ಉಗ್ರ ಅಜರ್ ಮಸೂದ್ ಆಸ್ತಿ ಜಪ್ತಿಗೆ ಫ್ರಾನ್ಸ್ ಸರ್ಕಾರನಿರ್ಧಾರ
Team Udayavani, Mar 15, 2019, 9:36 AM IST
ಪ್ಯಾರಿಸ್: ಜಮ್ಮು-ಕಾಶ್ಮೀರದ ಪುಲ್ವಾಮಾ ದಾಳಿಯ ರೂವಾರಿ, ಜೈಶ್ ಎ ಮೊಹಮ್ಮದ್ ಭಯೋತ್ಪಾದಕ ಸಂಘಟನೆಯ ಮುಖ್ಯಸ್ಥ ಅಜರ್ ಮಸೂದ್ ನ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ನಿರ್ಧರಿಸಿರುವುದಾಗಿ ಫ್ರಾನ್ಸ್ ಸರ್ಕಾರ ತಿಳಿಸಿದೆ.
ಉಗ್ರ ಅಜರ್ ಮಸೂದ್ ನ ಆಸ್ತಿಯನ್ನು ಜಪ್ತಿ ಮಾಡಿಕೊಳ್ಳುವುದಾಗಿ ಫ್ರಾನ್ಸ್ ನ ಆಂತರಿಕ ಸಚಿವಾಲಯ, ವಿತ್ತ ಸಚಿವಾಲಯ ಹಾಗೂ ವಿದೇಶಾಂಗ ಸಚಿವಾಲಯ ಬಿಡುಗಡೆಗೊಳಿಸಿರುವ ಜಂಟಿ ಹೇಳಿಕೆಯಲ್ಲಿ ವಿವರಿಸಿದೆ. ಭಯೋತ್ಪಾದನೆಯಲ್ಲಿ ಅಜರ್ ಶಾಮೀಲಾಗಿರುವ ಬಗ್ಗೆ ಜನರು ಶಂಕೆ ವ್ಯಕ್ತಪಡಿಸಿರುವ ನಿಟ್ಟಿನಲ್ಲಿ ಆತನನ್ನು ಯುರೋಪಿಯನ್ ಒಕ್ಕೂಟದ ಪಟ್ಟಿಯಲ್ಲಿ ಸೇರಿಸುವ ಬಗ್ಗೆ ಫ್ರಾನ್ಸ್ ಚರ್ಚೆ ನಡೆಸುತ್ತಿರುವುದಾಗಿ ತಿಳಿಸಿದೆ.
ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಆತ್ಮಾಹುತಿ ದಾಳಿ ನಡೆಸಿ 40 ಮಂದಿ ಯೋಧರು ಹುತಾತ್ಮರಾದ ಘಟನೆಯ ಹೊಣೆಯನ್ನು ಜೈಶ್ ಎ ಮೊಹಮ್ಮದ್ ಉಗ್ರಗಾಮಿ ಸಂಘಟನೆ ಹೊತ್ತುಕೊಂಡಿತ್ತು. ಈ ಹಿನ್ನೆಲೆಯಲ್ಲಿ ಮಸೂದ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪಾಕಿಸ್ತಾನದ ಮೇಲೆ ಭಾರತ ಸೇರಿದಂತೆ ಹಲವು ರಾಷ್ಟ್ರಗಳು ಒತ್ತಡ ಹೇರಿದ್ದವು. ಆದರೆ ಮಸೂದ್ ನನ್ನು ಜಾಗತಿಕ ಭಯೋತ್ಪಾದಕ ಎಂದು ಘೋಷಿಸಲು ವಿಶ್ವಸಂಸ್ಥೆಯಲ್ಲಿ ಚೀನಾ ಮತ್ತೆ ಅಡ್ಡಗಾಲು ಹಾಕಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
America: ಬೋಯಿಂಗ್ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ
Vivek Ramaswamy: ವಿವೇಕ್‌ಗೆ ಟ್ರಂಪ್ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.