ಪಾಕ್ ಗೆ “ಕೈ” ಕೊಟ್ಟ ಚೀನಾ, ರಷ್ಯಾ; ಭಾರತಕ್ಕೆ ರಾಜತಾಂತ್ರಿಕ ಗೆಲುವು
Team Udayavani, Feb 27, 2019, 8:57 AM IST
ಬೀಜಿಂಗ್/ಮಾಸ್ಕೋ: ಭಾರತೀಯ ಸೇನಾ ಪಡೆ ಗಡಿ ನಿಯಂತ್ರಣ ರೇಖೆ ಉಲ್ಲಂಘಿಸಿ ಪಾಕಿಸ್ತಾನದೊಳಕ್ಕೆ ತೆರಳಿ ವಾಯುಪಡೆಯ ಮಿರಾಜ್ 2000 ವಿಮಾನ ಬಾಂಬ್ ದಾಳಿ ನಡೆಸಿದ ಬಳಿಕ ಗಡಿಯಲ್ಲಿ ಯುದ್ಧದ ವಾತಾವರಣ ಸೃಷ್ಟಿಯಾಗತೊಡಗಿದ್ದು, ಮತ್ತೊಂದೆಡೆ ಯಾವುದೇ ಕಾರಣಕ್ಕೂ ಭಯೋತ್ಪಾದನೆಗೆ ಕುಮ್ಮಕ್ಕು ನೀಡಬೇಡಿ ಎಂದು ಚೀನಾ ಮತ್ತು ರಷ್ಯಾ ಜಂಟಿ ಪ್ರಕಟಣೆಯಲ್ಲಿ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದೆ.
ಪಾಕಿಸ್ತಾನದ ವಿರುದ್ಧ ಚೀನಾ ಮತ್ತು ರಷ್ಯಾ ಜಂಟಿ ಹೇಳಿಕೆ ನೀಡಿದ್ದು, ಭಯೋತ್ಪಾದನೆ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ಚೀನಾ ತಿಳಿಸಿದ್ದು, ಇದರಿಂದಾಗಿ ಪಾಕಿಸ್ತಾನ ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿದಂತಾಗಿದೆ. ಅಲ್ಲದೇ ಚೀನಾ, ರಷ್ಯಾ ಹೇಳಿಕೆಯಿಂದ ಭಾರತಕ್ಕೆ ರಾಜತಾಂತ್ರಿಕ ಗೆಲುವು ಸಿಕ್ಕಂತಾಗಿದೆ.
ಭಯೋತ್ಪಾದನೆಗೆ ಕುಮ್ಮಕ್ಕು ನೀಡುವ ಯಾವ ಉಗ್ರಗಾಮಿ ಸಂಘಟನೆಗೂ ಬೆಂಬಲ ನೀಡಬಾರದು ಎಂದು ಪಾಕಿಸ್ತಾನಕ್ಕೆ ಉಭಯ ದೇಶಗಳೂ ಎಚ್ಚರಿಕೆ ನೀಡಿವೆ.
ಭಾರತೀಯ ವಾಯುಪಡೆ ಪಾಕಿಸ್ತಾನದ ಉಗ್ರರ ಅಡಗುತಾಣಗಳ ಮೇಲೆ ದಾಳಿ ನಡೆಸಿದ ನಂತರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಚೀನಾಕ್ಕೆ ಭೇಟಿ ನೀಡಿ, ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಪಾಕಿಸ್ತಾನಕ್ಕೆ ಬೆಂಬಲ ನೀಡಬಾರದು ಎಂದು ಮನವಿ ಮಾಡಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
America: ಬೋಯಿಂಗ್ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ
MUST WATCH
ಹೊಸ ಸೇರ್ಪಡೆ
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.