ಜಾಗತಿಕ ಮಟ್ಟದ ಜವಾಬ್ದಾರಿಯುತ ರಾಷ್ಟ್ರ ಭಾರತ
Team Udayavani, Jul 7, 2020, 12:25 PM IST
ವಿಶ್ವಸಂಸ್ಥೆ: ಭಾರತ, ಜಾಗತಿಕ ಮಟ್ಟದ ಜವಾಬ್ದಾರಿಯುತ ರಾಷ್ಟ್ರವಾಗಿದ್ದು, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸದಸ್ಯನಾಗಿ ವಿವಿಧ ರಾಷ್ಟ್ರಗಳ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಬಲ್ಲದು ಎಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷ ಟಿಜ್ಜನಿ ಮೊಹಮ್ಮದ್ ಬಾಂಡೆ ತಿಳಿಸಿದ್ದಾರೆ.
ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಕಾಮನ್ವೆಲ್ತ್, ಅಲಿಪ್ತ ರಾಷ್ಟ್ರಗಳ ಒಕ್ಕೂಟ, ಜಿ77 ಮುಂತಾದ ಸಂಘಟನೆಗಳಲ್ಲಿ ಭಾರತ ಜವಾಬ್ದಾರಿಯುತವಾಗಿ ನಡೆದುಕೊಂಡಿದೆ. ಈಗ ವಿಶ್ವಸಂಸ್ಥೆಯ ಸದಸ್ಯನಾಗಿ ಜಾಗತಿಕ ಸಮುದಾಯಕ್ಕೆ ಸೇವೆ ಸಲ್ಲಿಸಲು ಭಾರತಕ್ಕೆ ಅವಕಾಶ ಲಭಿಸಿದೆ. ತಂತ್ರಜ್ಞಾನದ ವಿಷಯದಲ್ಲಿ ಭಾರತ ವಿಶ್ವದ ಪ್ರಮುಖ ರಾಷ್ಟ್ರವಾಗಿದೆ. ಕೊರೊನಾಗೆ ಲಸಿಕೆ ತಯಾರಿಸುವ ನಿಟ್ಟಿನಲ್ಲಿ ಭಾರತ ಕೂಡ ವಿಶ್ವಸಂಸ್ಥೆಗೆ ನೆರವಾಗಬಲ್ಲದು ಎಂದು ಹೇಳಿದರು. ಭದ್ರತಾ ಮಂಡಳಿಯ ಶಾಶ್ವತವಲ್ಲದ ಸದಸ್ಯ ಸ್ಥಾನಕ್ಕೆ ಭಾರತ ಕಳೆದ ತಿಂಗಳು ಆಯ್ಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.