ಕೋವಿಡ್ ಸೋಂಕಿತರ ಸಮಸ್ಯೆಗೆ ಔಷಧಿ ಸಂಶೋಧನೆ: ಭಾರತೀಯ ಮೂಲದ ವೈದ್ಯೆಯ ಸಾಧನೆ !
Team Udayavani, Nov 21, 2020, 9:30 PM IST
ವಾಷಿಂಗ್ಟನ್:ಕೋವಿಡ್ ಸೋಂಕಿತರು ಎದುರಿಸುವ ಶ್ವಾಸಕೋಶ ಸಂಬಂಧಿ ಹಾಗೂ ಬಹು ಅಂಗಾಗ ವೈಫಲ್ಯದಂತಹ ಸಮಸ್ಯೆಗಳನ್ನು ಪರಿಹರಿಸಲು ಭಾರತೀಯ ಮೂಲದ ಅಮೆರಿಕ ವೈದ್ಯರು ಔಷಧಿ ಸಂಶೋಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಮೆರಿಕದಲ್ಲಿರುವ ಸೆಂಟ್ ಜೂಡ್ ಮಕ್ಕಳ ಸಂಶೋಧನಾ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ.ತಿರುಮಲಾ ದೇವಿ ಕನ್ನೆಗಂಟಿ ಅವರೇ ಈ ಸಂಶೋಧನೆ ನಡೆಸಿದವರು.
ಕೋವಿಡ್ ಸೋಂಕಿಗೆ ತುತ್ತಾದ ವ್ಯಕ್ತಿಯ ಜೀವ ಕಣಗಳು ಯಾವ ರೀತಿ ಸಾವನ್ನಪ್ಪುತ್ತವೆ ಎಂಬುದರ ಕುರಿತಾಗಿ ಸಂಶೋಧನೆ ನಡೆಸಿದ ಇವರು, ಆ ಮೂಲಕ ಸೋಂಕಿತರಲ್ಲಿ ಕಂಡುಬರುವ ಶ್ವಾಸಕೋಶದ ಸಮಸ್ಯೆ ಮತ್ತು ಬಹು ಅಂಗಾಗ ವೈಪಲ್ಯವನ್ನು ತಡೆಗಟ್ಟುವ ಔಷಧಿಯನ್ನು ಪತ್ತೆಹಚ್ಚಿದ್ದಾರೆ. ಈ ಕುರಿತ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಪರಿಣಾಮಕಾರಿಯಾದ ಚಿಕಿತ್ಸೆಯನ್ನು ನೀಡುವ ಮುನ್ನ ಸಮಸ್ಯೆಯ ರೀತಿಯನ್ನು ಅರ್ಥೈಸಿಕೊಳ್ಳುವುದು ಅತ್ಯಂತ ಪ್ರಮುಖವಾದ ಅಂಶವಾಗಿದೆ ಎಂದು ಸೆಂಟ್ ಜೂಡ್ ರೋಗ ನಿರೋಧಕ ಶಾಸ್ತ್ರ ವಿಭಾಗದ ಉಪಾಧ್ಯಕ್ಷೆ ಡಾ ಕನ್ನೆಗಂಟಿ ಹೇಳಿದ್ದಾರೆ.
ಇದನ್ನೂ ಓದಿ: ಕನ್ನಡ ಪರ ಹೋರಾಟಗಾರರು ಡೋಂಗಿಗಳು ಎಂದ ಯತ್ನಾಳ ಹೇಳಿಕೆ ಖಂಡಿಸಿ ಕರವೇ ಕಾರ್ಯಕರ್ತರ ಪ್ರತಿಭಟನೆ
ಡಾ ಕನ್ನೆಗಂಟಿ ಮೂಲತಃ ತೆಲಂಗಾಣದವರು. ಇವರು ತಮ್ಮ ಪದವಿ ವ್ಯಾಸಂಗವನ್ನು ವಾರಂಗಲ್ ನ ಕಾಕತಿಯಾ ವಿಶ್ವವಿದ್ಯಾನಿಲಯದಲ್ಲಿ ಪುರ್ಣಗೊಳಿಸಿದರು. ನಂತರ ರಸಾಯನ ಶಾಸ್ತ್ರ, ಪ್ರಾಣಿ ಶಾಸ್ತ್ರ,ಹಾಗೂ ಸಸ್ಯ ಶಾಸ್ತ್ರದಲ್ಲಿ ಉನ್ನತ ವ್ಯಾಸಂಗವನ್ನು ಮಾಡಿದ ಇವರು 2007 ರಿಂದ ಅಮೆರಿಕದ ಸೆಂಟ್ ಜೂಡ್ ಮಕ್ಕಳ ಸಂಶೋಧನಾ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಈ ಸಂಶೋಧನೆಯ ಅಧ್ಯಯನವು ಕೋವಿಡ್ ಒಳಗೊಂಡಂತೆ ‘ಸೆಪ್ಸಿಸ್’ನಂತಹ ಇತರ ಮಾರಣಾಂತಿಕ ಸಮಸ್ಯೆಗಳ ವಿರುದ್ಧ ಹೋರಾಡಲು ಸಹಾಯ ಮಾಡಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Qatar: ಕತಾರ್ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ
NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 139: ನಿರಂತರಾಭ್ಯಾಸದಿಂದ ಅಭಿಮಾನತ್ಯಾಗ ಸಾಧ್ಯ
Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!
Jagjit Singh Dallewal: ರೈತ ನಾಯಕನನ್ನು ಆಸ್ಪತ್ರೆಗೆ ದಾಖಲಿಸಲು ಡಿ.31ರ ಗಡುವು
Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
Udupi: ತಂಡಗಳ ನಡುವೆ ಹಲ್ಲೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.