ಭಿನ್ನಾಭಿಪ್ರಾಯಗಳು ವಿವಾದಗಳಾಗಬಾರದು
Team Udayavani, Aug 13, 2019, 5:36 AM IST
ಬೀಜಿಂಗ್: ಭಾರತ ಮತ್ತು ಚೀನ ಮಧ್ಯದ ರಾಜ ತಾಂತ್ರಿಕ ಭಿನ್ನಾಭಿಪ್ರಾಯಗಳು ವಿವಾದಗಳಾಗಬಾರದು ಎಂದು ಚೀನ ಪ್ರವಾಸದಲ್ಲಿರುವ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ. ಇನ್ನೊಂದೆಡೆ ಜಮ್ಮು ಕಾಶ್ಮೀರದ ಸನ್ನಿವೇಶವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದು ಚೀನ ಹೇಳಿದ್ದು, ಈ ವಲಯದ ಶಾಂತಿ ಮತ್ತು ಸ್ಥಿರತೆಗೆ ಭಾರತ ರಚನಾತ್ಮಕ ಪಾತ್ರ ವಹಿಸಬೇಕು ಎಂದಿದೆ.
3 ದಿನಗಳ ಭೇಟಿಯಲ್ಲಿ ಚೀನ ಉಪಾಧ್ಯಕ್ಷ ವಾಂಗ್ ಖೀಶಾನ್ ಮತ್ತು ವಿದೇಶಾಂಗ ಸಚಿವ ವಾಂಗ್ ಯಿ ಜೊತೆಗೆ ಸೋಮವಾರ ಜೈಶಂಕರ್ ಮಾತುಕತೆ ನಡೆಸಿದರು. ಅನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಜಮ್ಮು ಕಾಶ್ಮೀರದ ವಿಚಾರವನ್ನು ನೇರವಾಗಿ ಪ್ರಸ್ತಾವಿಸಲಿಲ್ಲ. ಬದಲಿಗೆ ಭಾರತ- ಪಾಕ್ ನಡುವಿನ ಸಂಘರ್ಷವನ್ನು ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದು ವಾಂಗ್ ಯಿ ಹೇಳಿದ್ದಾರೆ.
ಬಳಿಕ ಮಾತನಾಡಿದ ಜೈಶಂಕರ್, ಭಾರತ- ಚೀನದ ಸಂಬಂಧವು ಜಾಗತಿಕ ರಾಜಕಾರಣದಲ್ಲಿ ಅತ್ಯಂತ ಮಹತ್ವ ಪಡೆದಿದೆ. ಎರಡು ವರ್ಷಗಳ ಹಿಂದೆ ಈ ಅಂಶವನ್ನು ಮನಗಂಡು ಉಭಯ ದೇಶಗಳೂ ಒಮ್ಮತಕ್ಕೆ ಬಂದಿವೆ. ನಮ್ಮ ಮಧ್ಯೆ ಇರಬಹುದಾದ ಯಾವುದೇ ಭಿನ್ನಾಭಿಪ್ರಾಯಗಳು ವಿವಾದಗಳಾಗಬಾರದು. ಕಳೆದ ವುಹಾನ್ ಶೃಂಗದಲ್ಲಿ ಎರಡೂ ದೇಶಗಳು ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿವೆ. ಅಂದಿನಿಂದಲೂ ನಮ್ಮ ಸಂಬಂಧದಲ್ಲಿ ಸುಧಾರಣೆಯಾಗಿರು ವುದನ್ನು ನಾವು ಕಂಡಿದ್ದೇವೆ ಎಂದಿದ್ದಾರೆ. ಇದೇ ವೇಳೆ, ಎರಡೂ ದೇಶಗಳ ನಡುವಿನ ಬಾಂಧವ್ಯ ವೃದ್ಧಿಗೆ ಸಂಬಂಧಿಸಿ ನಾಲ್ಕು ಒಪ್ಪಂದಗಳಿಗೆ ಭಾರತ-ಚೀನ ಸಹಿ ಹಾಕಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.