ನ್ಯೂಯಾರ್ಕ್ ದಕ್ಷಿಣ ಜಿಲ್ಲೆಗೆ ಜಡ್ಜ್ ಆಗಿ ಭಾರತೀಯ ಮೂಲದ ವಕೀಲ
Team Udayavani, Sep 8, 2022, 7:45 AM IST
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಜೋ ಬಿಡನ್ ಅವರು ಭಾರತೀಯ ಮೂಲದ ವಕೀಲ ಅರುಣ್ ಸುಬ್ರಮಣಿಯನ್ ಅವರನ್ನು ನ್ಯೂಯಾರ್ಕ್‌ನ ದಕ್ಷಿಣ ಜಿಲ್ಲೆಗೆ ಅಮೆರಿಕ ಜಿಲ್ಲಾ ನ್ಯಾಯಾಧೀಶರಾಗಿ ನೇಮಿಸಿದ್ದಾರೆ.
ಸುಬ್ರಮಣಿಯನ್ ಅವರು ನ್ಯೂಯಾರ್ಕ್‌ನ ದಕ್ಷಿಣ ಜಿಲ್ಲೆಗೆ ಅಮೆರಿಕ ಜಿಲ್ಲಾ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಲಿರುವ ಮೊದಲ ದಕ್ಷಿಣ ಏಷ್ಯಾದ ನ್ಯಾಯಾಧೀಶರಾಗಿದ್ದಾರೆ. ಸುಬ್ರಮಣಿಯನ್ ಅವರು 2001ರಲ್ಲಿ ಕೇಸ್ ವೆಸ್ಟರ್ನ್ ರಿಸರ್ವ್ ವಿವಿಯಿಂದ ಬಿಎ ಪದವಿ ಹಾಗೂ 2004ರಲ್ಲಿ ಕೊಲಂಬಿಯಾ ಲಾ ಸ್ಕೂಲ್‌ನಿಂದ ಜೆ.ಡಿ. ಪದವಿ ಪಡೆದಿದ್ದಾರೆ. ಪ್ರಸ್ತುತ ನ್ಯೂಯಾರ್ಕ್‌ನ ಸುಸ್ಮಾನ್ ಗಾಡ್ಫ್ರೆ ಎಲ್‌ಎಲ್‌ಪಿ ಯ ಪಾಲುದಾರರಾಗಿದ್ದಾರೆ.
ಮೊದಲ ಭಾರತೀಯ: ಅಮೆರಿಕದ ವಿದೇಶಾಂಗ ಸಚಿವಾಲಯದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಭಾರತೀಯ ಮೂಲದ ವ್ಯಕ್ತಿ ಪತ್ರಿಕಾಗೋಷ್ಠಿ ನಡೆಸಿ ಪ್ರಮುಖ ವಿಚಾರಗಳನ್ನು ವಿವರಿಸಿದ್ದಾರೆ. ಸದ್ಯ ಅವರು ಪ್ರಧಾನ ಉಪ ಮಾಧ್ಯಮ ವಕ್ತಾರ ವೇದಾಂತ್ ಪಟೇಲ್ ಅಮೆರಿಕದ ವಿದೇಶಾಂಗ ಸಚಿವಾಲಯದ ಪತ್ರಿಕಾಗೋಷ್ಠಿ ನಡೆಸಿದ ಮೊದಲ ಭಾರತೀಯ ಮೂಲದವರು ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.
ಗುಜರಾತ್ ಮೂಲದವರಾಗಿದ್ದಾರೆ. ಕ್ಯಾಲಿಫೋರ್ನಿಯಾ ವಿವಿಯ ಪದವೀಧರರಾಗಿದ್ದಾರೆ. ಸದ್ಯ ಅವರು ವಿದೇಶಾಂಗ ಇಲಾಖೆಯಲ್ಲಿ ಪ್ರಧಾನ ಉಪವಕ್ತಾರರಾಗಿದ್ದಾರೆ. ಅಧ್ಯಕ್ಷ ಜೋ ಬೈಡೆನ್ ಅವರಿಗೆ ಸಹಾಯಕ ಪತ್ರಿಕಾ ಕಾರ್ಯದರ್ಶಿ ಮತ್ತು ವಕ್ತಾರನಾಗಿ ಸೇವೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್ ಕೋರ್ಟ್ ಆದೇಶ
New Virus: ಚೀನದಲ್ಲಿ ಹೊಸ ವೈರಸ್ ಹಬ್ಬುತ್ತಿರುವ ಬಗ್ಗೆ ವದಂತಿ!
Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!
Thumbay Group; ಶಾರ್ಜಾದಲ್ಲಿ ಮೊದಲ ಖಾಸಗಿ ಮನೋವೈದ್ಯಕೀಯ ಪುನರ್ ವಸತಿ ಆಸ್ಪತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.