ ಉನ್ನತ ಶಾಸಕಾಂಗ, ರಾಷ್ಟ್ರೀಯ ಪೀಪಲ್ಸ್ ಕಾಂಗ್ರೆಸ್‌ನ ಸ್ಥಾಯಿ ಸಮಿತಿ ಮಂಗಳವಾರ ಸರ್ವಾನುಮತದಿಂದ ಅಂಗೀಕರಿಸಿದ್ದು, ಚೀನ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಸಹಿ ಹಾಕಿದ್ದಾರೆ.
ಈ ಮಧ್ಯೆ ಪ್ರತಿಭಟನೆಗಳು ಆರಂಭವಾಗುವುದಕ್ಕೂ ಮೊದಲು ಮಾತನಾಡಿದ ಹಾಂಕಾಂಗ್‌ನ ಮುಖ್ಯ ಕಾರ್ಯನಿರ್ವಾಹಕ ಕ್ಯಾರಿಲ್ಯಾಮ್ ಹಾಂಕಾಂಗ್‌ನ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಈ ನಿರ್ಧಾರ ಅಗತ್ಯ ಹಾಗೂ ಸಮಯೋಚಿತ ಎಂದರು.
ಇದೇ ವೇಳೆ, ನೂತನ ಕಾನೂನನ್ನು ಹಲವು ಪಾಶ್ಚಿಮಾತ್ಯ ರಾಷ್ಟ್ರಗಳ ನಾಯಕರು, ಮಾನವ ಹಕ್ಕುಗಳ ಹೋರಾಟಗಾರರು ಖಂಡಿಸಿದ್ದಾರೆ. ಅಮೆರಿಕದ ವಿದೇಶಾಂಗ ಸಚಿವ ಮೈಕ್ ಪೊಂಪಿಯೋ ಮಾತನಾಡಿ, ಹಾಂಕಾಂಗ್ ಜನತೆಗೆ ಇದು ಅತ್ಯಂತ ದುಃಖದ ದಿನ ಎಂದಿದ್ದಾರೆ. ಅಲ್ಲದೆ ಸ್ಥಳೀಯ ಜನರ ಮೇಲೆ ದೌರ್ಜನ್ಯ ನಡೆಸುವುದರ ವಿರುದ್ಧ ಚೀನಕ್ಕೆ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.