Justin Trudeau: ಭಾರತ ಅಭಿವೃದ್ಧಿ ಪ್ರಧಾನ ದೇಶ, ಯಾವುದೇ ಕಾರಣಕ್ಕೂ ಪ್ರಚೋದಿಸಲ್ಲಾ: ಟ್ರುಡೊ
Team Udayavani, Sep 22, 2023, 10:27 AM IST
ಟೊರೊಂಟೊ: ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಗೆ ಸಂಬಂಧಿಸಿದಂತೆ ಉಭಯ ರಾಷ್ಟ್ರಗಳ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಭಾರತದ ವಿರುದ್ಧ ಆರೋಪ ಮಾಡಿದ್ದ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಇದೀಗ ಭಾರತದ ಪರ ಮೃದು ಧೋರಣೆ ಹೊಂದಿರುವಂತೆ ಕಾಣುತ್ತಿದೆ.
ಕೆನಡಾದೊಂದಿಗೆ ಭಾರತದ ಸಂಬಂಧ ಮತ್ತು ನಡೆಯುತ್ತಿರುವ ವಿಷಯದ ಬಗ್ಗೆ ಕೆನಡಾದ ಮಿತ್ರರಾಷ್ಟ್ರಗಳ ಮೌನದ ಬಗ್ಗೆ ಕೇಳಿದ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಜಸ್ಟಿನ್ ಟ್ರುಡೊ, ಭಾರತ ಅಭಿವೃದ್ಧಿ ಪ್ರಧಾನ ದೇಶ ಎಂಬುದರಲ್ಲಿ ಎರಡು ಮಾತಿಲ್ಲ. ಅಂತಹ ದೇಶದೊಂದಿಗೆ ನಾವು ಜೊತೆಗೂಡಿ ಪ್ರಾದೇಶಿಕ ಹಾಗೂ ಜಾಗತಿಕ ಏಳಿಗೆ ದಿಸೆಯಲ್ಲಿ ಕೆಲಸ ಮಾಡುವ ಅಗತ್ಯವಿದೆ. ಹಾಗಾಗಿ, ನಾವು ಪ್ರಚೋದನೆ ನೀಡುವ ಹಾಗೂ ಯಾವುದೇ ಸಮಸ್ಯೆ ಸೃಷ್ಟಿಸುವ ಪ್ರಯತ್ನ ಮಾಡುವುದಿಲ್ಲ ಎಂದ ಅವರು. ಕೆನಡಿಯನ್ನರ ಮೌಲ್ಯಗಳನ್ನು ರಕ್ಷಿಸುವುದಕ್ಕೆ ನಾವು ಪ್ರಾಮುಖ್ಯತೆ ನೀಡುತ್ತೇವೆ ಎಂದು ಮೃದುವಾಗಿ ಮಾತನಾಡಿದ್ದಾರೆ.
ಕೆನಡಾದಲ್ಲಿರುವ ಭಾರತದ ರಾಯಭಾರಿಯನ್ನ ಉಚ್ಚಾಟನೆಗೊಳಿಸಿದ ಬಳಿಕ ಭಾರತವೂ ಹಲವು ಕ್ರಮಗಳ ಮೂಲಕ ತಿರುಗೇಟು ನೀಡಿದೆ. ಭಾರತದಲ್ಲಿರುವ ಕೆನಡಾ ರಾಯಭಾರಿಯನ್ನ ಉಚ್ಚಾಟನೆ ಮಾಡುವ ಜೊತೆಗೆ ಕೆನಡಾ ನಾಗರಿಕರಿಗೆ ವೀಸಾ ನೀಡುವುದನ್ನೂ ಸ್ಥಗಿತಗೊಳಿಸಿದೆ.
ಇದನ್ನೂ ಓದಿ: Cricket Stories; ಆ 2 ರನ್…ದ.ಆಫ್ರಿಕಾ ಮರೆಯಲಾಗದ ವಿಶ್ವಕಪ್ ಹೀರೋ ಲ್ಯಾನ್ಸ್ ಕ್ಲೂಸನರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.