![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 15, 2018, 7:19 AM IST
ಸಿಂಗಾಪುರ: ಭಾರತವು ಉತ್ತಮ ಹೂಡಿಕೆ ತಾಣ. ಭಾರತದ 130 ಕೋಟಿ ಜನರನ್ನು ಆರ್ಥಿಕತೆಯಲ್ಲಿ ತೊಡಗಿಸಿಕೊಳ್ಳಲಾಗಿದೆ. ಆಧಾರ್ ಮೂಲಕ 120 ಕೋಟಿ ಬಯೋಮೆಟ್ರಿಕ್ ಗುರುತು ದಾಖಲೆಯನ್ನು ಕೆಲವೇ ವರ್ಷಗಳಲ್ಲಿ ದಾಖಲಿಸಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ, ಸಿಂಗಾಪುರದಲ್ಲಿ ನಡೆಯುತ್ತಿರುವ ವಿಶ್ವದ ಅತಿದೊಡ್ಡ ಹಣಕಾಸು ತಂತ್ರಜ್ಞಾನ ಸಮ್ಮೇಳನವಾದ ಫಿನ್‌ಟೆಕ್ ಫೆಸ್ಟಿವಲ್‌ನಲ್ಲಿ ಹೇಳಿದ್ದಾರೆ.
ಜಾಗತಿಕ ಆರ್ಥಿಕತೆಯ ಸ್ವರೂಪ ಬದಲಾಗುತ್ತಿದೆ. ತಂತ್ರಜ್ಞಾನವು ಸ್ಪರ್ಧಾ ತ್ಮಕತೆ ಯನ್ನು ಹೆಚ್ಚಿಸುತ್ತಿದೆ. ಹೀಗಾಗಿ ಜನರ ಜೀವನ ಮಟ್ಟವನ್ನು ಇದು ಸುಧಾರಿ ಸುತ್ತಿದೆ. ನಮ್ಮ ದೇಶದ ಪಾವತಿ ಸೇವೆಗಳು ಎಲ್ಲರಗೂ ಅನುಕೂಲಕರವಾಗಿರುವುದ ರಿಂದ ನಮ್ಮ ಡಿಜಿಟಲೀಕರಣ ಯಶಸ್ಸು ಕಂಡಿದೆ ಎಂದಿದ್ದಾರೆ. ನಮ್ಮ ಜನಧನ ಯೋಜನೆಯು ದೇಶದ ಪ್ರತಿಯೊಬ್ಬರಿಗೂ ಬ್ಯಾಂಕ್ ಖಾತೆ ಒದಗಿಸುವ ಗುರಿ ಹೊಂದಿದ್ದು, 33 ಕೋಟಿ ಬ್ಯಾಂಕ್ ಖಾತೆ ಗಳನ್ನು ತೆರೆಯಲಾಗಿದೆ ಎಂದಿದ್ದಾರೆ. ಅಲ್ಲದೆ, ಜಾಗತಿಕ ಹಣಕಾಸು ಸಂಸ್ಥೆಗಳನ್ನು ಸಂಪರ್ಕಿಸುವ ಅಪಿಕ್ಸ್ ಎಂಬ ಪ್ಲಾಟ್‌ಫಾರಂ ಅನ್ನೂ ಮೋದಿ ಹಾಗೂ ಸಿಂಗಾ ಪುರ ಉಪಪ್ರಧಾನಿ ಟಿ.ಷಣ್ಮುಗರತ್ನಂ ಉದ್ಘಾಟಿಸಿದ್ದಾರೆ.
ಲೀ ಜೊತೆ ಮಾತುಕತೆ: ಸಿಂಗಾಪುರದ ಪ್ರಧಾನಿ ಲೀ ಸೀನ್ ಲೂಂಗ್‌ರನ್ನು ಪ್ರಧಾನಿ ಮೋದಿ ಭೇಟಿ ಮಾಡಿ ಮಾತು ಕತೆ ನಡೆಸಿದ್ದಾರೆ. ಹಣಕಾಸು ತಂತ್ರಜ್ಞಾನ ಮತ್ತು ಪ್ರಾದೇಶಿಕ ಆರ್ಥಿಕತೆಯಲ್ಲಿ ಸಹಕಾರ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಉಭಯ ಮುಖಂಡರು ಚರ್ಚಿ ಸಿದರು. ಇದೇ ವೇಳೆ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಜೊತೆಗೂ ಮೋದಿ ಮಾತುಕತೆ ನಡೆಸಿದ್ದಾರೆ.
ಪೆನ್ಸ್ ಜೊತೆ ಮೋದಿ: ಅಮೆರಿಕದ ಉಪಾಧ್ಯಕ್ಷ ಮೈಕ್ ಪೆನ್ಸ್ ಜೊತೆಗೆ ಸಿಂಗಾ ಪುರದಲ್ಲಿ ಪ್ರಧಾನಿ ಮೋದಿ ಬುಧವಾರ ವಿವಿಧ ವಿಷಯಗಳ ಕುರಿತು ಮಾತುಕತೆ ನಡೆಸಿದ್ದಾರೆ. ಉಭಯ ದೇಶಗಳ ಮಧ್ಯೆ ರಕ್ಷಣೆ ಸಹಕಾರ ಮತ್ತು ಇಂಡೋ ಪೆಸಿಫಿಕ್ ವಲಯದಲ್ಲಿ ಮುಕ್ತ ವ್ಯಾಪಾರ ವಹಿವಾಟು ಸೇರಿದಂತೆ ಇತರ ವಿಚಾರಗಳ ಕುರಿತು ಚರ್ಚೆ ನಡೆಸಲಾಗಿದೆ.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.