Chicago: ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಯನ್ನು ಅಟ್ಟಾಡಿಸಿ ಹಲ್ಲೆ… ಸಹಾಯ ಕೋರಿದ ಪತ್ನಿ
Team Udayavani, Feb 7, 2024, 10:01 AM IST
ವಾಷಿಂಗ್ಟನ್: ಇತ್ತೀಚಿನ ದಿನಗಳಲ್ಲಿ ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸುವ ಘಟನೆಗಳು ಹೆಚ್ಚಾಗಿ ನಡೆಯುತ್ತಿವೆ ಅದರಂತೆ ಹೈದರಾಬಾದ್ ಮೂಲದ ವಿದ್ಯಾರ್ಥಿಯೋರ್ವನ ಮೇಲೆ ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿ ದೋಚಿದ ಘಟನೆ ಕಳೆದ ಭಾನುವಾರ ನಡೆದಿದೆ.
ಹೈದರಾಬಾದ್‌ನ ಲಂಗರ್ ಹೌಜ್ ಮೂಲದ ಸೈಯದ್ ಮಜಾಹಿರ್ ಅಲಿ ಅವರು ತಮ್ಮ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಲು ಯುನೈಟೆಡ್ ಸ್ಟೇಟ್ಸ್‌ನ ಇಂಡಿಯಾನಾ ವೆಸ್ಲಿಯನ್ ವಿಶ್ವವಿದ್ಯಾಲಯಕ್ಕೆ ದಾಖಲಾಗಿದ್ದರು ಈ ವೇಳೆ ತನ್ನ ಮನೆಗೆ ತೆರಳುವ ಸಂದರ್ಭ ಶಸ್ತ್ರಸಜ್ಜಿತ ನಾಲ್ವರು ದರೋಡೆಕೋರರು ವಿದ್ಯಾರ್ಥಿಯನ್ನು ಅಟ್ಟಾಡಿಸಿಕೊಂಡು ಬಂದು ಹಲ್ಲೆ ನಡೆಸಿ ಆತನ ಬಳಿಯಿದ್ದ ಮೊಬೈಲ್ ಫೋನ್ ಕಸಿದು ಪರಾರಿಯಾಗಿದ್ದಾರೆ.
ಫೆಬ್ರವರಿ ನಾಲ್ಕರಂದು ಸಂಜೆ ನಾಲ್ವರು ಶಸ್ತ್ರಸಜ್ಜಿತ ಕಳ್ಳರು ಅಮೆರಿಕದ ಚಿಕಾಗೋದಲ್ಲಿರುವ ಭಾರತೀಯ ವಿದ್ಯಾರ್ಥಿಯೊಬ್ಬರ ನಿವಾಸದ ಬಳಿ ದಾಳಿ ನಡೆಸಿದ ಪರಿಣಾಮ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದಾರೆ. ರಕ್ತಸಿಕ್ತ ವಿದ್ಯಾರ್ಥಿ ದೂರು ನೀಡುತ್ತಿರುವುದು ವಿಡಿಯೋದಲ್ಲಿ ಕಂಡು ಬಂದಿದೆ. ವೈರಲ್ ವಿಡಿಯೋದಲ್ಲಿ, ಕಳ್ಳರು ತನ್ನನ್ನು ಒದ್ದು ತನ್ನ ಫೋನ್ ಅನ್ನು ಕಿತ್ತುಕೊಂಡರು ಎಂದು ವಿದ್ಯಾರ್ಥಿ ಹೇಳಿದ್ದಾನೆ. ಈ ಘಟನೆಯು ಕಳವಳವನ್ನು ಹುಟ್ಟುಹಾಕಿದೆ.
ಸಹಾಯ ಕೋರಿದ ಪತ್ನಿ:
ಇತ್ತ ತನ್ನ ಪತಿಯಾ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ ವಿಚಾರ ಗೊತ್ತಾಗುತ್ತಿದ್ದಂತೆ ಕಳವಳ ವ್ಯಕ್ತಪಡಿಸಿದ ಸೈಯದ್ ಮಜಾಹಿರ್ ಅಲಿ ಪತ್ನಿ ಭಾರತದ ವಿದೇಶಾಂಗ ಸಚಿವರಿಗೆ ಪತ್ರ ಬರೆದು ತನ್ನ ಪತಿಗೆ ಸಹಾಯ ಮಾಡುವಂತೆ ಮನವಿ ಮಾಡಿದ್ದಾರೆ ಅಲ್ಲದೆ ಅವರ ಪತ್ನಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನು ಸಂಪರ್ಕಿಸಿ, ಅಮೆರಿಕಕ್ಕೆ ಪ್ರಯಾಣಿಸಲು ನೆರವು ಕೋರಿದ್ದಾರೆ.
ಚಿಕಾಗೋದಲ್ಲಿರುವ ಭಾರತೀಯ ದೂತಾವಾಸ ಮಂಗಳವಾರ ಅಲಿ ಮತ್ತು ಅವರ ಪತ್ನಿಯಾ ಜೊತೆಗೆ ಸಂಪರ್ಕದಲ್ಲಿದ್ದು ಕುಟುಂಬಕ್ಕೆ ಎಲ್ಲ ರೀತಿಯ ಸಹಾಯ ಮಾಡುವುದಾಗಿ ಭರವಸೆ ನೀಡಿದೆ.
ತಿಂಗಳ ಅಂತರದಲ್ಲಿ ನಾಲ್ವರು ಭಾರತೀಯರ ಹತ್ಯೆ
ಕಳೆದ ಒಂದು ತಿಂಗಳ ಅಂತರದಲ್ಲಿ ನಾಲ್ವರು ಭಾರತೀಯ ವಿದ್ಯಾರ್ಥಿಗಳನ್ನು ಹತ್ಯೆ ಮಾಡಲಾಗಿದೆ ಅಲ್ಲದೆ ಓರ್ವ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಲಾಗಿದ್ದು ಇದರಿಂದ ಭಾರತೀಯ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ಅಮರಿಕಾಕ್ಕೆ ಹೋಗಲು ಹಿಂದೆಮುಂದೆ ನೋಡುವ ಸ್ಥಿತಿ ನಿರ್ಮಾಣವಾಗಿದೆ.
ಇದನ್ನೂ ಓದಿ: MP: ಪಟಾಕಿ ಕಾರ್ಖಾನೆ ದುರಂತ: ಮಿತಿಗಿಂತ ಹೆಚ್ಚಿನ ಸ್ಪೋಟಕ ಸಂಗ್ರಹಿಸಲಾಗಿತ್ತು, ಮಾಲೀಕರ ಬಂಧನ
.@DrSJaishankar Sir, One Syed Mazahir Ali from Hyderabad, Telangana pursuing Masters in IT from Indiana Weslay University was robbed & attacked on 4th Feb by four persons in Chicago, Since this attack Syed Mazahir Ali is under mental shock and is in need of help.Ask… pic.twitter.com/Cf2jeMAvPw
— Amjed Ullah Khan MBT (@amjedmbt) February 6, 2024
Syeda Ruquiya Fatima wife of Syed Mazahir Ali appeals @DrSJaishankar for necessary help for her husband who was attacked in Chicago, USA. pic.twitter.com/kUi3tWsnaa
— Amjed Ullah Khan MBT (@amjedmbt) February 6, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…
ಗೋಕರ್ಣದ ಪ್ರಪ್ರಥಮ ತ್ಯಾಜ್ಯ ಸಂಸ್ಕರಣ ಘಟಕಕ್ಕೆ ಗ್ರಹಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.