Republic Day: ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಾರಾ ಫ್ರೆಂಚ್ ಅಧ್ಯಕ್ಷರು?
Team Udayavani, Dec 22, 2023, 10:55 AM IST
ನವದೆಹಲಿ: 2024 ರ ಗಣರಾಜ್ಯೋತ್ಸವ ಪರೇಡ್‌ಗೆ ಮುಖ್ಯ ಅತಿಥಿಯಾಗಿ ಫ್ರೆಂಚ್ ಅಧ್ಯಕ್ಷ ಇಮ್ಮಾನ್ಯುಯೆಲ್ ಮ್ಯಾಕ್ರನ್ ಅವರನ್ನು ಭಾರತ ಆಹ್ವಾನಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಈ ಮೊದಲು ಯುಎಸ್ ಅಧ್ಯಕ್ಷ ಜೋ ಬಿಡನ್ ಅವರನ್ನು ಮುಖ್ಯ ಅತಿಥಿಯಾಗಿ ಭಾಗವಹಿಸುವಂತೆ ಆಹ್ವಾನಿಸಿತ್ತು, ಆದರೆ ಕಾರಣಾಂತರಗಳಿಂದ ಭಾರತಕ್ಕೆ ಭೇಟಿ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ. ಈ ನಿಟ್ಟಿನಲ್ಲಿ 2024 ರ ಗಣರಾಜ್ಯೋತ್ಸವ ಸಮಾರಂಭಕ್ಕೆ ಫ್ರೆಂಚ್ ಅಧ್ಯಕ್ಷರನ್ನು ಕರೆಯುವ ಯೋಚನೆ ಮಾಡಲಾಗಿದೆ ಎಂದು ಹೇಳಲಾಗಿದೆ.
ಪ್ರಧಾನಿ ಮೋದಿ ಜುಲೈನಲ್ಲಿ ಫ್ರಾನ್ಸ್‌ಗೆ ಭೇಟಿ ನೀಡಿ ಪ್ಯಾರಿಸ್‌ನಲ್ಲಿ ನಡೆದ ಬಾಸ್ಟಿಲ್ ಡೇ (ಫ್ರೆಂಚ್ ರಾಷ್ಟ್ರೀಯ ದಿನ) ಆಚರಣೆಯಲ್ಲಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಿದ ನಂತರ ಈ ಬೆಳವಣಿಗೆ ನಡೆದಿದೆ ಎನ್ನಲಾಗಿದೆ.
ಸೆಪ್ಟೆಂಬರ್‌ನಲ್ಲಿ, ಭಾರತ ಆಯೋಜಿಸಿದ್ದ G20 ಶೃಂಗಸಭೆಗಾಗಿ ಮ್ಯಾಕ್ರನ್ ದೆಹಲಿಗೆ ಭೇಟಿ ನೀಡಿದ್ದರು ಮತ್ತು ಪ್ರಧಾನಿ ಮೋದಿಯವರೊಂದಿಗೆ ಮಾತುಕತೆ ನಡೆಸಿದರು. ಅಲ್ಲದೆ ಈ ಕುರಿತು ಪ್ರಧಾನಿ ಮೋದಿ ಅವರು ಟ್ವೀಟ್ ಕೂಡಾ ಮಾಡಿದ್ದರು ‘ನಾವು ಹಲವಾರು ವಿಷಯಗಳ ಬಗ್ಗೆ ಚರ್ಚಿಸಿದ್ದೇವೆ ಮತ್ತು ಭಾರತ-ಫ್ರಾನ್ಸ್ ಸಂಬಂಧಗಳು ಪ್ರಗತಿಯ ಹೊಸ ಎತ್ತರವನ್ನು ಖಾತ್ರಿಪಡಿಸಿಕೊಳ್ಳಲು ಎದುರು ನೋಡುತ್ತಿದ್ದೇವೆ” ಎಂದು ಪ್ರಧಾನಿ ಮೋದಿ ಸೆಪ್ಟೆಂಬರ್ 10 ರಂದು ಟ್ವೀಟ್ ಮಾಡಿದ್ದಾರೆ.
ಈ ವರ್ಷದ(2023) ಆರಂಭದಲ್ಲಿ, ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಅವರು ಭಾರತದ ಗಣರಾಜ್ಯೋತ್ಸವದ ಪರೇಡ್‌ನ ಮುಖ್ಯ ಅತಿಥಿಯಾಗಿದ್ದರು.
ಪ್ರತಿ ವರ್ಷ, ಭಾರತವು ತನ್ನ ಗಣರಾಜ್ಯೋತ್ಸವದಲ್ಲಿ ಭಾಗವಹಿಸಲು ವಿದೇಶಿ ನಾಯಕರನ್ನು ಆಹ್ವಾನಿಸುತ್ತದೆ. ಆದರೆ 2021 ಮತ್ತು 2022 ರಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ಗಣರಾಜ್ಯೋತ್ಸವದಲ್ಲಿ ಭಾಗವಹಿಸಲು ಯಾವುದೇ ಮುಖ್ಯ ಅತಿಥಿಗಳನ್ನು ಈ ಸಮಯದಲ್ಲಿ ಕರೆಸಿಲ್ಲ.
ಇದನ್ನೂ ಓದಿ: Soldier: ಜಮ್ಮು – ಕಾಶ್ಮೀರದ ಪೂಂಛ್ ನಲ್ಲಿ ಉಗ್ರರ ದಾಳಿ… ಹುತಾತ್ಮರ ಸಂಖ್ಯೆ 5ಕ್ಕೆ ಏರಿಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
MUST WATCH
ಹೊಸ ಸೇರ್ಪಡೆ
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.