ಪಾಕ್ ವಿರುದ್ಧ ಭಾರತ ಕಠಿನ ಕ್ರಮ ಸಾಧ್ಯತೆ
Team Udayavani, Feb 24, 2019, 12:30 AM IST
ಪುಲ್ವಾಮಾ ದಾಳಿ ಅನಂತರದಲ್ಲಿ ಭಾರತ ಮತ್ತು ಪಾಕ್ ಮಧ್ಯೆ ಪರಿಸ್ಥಿತಿ ಉದ್ವಿಗ್ನಗೊಂಡಿದೆ ಎಂಬು ದನ್ನು ಸಮ್ಮತಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತ ಕಠಿನ ಕ್ರಮ ಕೈಗೊಳ್ಳಲು ನಿರ್ಧರಿ ಸುತ್ತಿರುವಂತೆ ಕಾಣುತ್ತಿದೆ ಎಂದಿದ್ದಾರೆ.
ಭಾರತ 50 ಯೋಧರನ್ನು ಕಳೆದು ಕೊಂಡಿದೆ. ನನಗೆ ಭಾರತದ ನೋವು ಅರ್ಥ ಆಗುತ್ತದೆ. ಅಮೆರಿಕ, ಇತರ ದೇಶಗಳು ಭಾರತ ಮತ್ತು ಪಾಕ್ ಜತೆ ಮಾತುಕತೆ ನಡೆಸುತ್ತಿವೆ. ಆದರೆ ಇದು ಸೂಕ್ಷ್ಮ ಸನ್ನಿವೇಶ. ಈ ಘಟನೆಯ ನಂತರ ಭಾರತ, ಪಾಕ್ ಮಧ್ಯೆ ತುಂಬಾ ಸಮಸ್ಯೆಗಳು ಉದ್ಭವವಾಗಿವೆ. ಪುಲ್ವಾಮಾ ಘಟನೆಯ ನಂತರದ ಮಾತುಕತೆಯಲ್ಲಿ ನಾವು ಸಕ್ರಿಯವಾಗಿದ್ದೇವೆ. ಇದು ತುಂಬಾ ಅಪಾಯಕಾರಿ ಮತ್ತು ಕೆಟ್ಟ ಸ್ಥಿತಿ. ಇದು ಸಾಧ್ಯವಾದಷ್ಟು ಬೇಗ ನಿಲ್ಲಬೇಕು ಎಂದು ಬಯಸಿದ್ದೇವೆ ಎಂದೂ ಹೇಳಿದ್ದಾರೆ.
ಪಾಕಿಸ್ಥಾನಕ್ಕೆ ನಾವು ನೀಡುತ್ತಿದ್ದ 1.3 ಬಿಲಿಯನ್ ಡಾಲರ್ ನೆರವು ನಿಲ್ಲಿಸಿದ್ದೇವೆ. ಪಾಕ್ ಜತೆ ಮಾತು ಕತೆ ನಡೆಸುವ ಸಾಧ್ಯತೆಯೂ ಇದೆ. ಈ ಹಿಂದಿನ ಅಧ್ಯಕ್ಷರ ಅವಧಿಯಲ್ಲಿ ಅಮೆರಿಕದಿಂದ ಪಾಕಿಸ್ಥಾನ ತುಂಬಾ ಲಾಭ ಪಡೆದಿದೆ. ಹಾಗಂತ, ಅವರಿಗೆ ಬೇಕಾದ ರೀತಿಯಲ್ಲಿ ನಾವು ಸಹಾಯ ಮಾಡ ಲಾಗದು ಎಂದಿದ್ದಾರೆ ಟ್ರಂಪ್.
ಈಗಾಗಲೇ ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್ ಬೋಲ್ಟನ್ ಜೊತೆಗೆ ಭಾರತದ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮಾತ ನಾಡಿದ್ದು, ಭಾರತಕ್ಕೆ ಸ್ವಯಂ ರಕ್ಷಣೆ ಹಕ್ಕು ಇದೆ ಎಂದು ಬೋಲ್ಟನ್ ಹೇಳಿದ್ದರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಕಿಸ್ಥಾನದ ವಿರುದ್ಧ ರಾಜತಾಂತ್ರಿಕ ಕ್ರಮಗಳನ್ನು ಭಾರತ ಕೈಗೊಳ್ಳುತ್ತಿದ್ದು, ಪಾಕಿಸ್ಥಾನವು ಉಗ್ರರನ್ನು ಪೋಷಿಸುತ್ತಿರುವ ಬಗ್ಗೆ ಇತರ ದೇಶಗಳಿಗೆ ಮನವರಿಕೆ ಮಾಡಿಕೊಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.