Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Team Udayavani, Dec 19, 2024, 9:12 AM IST
ವಾಷಿಂಗ್ಟನ್: ಭಾರತವು ಅಮೆರಿಕದ ಉತ್ಪನ್ನಗಳ ಮೇಲೆ ಅತ್ಯಂತ ಹೆಚ್ಚಿನ ತೆರಿಗೆ ವಿಧಿಸುತ್ತಿದ್ದು ಅದಕ್ಕೆ ಅನುಗುಣವಾಗಿ ನಾವೂ ತೆರಿಗೆ ವಿಧಿಸುತ್ತೇವೆ ಎಂದು ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಹಾಕಿದ್ದಾರೆ.
ಭಾರತ, ಬ್ರೆಜಿಲ್ ಇತರ ರಾಷ್ಟ್ರಗಳು ಅಮೆರಿಕದ ಉತ್ಪನ್ನಗಳ ಮೇಲೆ ಹೆಚ್ಚಿನ ತೆರಿಗೆ ವಿಧಿಸುತ್ತಿವೆ. ಇದಕ್ಕೆ ಪ್ರತ್ಯುತ್ತರವಾಗಿ ಅವರು ನಮ್ಮ ಉತ್ಪನ್ನಗಳ ಮೇಲೆ ಎಷ್ಟು ತೆರಿಗೆ ವಿಧಿಸುತ್ತಾರೋ ಅಷ್ಟೇ ತೆರಿಗೆಯನ್ನು ನಾವೂ ಅವರ ಸರಕುಗಳ ಮೇಲೆ ವಿಧಿಸುತ್ತೇವೆ. ಈಗ ಅವರು ತೆರಿಗೆ ವಿಧಿಸುತ್ತಿದ್ದಾರೆ. ನಾವು ವಿಧಿಸುತ್ತಿಲ್ಲ ಅಷ್ಟೇ ಎಂದು ಹೇಳಿದರು. ಉದ್ದೇಶಿತ ಚೀನಾ ಜತೆಗೆ ವ್ಯಾಪಾರ ಒಪ್ಪಂದಕ್ಕೆ ಸಂಬಂಧಿಸಿದ ಪ್ರಶ್ನೆಗೆ ಟ್ರಂಪ್ ಈ ಪ್ರತಿಕ್ರಿಯೆ ನೀಡಿದ್ದಾರೆ. ತೆರಿಗೆ ವಿಚಾರದಲ್ಲಿ ಟ್ರಂಪ್ ಸತತವಾಗಿ ಭಾರತವನ್ನು ಟೀಕಿಸುತ್ತಿದ್ದು, ಅಮೆರಿಕದ ಕಾಗದ ಉತ್ಪನ್ನಗಳು, ಹರ್ಲೆ ಡೇವಿಡ್‌ಸನ್ ಬೈಕ್‌ಗಳ ಮೇಲಿನ ತೆರಿಗೆ ವಿಚಾರದಲ್ಲಿ ತೀವ್ರವಾಗಿ ಟೀಕಿಸಿದ್ದರು. ಅಮೆರಿಕದಿಂದ ಭಾರತ 2023-24ರಲ್ಲಿ 77.51 ಶತ ಕೋ ಟಿ ಡಾಲರ್ ಉತ್ಪನ್ನಗಳನ್ನು ರಫ್ತು ಮಾಡಿದೆ. 42.2 ಶತ ಕೋಟಿ ಡಾಲರ್ ಉತ್ಪನ್ನ ಆಮದು ಮಾಡಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
New York: ಅಮೆರಿಕದಲ್ಲಿ ಶೂಟೌಟ್: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.