Al-Qadir Trust ಪ್ರಕರಣ ‘ಇಮ್ರಾನ್ ಖಾನ್’ಗೆ ರಿಲೀಫ್; 2 ವಾರಗಳ ಜಾಮೀನು ನೀಡಿದ ಹೈಕೋರ್ಟ್
Team Udayavani, May 12, 2023, 5:55 PM IST
ಇಸ್ಲಾಮಾಬಾದ್: ಅಲ್-ಖಾದಿರ್ ಟ್ರಸ್ಟ್ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಇಸ್ಲಾಮಾಬಾದ್ ಹೈಕೋರ್ಟ್ ಶುಕ್ರವಾರ ಎರಡು ವಾರಗಳ ಜಾಮೀನು ನೀಡಿದೆ.
ಅಲ್-ಖಾದಿರ್ ಟ್ರಸ್ಟ್ ಪ್ರಕರಣದಲ್ಲಿ ಇಮ್ರಾನ್ ಖಾನ್ ಬಂಧನದ ಹಿನ್ನೆಲೆಯಲ್ಲಿ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ, ಲಾಹೋರ್ ಹಾಗೂ ಪೇಶಾವರಗಳಲ್ಲಿ ಇಮ್ರಾನ್ ಖಾನ್ ಬೆಂಬಲಿಗರು ಪ್ರತಿಭಟನೆಗಳನ್ನು ನಡೆಸಿದ್ದರು ಇದು ಹಿಂಸಾ ರೂಪಕ್ಕೆ ತಿರುಗಿ ಪರಿಸ್ಥಿತಿ ಕೈಮೀರಿ ಹೋಗಿತ್ತು.
ಅಲ್ಲದೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಅಲ್ ಖಾದಿರ್ ಟ್ರಸ್ಟ್ ಪ್ರಕರಣದಲ್ಲಿ ಬಂಧಿಸಿದ್ದೇ ಅಕ್ರಮ. ಹೀಗಾಗಿ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಪಾಕಿಸ್ಥಾನ ಸುಪ್ರೀಂ ಕೋರ್ಟ್ ಗುರುವಾರ ಆದೇಶ ನೀಡಿತ್ತು. ಇದರ ಜತೆಗೆ ತತ್‌ಕ್ಷಣವೇ ಇಸ್ಲಾಮಾಬಾದ್ ಹೈಕೋರ್ಟ್‌ನಲ್ಲಿ ಅವರ ವಿರುದ್ಧ ನಡೆಯುತ್ತಿರುವ ಪ್ರಕರಣಗಳ ವಿಚಾರಣೆ ಎದುರಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಉಮರ್ ಅತ ಬಂದಿಯಾಲ್ ನೇತೃತ್ವದ ನ್ಯಾಯಪೀಠ ಆದೇಶವನ್ನೂ ನೀಡಿತ್ತು. ಅದರಂತೆ ಶುಕ್ರವಾರ ಇಸ್ಲಾಮಾಬಾದ್ ಹೈಕೋರ್ಟ್ ಗೆ ಬಾರಿ ಭದ್ರತೆಯಿಂದ ಆಗಮಿಸಿದ ಇಮ್ರಾನ್ ಖಾನ್ ಗೆ ಕೋರ್ಟ್ ನ ತ್ರಿ ಸದಸ್ಯ ಪೀಠ ಎರಡು ವಾರಗಳ ಜಾಮೀನು ನೀಡಿ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಮತದಾನ ಮುಗಿಯುತ್ತಿದ್ದಂತೆ ವಿದ್ಯುತ್ ದರ ಏರಿಕೆ ಶಾಕ್!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
New York: ಅಮೆರಿಕದಲ್ಲಿ ಶೂಟೌಟ್: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ
Moscow: ಕೆಮಿಕಲ್ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ
Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.