ಕ್ಲೀನ್ ಬೌಲ್ಡ್ ಆದ ಇಮ್ರಾನ್: ವಿಶ್ವಾಸಮತ ಕಳೆದುಕೊಂಡು ಪಟ್ಟ ಬಿಟ್ಟ ಪಾಕ್ ಪ್ರಧಾನಿ
Team Udayavani, Apr 10, 2022, 8:56 AM IST
ಇಸ್ಲಮಾಬಾದ್: ಹಲವು ನಾಟಕೀಯ ಬೆಳವಣಿಗೆಗಳಿಗೆ ಸಾಕ್ಷಿಯಾದ ಪಾಕಿಸ್ಥಾನದ ರಾಜಕೀಯ ಇದೀಗ ಒಂದು ಹಂತ ತಲುಪಿದೆ. ಪ್ರಧಾನಿ ಇಮ್ರಾನ್ ಖಾನ್ ಅವರು ಸದನದಲ್ಲಿ ವಿಶ್ವಾಸಮತ ಸಾಬೀತುಪಡಿಸಲು ವಿಫಲರಾಗಿ, ಪ್ರಧಾನಿ ಪಟ್ಟವನ್ನು ತ್ಯಜಿಸಿದ್ದಾರೆ.
ಮಧ್ಯರಾತ್ರಿ ನಡೆದ ವಿಶ್ವಾಸಮತ ಮಂಡನೆಯಲ್ಲಿ ಇಮ್ರಾನ್ ಖಾನ್ ಸರ್ಕಾರದ ವಿರುದ್ಧ 174 ಸದಸ್ಯರು ಮತ ಹಾಕಿದರು. ಪ್ರಧಾನಿ ಇಮ್ರಾನ್ ಖಾನ್ ಮತದಾನದ ಸಮಯದಲ್ಲಿ ಗೈರುಹಾಜರಾಗಲು ನಿರ್ಧರಿಸಿದರೆ, ಅವರ ಪಕ್ಷದ ಶಾಸಕರು ವಾಕ್‌ಔಟ್ ನಡೆಸಿದರು. 342 ಸದಸ್ಯರ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಇಮ್ರಾನ್ ಖಾನ್ ಸರ್ಕಾರದ ವಿರುದ್ಧ 174 ಶಾಸಕರು ಮತ ಚಲಾಯಿಸುವುದರೊಂದಿಗೆ ಅಂತಿಮವಾಗಿ ಅವಿಶ್ವಾಸ ಮತವನ್ನು ಅಂಗೀಕರಿಸಲಾಯಿತು.
ಸುಪ್ರೀಂ ಕೋರ್ಟ್ ಆದೇಶದಂತೆ ಶನಿವಾರ ಇಮ್ರಾನ್ ಖಾನ್ ಅವಿಶ್ವಾಸ ಗೊತ್ತುವಳಿ ಎದುರಿಸಬೇಕತ್ತು. ಆದರೆ ಸ್ಪೀಕರ್ ನೆರವಿನಿಂದ ಇಡೀ ದಿನ ಕಣ್ಣಾಮುಚ್ಚಾಲೆಯಾಡಿದ ಇಮ್ರಾನ್ ರಾತ್ರಿಯ ತನಕವೂ ಮತದಾನ ನಡೆಸಲಿಲ್ಲ.
ಕಲಾಪ ಆರಂಭವಾದಾಗಿನಿಂದಲೂ ವಿಪಕ್ಷಗಳ ನಾಯಕರು, ಸರ್ವೋಚ್ಚ ನ್ಯಾಯಾಲಯದ ಆದೇಶದ ಅನ್ವಯ ಕೂಡಲೇ ಅವಿಶ್ವಾಸ ಗೊತ್ತುವಳಿ ಪರ ಮತದಾನ ನಡೆಸಿ ಎಂದು ಸ್ಪೀಕರ್ ಖೈಸರ್ ಅವರನ್ನು ಒತ್ತಾಯಿಸತೊಡಗಿದರು. ವಿಪಕ್ಷ ನಾಯಕ ಶೆಹಬಾಜ್ ಷರೀಫ್ ಅವರು ಸಂಸತ್‌ನಲ್ಲಿ ಮಾತನಾಡುತ್ತಿದ್ದಂತೆ ಆಡಳಿತಾರೂಢ ಪಕ್ಷದ ಸಂಸದರು ಗದ್ದಲವೆಬ್ಬಿಸಿದರು ಎಂಬ ನೆಪ ಹೇಳಿ ಸ್ಪೀಕರ್ ಕಲಾಪವನ್ನು ಮುಂದೂಡಿದರು.
ಇದನ್ನೂ ಓದಿ:ಶ್ರೀಲಂಕಾ ಅರಾಜಕತೆ : ಪ್ರತಿಭಟನೆ ಹತ್ತಿಕ್ಕಲು ಅರ್ಬನ್ ಪಾಕ್‌ಗೆ ಬೀಗ
ಅನಂತರ ಸದನ ಸಮಾವೇಶಗೊಂಡಾಗ ರಮ್ಜಾನ್ ಇರುವ ಕಾರಣ ಇಫ್ತಾರ್ ಬಳಿಕ ಮತದಾನ ನಡೆಸುತ್ತೇನೆ ಎಂದು ಭರವಸೆ ನೀಡಿ ಮತ್ತೆ ಕಲಾಪವನ್ನು ಮುಂದೆ ಹಾಕಿದರು. ಇಷ್ಟೆಲ್ಲ ಆಗುತ್ತಿದ್ದರೂ ಇಮ್ರಾನ್ ಖಾನ್ ಮಾತ್ರ ಸದನದಲ್ಲಿ ಉಪಸ್ಥಿತರಿರಲಿಲ್ಲ. ಆದರೆ ಈ ಬೆಳವಣಿಗೆಗಳ ನಡುವೆಯೇ ಅವರು ರಾತ್ರಿ 9ಕ್ಕೆ ಸಂಪುಟ ಸಭೆ ಕರೆದರು.
ಇಫ್ತಾರ್ ಮುಗಿಯುತ್ತಿದ್ದಂತೆ ಮತದಾನ ಆರಂಭವಾಗುತ್ತದೆ ಎಂದು ನಂಬಿದ್ದ ವಿಪಕ್ಷಗಳಿಗೆ ಮತ್ತೆ ನಿರಾಶೆಯಾಯಿತು. ಸ್ಪೀಕರ್ ಮತ್ತೆ ಕಲಾಪವನ್ನು ಮುಂದೂಡಿದರು. ಹೀಗಾಗಿ ರಾತ್ರಿಯಿಡೀ ಪಾಕ್ ಸಂಸತ್ತಿನಲ್ಲಿ ಹೈಡ್ರಾಮಾ ಸೃಷ್ಟಿಯಾಗುವ ಲಕ್ಷಣ ಗೋಚರಿಸಿತು.
ನಂತರ ಮತದಾನ ನಡೆದು ಇಮ್ರಾನ್ ಖಾನ್ ಸರ್ಕಾರ ಸೋಲನುಭವಿಸಿತು. ಅವರ ಸರ್ಕಾರವು ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಅವಿಶ್ವಾಸ ಮತವನ್ನು ಕಳೆದುಕೊಳ್ಳುವ ಮೊದಲೇ, ಇಮ್ರಾನ್ ಖಾನ್ ಪ್ರಧಾನಿ ನಿವಾಸವನ್ನು ಖಾಲಿ ಮಾಡಿದರು. ಈ ಮೂಲಕ ಪಾಕಿಸ್ಥಾನದ ಕ್ರಿಕೆಟ್ ವಿಶ್ವಕಪ್ ವಿಜೇತ ನಾಯಕ ರಾಜಕೀಯದಲ್ಲಿ ಮೊದಲ ಇನ್ನಿಂಗ್ಸ್ ನಲ್ಲೇ ಕ್ಲೀನ್ ಬೌಲ್ಡ್ ಆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
US Parliament Election: ಭಾರತ ಮೂಲದ 9 ಅಭ್ಯರ್ಥಿಗಳ ಅದೃಷ್ಟ ಪರೀಕ್ಷೆ
US Election 2024: ಟ್ರಂಪ್,ಕಮಲಾ ಮಧ್ಯೆ ತೀವ್ರ ಪೈಪೋಟಿ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?
China; ಬೌದ್ಧ ಪಠ್ಯಗಳಿಂದ ರಾಮಾಯಣ ನೆಲೆ: ಸಂಶೋಧನೆ
MUST WATCH
ಹೊಸ ಸೇರ್ಪಡೆ
Supreme Court: ಖಾಸಗಿ ಸಂಪನ್ಮೂಲ ಸ್ವಾಧೀನ ಸುಪ್ರೀಂ ತೀರ್ಪು ಸಮತೋಲಿತ
US Parliament Election: ಭಾರತ ಮೂಲದ 9 ಅಭ್ಯರ್ಥಿಗಳ ಅದೃಷ್ಟ ಪರೀಕ್ಷೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.