ಇಮ್ರಾನ್ ಖಾನ್ ಹೊಸ ಇನ್ನಿಂಗ್ಸ್ ಶುರು
Team Udayavani, Aug 19, 2018, 6:00 AM IST
ಇಸ್ಲಾಮಾಬಾದ್: “ಕಪ್ತಾನ’ ಇಮ್ರಾನ್ ಖಾನ್ ಅವರು ಪಾಕಿಸ್ಥಾನದ ಪ್ರಧಾನಿಯಾಗಿ ಹೊಸ ಇನ್ನಿಂಗ್ಸ್ ಶುರುಮಾಡಿದ್ದಾರೆ. ಗಂಭೀರ ಆರ್ಥಿಕ ಬಿಕ್ಕಟ್ಟು, ನೆರೆರಾಷ್ಟ್ರಗಳೊಂದಿಗಿನ ಮನಸ್ತಾಪ, ಉಗ್ರ ನಿಗ್ರಹ ನಿರ್ಲಕ್ಷ್ಯದ ಪರಿಣಾಮವಾಗಿ ಅಂತಾರಾಷ್ಟ್ರೀಯ ನಿರ್ಬಂಧ ಭೀತಿ ಎದುರಿಸುತ್ತಿರುವ ಪಾಕಿಸ್ಥಾನದ ನೂತನ ಪ್ರಧಾನಮಂತ್ರಿಯಾಗಿ ಶನಿವಾರ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ.
ಅಧ್ಯಕ್ಷರ ಭವನ ಐವಾನ್-ಎ-ಸದರ್‌ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಧ್ಯಕ್ಷ ಮಮೂ°ನ್ ಹುಸೇನ್ ಅವರು ಪಾಕ್‌ನ ಖಾನ್‌ಗೆ ಪ್ರಮಾಣವಚನ ಬೋಧಿಸಿದರು. ಭಾರತೀಯ ಮಾಜಿ ಕ್ರಿಕೆಟಿಗ, ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು, ಪಾಕ್ ಸೇನಾ ಮುಖ್ಯಸ್ಥ ಜ.ಖಮರ್ ಜಾವೇದ್ ಬಜ್ವಾ, ರಾಜ ತಾಂತ್ರಿಕರು,ಇತರೆ ವಿಶೇಷ ಆಹ್ವಾನಿತರು ಕಾರ್ಯಕ್ರಮದಲ್ಲಿ ಭಾಗಿ ಯಾಗಿದ್ದರು. ಪ್ರಮಾಣ ಸ್ವೀಕಾರದ ವೇಳೆ ಖಾನ್ ಅವರು ಕೆಲವು ಉರ್ದು ಪದಗಳನ್ನು ತಪ್ಪಾಗಿ ಉಚ್ಚರಿಸಿದ್ದೂ ಕಂಡುಬಂತು. ಈ ನಡುವೆ, ಪಾಕ್ ಅಧ್ಯಕ್ಷ ಹುದ್ದೆಗೆ ಪಕ್ಷದ ಹಿರಿಯ ನಾಯಕ ಡಾ.ಆರಿಫ್ ಅಲ್ವಿ ಅವರನ್ನು ನಾಮನಿರ್ದೇಶನ ಮಾಡಿರುವುದಾಗಿ ಇಮ್ರಾನ್ ಘೋಷಿಸಿದ್ದಾರೆ.
ಪಿಒಕೆ ಅಧ್ಯಕ್ಷ ಪಕ್ಕದ ಆಸನ ವಿವಾದ: ಪ್ರಮಾಣ ಸ್ವೀಕಾರ ಸಮಾರಂಭದಲ್ಲಿನ ಆಸನ ವ್ಯವಸ್ಥೆಯು ಇದೀಗ ವಿವಾದಕ್ಕೀಡಾಗಿದೆ. ಭಾರತದಿಂದ ತೆರಳಿದ್ದ ನವಜೋತ್ ಸಿಧು ಅವರಿಗೆ ಪಾಕ್ ಆಕ್ರಮಿತ ಕಾಶ್ಮೀರದ ಅಧ್ಯಕ್ಷರ ಪಕ್ಕದ ಆಸನವನ್ನು ಮೀಸಲಿಟ್ಟಿದ್ದು ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ಜಮ್ಮು-ಕಾಶ್ಮೀರ ಕಾಂಗ್ರೆಸ್ ಅಧ್ಯಕ್ಷ ಗುಲಾಂ ಅಹ್ಮದ್ ಮಿರ್, “ಸಿಧು ಜವಾಬ್ದಾರಿಯುತ ವ್ಯಕ್ತಿ. ಈ ವಿವಾದ ಕುರಿತು ಅವರೇ ಉತ್ತರಿಸಬೇಕು. ಪಿಒಕೆ ಅಧ್ಯಕ್ಷರ ಪಕ್ಕದಲ್ಲಿ ಅವರು ಕುಳಿತುಕೊಳ್ಳಬಾರ ದಿತ್ತು’ ಎಂದಿದ್ದಾರೆ. ಇದೇ ವೇಳೆ, ಹರ್ಯಾಣ ಸಚಿವ ಅನಿಲ್ ವಿಜ್, “ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ಸಿಧು ಅವರು ಭಾರತಕ್ಕೆೆ ತೋರಿದ ಅವಿಧೇಯತೆ’ ಎಂದಿದ್ದಾರೆ. ಇದಕ್ಕೂ ಮೊದಲು ಸಿಧು ಪಾಕ್ ಸೇನಾ ಮುಖ್ಯಸ್ಥರನ್ನು ಆಲಿಂಗಿಸಿಕೊಂಡ ಫೋಟೋ ಕೂಡ ಹರಿದಾಡಿತ್ತು. ಈ ವೇಳೆ ಮಾತನಾಡಿದ್ದ ಸಿಧು, “ಗೆಳೆಯ ಇಮ್ರಾನ್ ಖಾನ್ ಅವರು ಪ್ರಧಾನಿ ಹುದ್ದೆಗೇರಿರುವುದು ಭಾರತ-ಪಾಕ್ ನಡುವಿನ ಶಾಂತಿ ಪ್ರಕ್ರಿಯೆ ನಿಟ್ಟಿನಲ್ಲಿ ಉತ್ತಮ ಬೆಳವಣಿಗೆ’ ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.