ಚೀನದಲ್ಲಿನ ಭಾರತೀಯರಿಗೆ ಕೋವಿಡ್-ಗಡಿ ಸಮಸ್ಯೆ!
ಬೀಜಿಂಗ್‌ನಲ್ಲಿರುವ ಭಾರತದ ರಾಯಭಾರಿ ವಿಕ್ರಮ್ ಮಿಸ್ರಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ವಾಸ್ತವತೆ ಉಲ್ಲೇಖ
Team Udayavani, Aug 16, 2020, 6:30 AM IST
ಬೀಜಿಂಗ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಭಾರತದ ರಾಯಭಾರಿ ವಿಕ್ರಮ್ ಮಿಸ್ರಿ.
ಬೀಜಿಂಗ್: ಚೀನದಲ್ಲಿ ಭಾರತೀಯರು ಎರಡು ಸವಾಲುಗಳನ್ನು ಎದುರಿಸುತ್ತಿದ್ದಾರೆ. ಮೊದಲನೆ ಯದಾಗಿ ಕೋವಿಡ್-19, ಎರಡನೇಯದ್ದಾಗಿ ಗಡಿ ಬಿಕ್ಕಟ್ಟು ಸವಾಲಾಗಿ ಪರಿಣಮಿಸಿದೆ ಎಂದು ಚೀನದ ಭಾರತದ ರಾಯಭಾರಿ ವಿಕ್ರಮ್ ಮಿಸ್ರಿ ತಿಳಿಸಿದ್ದಾರೆ.
ಬೀಜಿಂಗ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಬಳಿ ಶನಿವಾರ ನಡೆದ 74ನೇ ಸ್ವಾತಂತ್ರ್ಯೋತ್ಸವದಲ್ಲಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ ಅವರು, ಈಗಾಗಲೇ ರಾಷ್ಟ್ರಪತಿಯವರ ಭಾಷಣದಲ್ಲಿ ಪ್ರಸ್ತಾವಿಸಿದಂತೆ (ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸ್ವಾತಂತ್ರ್ಯೋತ್ಸವ ಮುನ್ನಾ ದಿನ ಮಾಡಿದ ಭಾಷಣ) 2020 ಅಸಾಮಾನ್ಯ ವರ್ಷವಾಗಿದೆ. ಭಾರತೀಯರಿಗೆ ಹಾಗೂ ಚೀನದಲ್ಲಿರುವ ನಮಗೂ ಇದು ಅನ್ವಯಿಸುತ್ತದೆ. ಈ ಎರಡು ಸವಾಲುಗಳನ್ನು ನಾವು ಎದುರಿಸಬೇಕಾಗಿದೆ. ಇದಕ್ಕಾಗಿ ಪರಿಶ್ರಮ ಹಾಗೂ ತ್ಯಾಗ ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ. ಸಾಕಷ್ಟು ವಲಸಿಗರ ಕುಟುಂಬದ ಸದಸ್ಯರು ವೀಸಾ ಸಮಸ್ಯೆಯಿಂದ ಭಾರತದಲ್ಲಿ ಸಿಲುಕಿಕೊಂಡಿದ್ದಾರೆ. ಕೋವಿಡ್ ಹಿನ್ನೆಲೆ ಯಲ್ಲಿ ವಿಮಾನಗಳ ವ್ಯತ್ಯಯದಿಂದ ಈ ರೀತಿ ಆಗಿದೆ ಎಂದು ತಿಳಿಸಿದ್ದಾರೆ. ಕೋವಿಡ್ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಚೀನ ಸರಕಾರ ಸಾಕಷ್ಟು ವಿಭಿನ್ನ ನಿಯಮಗಳನ್ನು ಜಾರಿಗೊಳಿಸುತ್ತಿದೆ. ಇವುಗಳನ್ನು ನಾವು ಪಾಲಿಸ ಬೇಕಾಗಿದೆ. ಇಲ್ಲಿ ಸಾಕಷ್ಟು ಬದಲಾವಣೆ ಗಳಾ ಗಿವೆ. ಇವುಗಳು ನಮ್ಮ ನಿತ್ಯದ ಜೀವನದ ಮೇಲೆ ಪರಿಣಾಮ ಬೀರಲಿವೆ ಎಂದು ವಿಕ್ರಮ್ ಮಿಸ್ರಿ ಹೇಳಿದ್ದಾರೆ.
ಸ್ವಾತಂತ್ರ್ಯೋತ್ಸವ ಮುನ್ನಾ ದಿನ ರಾಷ್ಟ್ರಪತಿ ರಾಮ ನಾಥ್ ಕೋವಿಂದ್ ಅವರು, “ನಮ್ಮ ನೆರೆಹೊರೆಯವರ ಪೈಕಿ ಕೆಲವರು ವಿಸ್ತರಣಾ ಹಪಹಪಿಯನ್ನು ಹೊಂದಿದ್ದಾರೆ. ಭಾರತವು ಶಾಂತಿಯನ್ನು ನಂಬಿದ್ದರೂ ಯಾವುದೇ ಆಕ್ರಮಣಕಾರಿ ಪ್ರಯತ್ನಗಳಿಗೆ ತಕ್ಕ ಉತ್ತರ ನೀಡಲು ಶಕ್ತವಾಗಿದೆ’ ಎಂದು ಪರೋಕ್ಷವಾಗಿ ಚೀನ ವಿರುದ್ಧ ಹರಿಹಾಯ್ದಿದ್ದರು. ಚೀನದಲ್ಲಿ ಭಾರತದ ರಾಯಭಾರಿ ವಿಕ್ರಮ್ ಮಿಸ್ರಿ, ರಾಷ್ಟ್ರಪತಿಯರ ಭಾಷಣವನ್ನು ಉಲ್ಲೇಖೀಸಿರುವುದು ಗಮನಾರ್ಹ ಸಂಗತಿಯಾಗಿದೆ.
ಪಾಕ್‌ಗೆ ನಮ್ಮ ಯೋಧರನ್ನು ಎದುರಿಸುವ ತಾಕತ್ತಿಲ್ಲ
ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಪಾಕಿಸ್ಥಾನದ ಕದನ ವಿರಾಮ ಉಲ್ಲಂಘನೆಯಿಂದ ರೋಸಿ ಹೋಗಿರುವ ಗಡಿ ಗ್ರಾಮದ ಜನರು ಸ್ವಾತಂತ್ರ್ಯ ದಿನವಾದ ಶನಿವಾರ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಪಾಕಿಸ್ಥಾನದ ಸೇನೆಗೆ ನಮ್ಮ ಯೋಧರನ್ನು ಎದುರಿಸುವ ತಾಕತ್ತಿಲ್ಲ. ಹೀಗಾಗಿ, ಅವರು ಗಡಿಗ್ರಾಮದ ಅಮಾಯಕ ಜನರನ್ನು ಕೊಲ್ಲುತ್ತಿದ್ದಾರೆ ಎಂದು ಜಮ್ಮು-ಕಾಶ್ಮೀರದ ಪೂಂಛ… ವಲಯದ ಗಡಿ ನಿಯಂತ್ರಣ ರೇಖೆ ಬಳಿಯ ಗ್ರಾಮಸ್ಥರು ಕಿಡಿಕಾರಿದ್ದಾರೆ. ಜತೆಗೆ, ಪಾಕ್ ನಡೆಸುತ್ತಿರುವ ಅಪ್ರಚೋದಿತ ದಾಳಿಗಳು ನಮ್ಮ ಬದುಕನ್ನೇ ದುಸ್ತರವಾಗಿಸಿದೆ ಎಂದೂ ನೋವು ತೋಡಿಕೊಂಡಿದ್ದಾರೆ. ಕಳೆದ ಒಂದು ತಿಂಗಳಲ್ಲಿ ನಾನು ನಮ್ಮ ಕುಟುಂಬದ ಮೂವರನ್ನು ಕಳೆದು ಕೊಂಡೆ. ಪಾಕಿಸ್ಥಾನದ ಸೇನೆ ಸಿಡಿಸಿದ ಶೆಲ್‌ನಿಂದಾಗಿ ಕುಟುಂಬದ ಮೂವರು ಸದಸ್ಯರು ಗಂಭೀರವಾಗಿ ಗಾಯಗೊಂಡಿದ್ದರು. ದಾಳಿ ನಡೆದ 6-7 ನಿಮಿಷಗಳಲ್ಲಿ ಯೋಧರು ಬಂದು ಅವರನ್ನು ಆಸ್ಪತ್ರೆಗೆ ಕರೆದೊಯ್ದರು. ಆದರೆ, ಅಷ್ಟರಲ್ಲಿ ಅವರು ಅಸುನೀಗಿದ್ದರು ಎಂದು ಸ್ಥಳೀಯರೊಬ್ಬರು ಹೇಳಿದ್ದಾರೆ. ಪ್ರತಿ ಬಾರಿಯೂ ಪಾಕ್ ದಾಳಿ ನಡೆಸಿದಾಗ, ನಮ್ಮ ಸೇನೆಯೂ ತಕ್ಕ ಪ್ರತ್ಯುತ್ತರ ನೀಡುತ್ತದೆ. ಅಲ್ಲದೆ ಯೋಧರು ನಮ್ಮ ಸಹಾಯಕ್ಕೆ ತಕ್ಷಣ ಧಾವಿಸುತ್ತಾರೆ ಎಂದೂ ಪೂಂಛ…ನ ಜನರು ನುಡಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ
Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?
2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್ 2ನೇ ಪಂದ್ಯ
Enforcement Directorate: ಕ್ರಿಮಿನಲ್ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.