ಲಂಡನ್ ನಲ್ಲಿ ಹೈದ್ರಾಬಾದ್ ಮೂಲದ ವ್ಯಕ್ತಿಯ ಇರಿದು ಹತ್ಯೆ
Team Udayavani, May 10, 2019, 10:53 AM IST
ಲಂಡನ್: ನಗರದ ಸೂಪರ್ ಮಾರ್ಕೆಟ್‌ವೊಂದರಲ್ಲಿ ಉದ್ಯೋಗಿಯಾಗಿದ್ದ ಹೈದ್ರಾಬಾದ್ ಮೂಲದ ವ್ಯಕ್ತಿಯೊಬ್ಬನನ್ನು ಇರಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಗುರುವಾರ ನಡೆದಿದೆ.
ಮೊಹಮದ್ ನದೀಮುದ್ದೀನ್ ಹತ್ಯೆಗೀಡಾಗಿದ್ದು, ಟೆಸ್ಕೋ ಸೂಪರ್ ಮಾರ್ಕೆಟ್‌ನ ಮಾಲ್‌ವೊಂದರಲ್ಲಿ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದರು.
ನದೀಮುದ್ದೀನ್ ಅವರ ಪತ್ನಿ ವೈದ್ಯಕೀಯ ಪದವಿ ಮುಗಿಸಿ ತಿಂಗಳ ಹಿಂದಷ್ಟೇ ಲಂಡನ್‌ಗೆ ತೆರಳಿದ್ದರು ಎಂದು ತಿಳಿದು ಬಂದಿದೆ.
ಕಾರ್ ಪಾರ್ಕಿಂಗ್ ಪ್ರದೇಶದಲ್ಲಿ ನದೀಮುದ್ದಿನ್ ಶವವಾಗಿ ಪತ್ತೆಯಾಗಿದ್ದಾರೆ. ಪೊಲೀಸರು ಪರಿಶೀಲನೆ ನಡೆಸಿ ತನಿಖೆ ಮುಂದುವರಿಸಿದ್ದಾರೆ.
ನದೀಮುದ್ದೀನ್ ಕುಟುಂಬ ಸದಸ್ಯರು ವಿದೇಶಾಂಗ ಇಲಾಖೆಯನ್ನು ಸಂಪರ್ಕಿಸಿದ್ದಾರೆ. ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಸಂಪರ್ಕಿಸಿ ಲಂಡನ್‌ಗೆ ತೆರಳಲು ಅವಕಾಶ ಮಾಡಿಕೊಡುವಂತೆ ಕೇಳಿಕೊಂಡಿದ್ದಾರೆ.
ಎಲ್ಲಾ ಪ್ರಕ್ರಿಯೆಗಳು ಮುಗಿದು ನದೀಮುದ್ದೀನ್ ಅವರ ಶವ ಭಾರತಕ್ಕೆ ತರಲು ಹದಿನೈದು ದಿನಗಳು ಬೇಕಾಗಬಹದು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Australia: ಜಾಲತಾಣ ಬಳಕೆಗೆ ಕನಿಷ್ಠ 16 ವರ್ಷ ಮಿತಿ ನಿಗದಿ?
US: ಮೊದಲ ದಿನವೇ ಜಗತ್ತಿಗೆ ಟ್ರಂಪ್ “ಎನರ್ಜಿ’ ಶಾಕ್!
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.