ಜೋ ಬೈಡೆನ್ ಪತ್ನಿ ಜಿಲ್ ಗೆ ಉಡುಪಿ ಮೂಲದ ಮಾಲಾ ಅಡಿಗ “ನೀತಿ ನಿರ್ದೇಶಕಿ”
ಮಾಲಾ ಅಡಿಗ ಬೈಡೆನ್ ಫೌಂಡೇಶನ್ ನ ಉನ್ನತ ಶಿಕ್ಷಣ ಮತ್ತು ಮಿಲಿಟರಿ ಫ್ಯಾಮಿಲೀಸ್ ನ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.
Team Udayavani, Nov 21, 2020, 10:42 AM IST
ವಾಷಿಂಗ್ಟನ್:ಅಮೆರಿಕದ ನಿಯೋಜಿತ ಅಧ್ಯಕ್ಷ ಜೋ ಬೈಡೆನ್ ಅವರು ಉಡುಪಿ ಮೂಲದ ಮಾಲಾ ಅಡಿಗ ಅವರನ್ನು ಬೈಡೆನ್ ಪತ್ನಿ, ದೇಶದ ಪ್ರಥಮ ಮಹಿಳೆ ಜಿಲ್ ಬೈಡೆನ್ ಅವರ “ನೀತಿ ನಿರ್ದೇಶಕ”ರನ್ನಾಗಿ ಆಯ್ಕೆ ಮಾಡಿರುವುದಾಗಿ ವರದಿ ತಿಳಿಸಿದೆ.
ಮಾಲಾ ಅಡಿಗ ಅವರು ಜಿಲ್ ಅವರ ಹಿರಿಯ ಸಲಹೆಗಾರರಾಗಿ ಸೇವೆ ಸಲ್ಲಿಸಲಿದ್ದಾರೆ. ಅಲ್ಲದೇ ಬೈಡೆನ್ ಹಾಗೂ ಕಮಲಾ ಹ್ಯಾರಿಸ್ ಅವರ ಚುನಾವಣಾ ಪ್ರಚಾರದ ಅಭಿಯಾನದ ಹಿರಿಯ ನೀತಿ ಸಲಹೆಗಾರರಾಗಿ ಕಾರ್ಯನಿರ್ವಹಿಸಿದ್ದರು. ಈ ಮೊದಲು ಮಾಲಾ ಅಡಿಗ ಬೈಡೆನ್ ಫೌಂಡೇಶನ್ ನ ಉನ್ನತ ಶಿಕ್ಷಣ ಮತ್ತು ಮಿಲಿಟರಿ ಫ್ಯಾಮಿಲೀಸ್ ನ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.
ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಆಡಳಿತಾವಧಿಯಲ್ಲಿ ಮಾಲಾ ಅಡಿಗ ಅವರು ಶೈಕ್ಷಣಿಕ ಮತ್ತು ಸಾಂಸ್ಕೃತಿಕ ವ್ಯವಹಾರಗಳ ಬ್ಯೂರೋದ ಡೆಪ್ಯುಟಿ ಅಸಿಸ್ಟೆಂಟ್ ಸೆಕ್ರೆಟರಿಯಾಗಿ ಹಾಗೂ ಜಾಗತಿಕ ಮಹಿಳಾ ಸಮಸ್ಯೆಗಳ ಕಾರ್ಯದರ್ಶಿ, ಮಾನವ ಹಕ್ಕುಗಳ ರಾಷ್ಟ್ರೀಯ ಭದ್ರತಾ ಸಿಬ್ಬಂದಿಗಳ ನಿರ್ದೇಶಕಿಯಾಗಿ ಮಾಲಾ ಅವರು ಕಾರ್ಯನಿರ್ವಹಿಸಿದ್ದರು.
ಉಡುಪಿ ಮೂಲದ ಮಾಲಾ ಅಡಿಗ ಅಮೆರಿಕದ ಇಲಿನಾಯ್ಸ್ ನಿವಾಸಿಯಾಗಿದ್ದು, ಗ್ರಿನ್ನೆಲ್ಲ್ ಕಾಲೇಜಿನಲ್ಲಿ ಪದವಿ ಪಡೆದಿದ್ದರು. ಚಿಕಾಗೋ ಯೂನಿರ್ವಸಿಟಿಯಲ್ಲಿ ಕಾನೂನು ಪದವಿ ಪಡೆದಿದ್ದರು. ಮಾಲಾ ಅಡಿಗ ಅವರು 2008ರ ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರ ಚುನಾವಣಾ ಪ್ರಚಾರದಲ್ಲಿ ಕೈಜೋಡಿಸುವ ಮುನ್ನ ಚಿಕಾಗೋ ಕಾನೂನು ಸಚಿವಾಲಯದಲ್ಲಿ ಕಾರ್ಯನಿರ್ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Donald Trump: ನೀಲಿ ಚಿತ್ರ ತಾರೆಗೆ ಲಂಚ: ಅಧಿಕಾರಕ್ಕೆ ಮೊದಲೇ ಟ್ರಂಪ್ ಕೇಸಿನ ತೀರ್ಪು
House Of Representatives: ಈ ಬಾರಿ ಅಮೆರಿಕ ಸಂಸತ್ತಲ್ಲಿ ಗರಿಷ್ಠ ಸಂಖ್ಯೆ ಹಿಂದುಗಳು!
HMPV; ಚಳಿಗಾಲದಲ್ಲಿ ಸೋಂಕು ಸಾಮಾನ್ಯ: ಗಾಬರಿ ಬೇಡ ಎಂದ ಚೀನ
Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ
PM Modi Gifts: 2023ರಲ್ಲಿ ಬೈಡನ್ ಪತ್ನಿ ಜಿಲ್ ಅವರಿಗೆ ಮೋದಿ 17 ಲಕ್ಷದ ಉಡುಗೊರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.