ಧಾರ್ಮಿಕ ಅಲ್ಪಸಂಖ್ಯಾಕರಿಗೆ ಭಾರತ ಸುರಕ್ಷಿತ ದೇಶ; ವಿಶ್ವಸಂಸ್ಥೆಗೂ ಇದೇ ವ್ಯವಸ್ಥೆ ಪಾಲನೆಗೆ ಯೋಗ್ಯ
ಅಮೆರಿಕದ ಸೆಂಟರ್ ಫಾರ್ ಪಾಲಿಸಿ ಅನಾಲಿಸಿಸ್ ಮೆಚ್ಚುಗೆ
Team Udayavani, Nov 30, 2022, 6:30 AM IST
ವಾಷಿಂಗ್ಟನ್: ಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರಿಗೆ ಇತರರ ಜತೆಗೆ ಸೇರಿಕೊಂಡು ಬದುಕು ನಡೆಸುವ ವಾತಾವರಣ ಇದೆ. ಈ ಮಾದರಿಯನ್ನು ವಿಶ್ವಸಂಸ್ಥೆ ಅಳವಡಿಸಿಕೊಳ್ಳಬಹುದು ಎಂದು ಅಮೆರಿಕದ ವಾಷಿಂಗ್ಟನ್‌ನಲ್ಲಿ ಇರುವ ದ ಸೆಂಟರ್ ಫಾರ್ ಪಾಲಿಸಿ ಅನಾಲಿಸಿಸ್ ಎಂಬ ಸಂಸ್ಥೆ ತನ್ನ ವರದಿಯಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದೆ.
ಜಗತ್ತಿನ ಇತರ ದೇಶಗಳಲ್ಲಿ ಇರುವಂತೆ ಯಾವುದೇ ಧಾರ್ಮಿಕ ವಿಭಾಗಗಳಿಗೆ ಭಾರತದಲ್ಲಿ ನಿಷೇಧ ಹೇರಲಾಗಿಲ್ಲ ಎಂದೂ ಅದರಲ್ಲಿ ಶ್ಲಾಘಿಸಲಾಗಿದೆ.
ಧಾರ್ಮಿಕ ಅಲ್ಪಸಂಖ್ಯಾತರಿಗೆ ಸುಲಭವಾಗಿ ಹಾಗೂ ತೊಂದರೆ ಇಲ್ಲದೆ ಜೀವನ ನಡೆಸಲು ಅನುಕೂಲವಾಗಿರುವಂತೆ ಇರುವ ರಾಷ್ಟ್ರಗಳ ಪಟ್ಟಿಯನ್ನು ಈ ಸಂಸ್ಥೆ ಸಿದ್ಧಪಡಿಸಿದೆ. ಅದರಲ್ಲಿ ಭಾರತ ಮೊದಲ ಸ್ಥಾನದಲ್ಲಿ ಇದೆ.
“ಭಾರತದ ಸಂವಿಧಾನದಲ್ಲಿ ಧಾರ್ಮಿಕವಾಗಿ ಅಲ್ಪಸಂಖ್ಯಾತರಾದವರ ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಹಕ್ಕುಗಳಿಗೆ ವಿಶೇಷ ಅವಕಾಶ ಕಲ್ಪಿಸಲಾಗಿದೆ. ಜಗತ್ತಿನ ಇತರ ರಾಷ್ಟ್ರಗಳ ಸಂವಿಧಾನದಲ್ಲಿ ಇಂಥ ಅವಕಾಶ ಕಲ್ಪಿಸಲಾಗಿಲ್ಲ. ಭಾಷಾ ಅಲ್ಪಸಂಖ್ಯಾತರಿಗೂ ಇದೇ ರೀತಿಯ ವಿಶೇಷ ಸವಲತ್ತು ಇದೆ’ ಎಂದು ವರದಿಯಲ್ಲಿ ಸಂತಸ ವ್ಯಕ್ತಪಡಿಸಲಾಗಿದೆ.
ನಿಷೇಧ ಇಲ್ಲ:
ಕೆಲವೊಂದು ದೇಶಗಳಲ್ಲಿ ಕೆಲವು ಧರ್ಮಗಳಿಗೆ ಮತ್ತು ಅವುಗಳ ಆಚರಣೆಗೆ ನಿಷೇಧ ಇರುವಂತೆ ಭಾರತದಲ್ಲಿ ಅಂಥ ವ್ಯವಸ್ಥೆ ಇಲ್ಲ. ಹೀಗಾಗಿ, ಧಾರ್ಮಿಕ ಅಲ್ಪಸಂಖ್ಯಾತರಿಗಾಗಿ ಅನುಸರಿಸುವ ನಿಯಮಗಳನ್ನು ವಿಶ್ವಸಂಸ್ಥೆ ಅಳವಡಿಸಿಕೊಳ್ಳಬಹುದು ಎಂದು ತನ್ನ ವರದಿಯಲ್ಲಿ ಪ್ರಶಂಸೆ ಮಾಡಿ, ಶಿಫಾರಸು ಮಾಡಿದೆ.
ಜಗತ್ತಿನ ಕೆಲವು ದೇಶಗಳಲ್ಲಿ ಅಲ್ಪಸಂಖ್ಯಾತರ ವಿರುದ್ಧ ದೌರ್ಜನ್ಯಗಳು ನಡೆಯುತ್ತಿವೆ ಎಂಬ ಆರೋಪಗಳ ನಡುವೆ “ದ ಗ್ಲೋಬಲ್ ಮೈನಾರಿಟಿ ರಿಪೋರ್ಟ್’ ಪ್ರಕಟವಾಗಿದೆ. ವಿವಿಧ ದೇಶಗಳಲ್ಲಿ ಧಾರ್ಮಿಕ ಅಲ್ಪಸಂಖ್ಯಾತರು ಅನುಭವಿಸುತ್ತಿರುವ ಕಷ್ಟಗಳನ್ನು ಅದರಲ್ಲಿ ಚಿತ್ರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.