ವಿಶ್ವಸಂಸ್ಥೆ ಮಹಾ ಅಧಿವೇಶನದಲ್ಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗೆ ಬೆವರಿಳಿಸಿದ ಭಾರತ!
ರಾಯಭಾರಿ ಮಿಜಿಟೋ ವಿನಿಟೋ ತಕ್ಕ ತಿರುಗೇಟು ನೀಡಿ ಸಭಾತ್ಯಾಗ ಮಾಡಿರುವುದಾಗಿ ವರದಿ ತಿಳಿಸಿದೆ
Team Udayavani, Sep 26, 2020, 11:39 AM IST
ನವದೆಹಲಿ: ವಿಶ್ವಸಂಸ್ಥೆಯ ಮಹಾ ಅಧಿವೇಶನದಲ್ಲಿ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಭಾರತ ಕಟು ಶಬ್ದಗಳಿಂದ ತಿರುಗೇಟು ನೀಡಿದೆ. ವಿಶ್ವಸಂಸ್ಥೆಯಲ್ಲಿ ಭಾರತದ ವಿರುದ್ಧ ಸುಳ್ಳಿನ ಕಥೆ ಹೆಣೆದು ಆರೋಪಿಸಿರುವುದಕ್ಕೆ ತರಾಟೆಗೆ ತೆಗೆದುಕೊಂಡಿರುವ ಭಾರತ, ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವುದನ್ನು ಎತ್ತಿ ತೋರಿಸಿರುವುದಾಗಿ ವರದಿ ತಿಳಿಸಿದೆ.
ವಿಶ್ವಸಂಸ್ಥೆಯ ಮಹಾಅಧಿವೇಶನದಲ್ಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಭಾರತದ ವಿರುದ್ಧ ವಿಷಯ ಪ್ರಸ್ತಾಪಿಸುತ್ತಿರುವುದನ್ನು ಪ್ರತಿಭಟಿಸಿ ಭಾರತದ ರಾಯಭಾರಿ ಮಿಜಿಟೋ ವಿನಿಟೋ ತಕ್ಕ ತಿರುಗೇಟು ನೀಡಿ ಸಭಾತ್ಯಾಗ ಮಾಡಿರುವುದಾಗಿ ವರದಿ ತಿಳಿಸಿದೆ.
ಭಾರತದ ಆಂತರಿಕ ವಿಚಾರದ ಬಗ್ಗೆ ಮೂಗು ತೂರಿಸುತ್ತಿರುವ ಈ ದೇಶ (ಪಾಕಿಸ್ತಾನ) ಕುಖ್ಯಾತ ಮತ್ತು ಭೂಗತ ಪಾತಕಿಗಳಿಗೆ ಪಿಂಚಣಿಯನ್ನು ನೀಡುತ್ತಿದೆ. ಅಷ್ಟೇ ಅಲ್ಲ ವಿಶ್ವಸಂಸ್ಥೆ ಪಟ್ಟಿ ಮಾಡಿರುವ ಕುಖ್ಯಾತ ಉಗ್ರಗಾಮಿಗಳು ಕೂಡಾ ಇದೇ ದೇಶದವರು ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
ಭಾರತದ ಮೇಲೆ ಗೂಬೆ ಕೂರಿಸುತ್ತಿರುವ ಇಮ್ರಾನ್ ಖಾನ್ ಪಾಕಿಸ್ತಾನ ಸಂಸತ್ ನಲ್ಲಿ ಕಳೆದ ವರ್ಷ ನಡೆದಿದ್ದ ಅಧಿವೇಶನದಲ್ಲಿ ಉಗ್ರ ಒಸಾಮಾ ಬಿನ್ ಲಾಡೆನ್ ನನ್ನು ಹೇಗೆ ಹುತಾತ್ಮ ಎಂದು ಹೇಳಿದ್ದರು ಎಂಬುದನ್ನು ನೆನಪಿಸಿಕೊಳ್ಳಲಿ. ಅಲ್ಲದೇ ಭಾರತದ ಕೇಂದ್ರಾಡಳಿತ ಪ್ರದೇಶವಾದ ಜಮ್ಮು-ಕಾಶ್ಮೀರ ಮತ್ತು ಅಫ್ಘಾನಿಸ್ತಾನದಲ್ಲಿ ತಮ್ಮ ದೇಶದ 40, 000 ಉಗ್ರರು ಹೋರಾಡುತ್ತಿರುವುದಾಗಿ ಒಪ್ಪಿಕೊಂಡಿದ್ದರು ಎಂದು ವಿನಿಟೋ ತಿರುಗೇಟು ನೀಡಿರುವುದಾಗಿ ವರದಿ ವಿವರಿಸಿದೆ.
ಧಾರ್ಮಿಕವಾಗಿಯೂ ಕಿರುಕುಳ ನೀಡುವುದರಲ್ಲಿ ಪಾಕಿಸ್ತಾನ ಹಿಂದೆ ಬಿದ್ದಿಲ್ಲ ಎಂದಿರುವ ವಿನಿಟೋ, ಈ ದೇಶ ವ್ಯವಸ್ಥಿತವಾಗಿ ಅಲ್ಪಸಂಖ್ಯಾತರಾಗಿರುವ ಹಿಂದುಗಳು, ಕ್ರಿಶ್ಚಿಯನ್, ಸಿಖ್ ಹಾಗೂ ಇತರ ಧರ್ಮಗಳ ಜನರ ಮೇಲೆ ಧಾರ್ಮಿಕ ನಿಂದನೆ ಕಾಯ್ದೆಯನ್ನು ಬಳಸಿಕೊಂಡು ಕೇಸು ದಾಖಲಿಸುವುದು ಹಾಗೂ ಬಲವಂತವಾಗಿ ಮತಾಂತರ ಮಾಡುವ ಮೂಲಕ ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel ಪ್ರಧಾನಿ ಬೆಂಜಮಿನ್ ನೆತನ್ಯಾಹುಗೆ ಪ್ರಾಸ್ಟೇಟ್ ಶಸ್ತ್ರಚಿಕಿತ್ಸೆ
Kazakhstan: ಕಜಕ್ ವಿಮಾನವನ್ನು ರಷ್ಯಾವೇ ಉರುಳಿಸಿದೆ: ಅಜರ್‌ಬೈಜಾನ್
Bangladesh ಮತದಾನದ ಅರ್ಹ ವಯಸ್ಸು 17ಕ್ಕಿಳಿಸಲು ಚಿಂತನೆ
S.Korea: ರನ್ ವೇಯಲ್ಲಿ ಸ್ಕಿಡ್ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ
Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.