ಲಂಡನ್ ನಲ್ಲಿ 27 ಅಂತಸ್ತಿನ ಕಟ್ಟಡಕ್ಕೆ ಭಾರೀ ಬೆಂಕಿ, ನೂರಾರು ಸಾವು?
Team Udayavani, Jun 14, 2017, 10:30 AM IST
ಲಂಡನ್: 27 ಅಂತಸ್ತಿನ ಬಹುಮಹಡಿ ಕಟ್ಟಡದಲ್ಲಿ ಭಾರೀ ಅಗ್ನಿ ಅನಾಹುತ ಸಂಭವಿಸಿದ್ದು, ಹಲವಾರು ಮಂದಿ ಅಪಾಯದಲ್ಲಿ ಸಿಲುಕಿರುವ ಘಟನೆ ಪಶ್ಚಿಮ ಲಂಡನ್ ಲ್ಯಾಟಿಮಾರ್ ನಲ್ಲಿ ಬುಧವಾರ ಬೆಳಗ್ಗೆ ನಸುಕಿನ ವೇಳೆ ನಡೆದಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ. ಘಟನೆಯಲ್ಲಿ ಆರು ಮಂದಿ ಸಜೀವವಾಗಿ ದಹನವಾಗಿದ್ದರೆ, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದ್ದಿರುವುದಾಗಿ ವರದಿ ಹೇಳಿದೆ.
ಕಟ್ಟಡದ ಮೇಲ್ಮಹಡಿಯಲ್ಲಿ ವಾಸವಾಗಿರುವವರು ರಕ್ಷಣೆಗಾಗಿ ಚೀರಾಡುತ್ತಿರುವ ಶಬ್ದ ಕೇಳಿಸುತ್ತಿರುವುದಾಗಿ ಪ್ರತ್ಯಕ್ಷದರ್ಶಿಗಳು ಮಾಧ್ಯಮಕ್ಕೆ ತಿಳಿಸಿದ್ದು, 200ಕ್ಕೂ ಅಧಿಕ ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ಸುಮಾರು 127 ಫ್ಲ್ಯಾಟ್ಸ್ ಈ ಕಟ್ಟಡದಲ್ಲಿ ಇದ್ದಿರುವುದಾಗಿ ವರದಿ ವಿವರಿಸಿದೆ.
ಬಹುಮಹಡಿ ಕಟ್ಟಡದ ಒಂದು ಭಾಗದಲ್ಲಿ ಬೆಂಕಿ ಹೊತ್ತಿ ಉರಿಯುತ್ತಿರುವ ದೃಶ್ಯದ ಫೋಟೋವನ್ನು ಅಗ್ನಿಶಾಮಕ ದಳ ಬಿಡುಗಡೆ ಮಾಡಿದೆ. ಫ್ಲ್ಯಾಟ್ಸ್ ನೊಳಗೆ ಸಿಲುಕಿಕೊಂಡಿರುವವರನ್ನು ರಕ್ಷಿಸುವ ಕಾರ್ಯ ಮುಂದುವರಿದಿದೆ. ಘಟನೆಯಲ್ಲಿ ಹಲವಾರು ಮಂದಿ ಸಾವನ್ನಪ್ಪಿದ್ದಾರೆ. ಅಧಿಕೃತವಾಗಿ ಆರು ಮಂದಿ ದೇಹ ಸಿಕ್ಕಿದೆ. ಆದರೆ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಲಿದೆ. ಹಲವು ಮಂದಿ ಫ್ಲ್ಯಾಟ್ ನಲ್ಲಿ ಸಿಲುಕಿಕೊಂಡಿರುವುದಾಗಿ ಪೊಲೀಸ್ ಕಮಾಂಡರ್ ಸ್ಟುವರ್ಟ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್‌ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.