ಕ್ಯಾಲಿಫೋರ್ನಿಯಾ:800 ಅಡಿ ಪ್ರಪಾತಕ್ಕೆ ಬಿದ್ದ ಭಾರತೀಯ ದಂಪತಿ !
Team Udayavani, Oct 30, 2018, 2:38 PM IST
ನ್ಯೂಯಾರ್ಕ್: ಭಾರತೀಯ ಮೂಲದ ಸಾಫ್ಟ್ವೇರ್ ಉದ್ಯೋಗಿ ದಂಪತಿಗಳಿಬ್ಬರು ಪ್ರವಾಸಿ ಸ್ಥಳದಲ್ಲಿ ಪ್ರಪಾತಕ್ಕೆ ಬಿದ್ದು ದಾರುಣವಾಗಿ ಸಾವನ್ನಪ್ಪಿದ ಘಟನೆ ಅಮೆರಿಕಾದಲ್ಲಿ ನಡೆದಿದೆ.
ಕ್ಯಾಲಿಫೋರ್ನಿಯಾದ ಯೋಸೆಮೈಟ್ ನ್ಯಾಷನಲ್ ಪಾರ್ಕ್‌ನಲ್ಲಿ ಆಕ್ಟೋಬರ್ 25 ರಂದು ವಿಷ್ಣು ವಿಶ್ವನಾಥ್ (29) ಮತ್ತು ಪತ್ನಿ ಮೀನಾಕ್ಷಿ ಮೂರ್ತಿ (30) ಅವರು 800 ಅಡಿ ಆಳಕ್ಕೆ ಬಿದ್ದು ದಾರುಣವಾಗಿ ಸಾವನ್ನಪ್ಪಿದ್ದಾರೆ. ಅವರ ಶವಗಳನ್ನು ಸೋಮವಾರ ಮೇಲಕ್ಕೆತ್ತಿ ಗುರುತು ಪತ್ತೆ ಹಚ್ಚಲಾಗಿದೆ ಎಂದು ತಿಳಿದು ಬಂದಿದೆ.
ವಿಷ್ಣು ಅವರಿಗೆ ಇತ್ತೀಚೆಗೆ ಸಿಸ್ಕೋ ಕಂಪೆನಿಯಲ್ಲಿ ಸಿಸ್ಟಂ ಇಂಜಿನಿಯರ್ ಆಗಿ ಕೆಲಸ ಸಿಕ್ಕಿದ ಹಿನ್ನಲೆಯಲ್ಲಿ ದಂಪತಿಗಳು ಅಮೆರಿಕಕ್ಕೆ ತೆರಳಿ ಅಲ್ಲಿ ನೆಲೆಸಿದ್ದರು.
ಇಬ್ಬರು ಚಾರಣ ಪ್ರಿಯರಾಗಿದ್ದು ಸಾಹಸ ಪ್ರವೃತ್ತಿಯವರಾಗಿದ್ದರು. ಹಾಲಿಡೇಸ್ ಎಂಡ್ ಹ್ಯಾಪಿಲಿ ಎವರ್ ಆಫ್ಟರ್ ಎನ್ನುವ ಬ್ಲಾಗ್‌ನಲ್ಲಿ ತಮ್ಮ ಪ್ರವಾಸದ ಅನುಭವಗಳನ್ನು ಪೋಸ್ಟ್ ಮಾಡುತ್ತಿದ್ದರು.
ದಂಪತಿ 2014 ರಲ್ಲಿ ವಿವಾಹವಾಗಿದ್ದರು. ಚೆಂಗನೂರಿನಲ್ಲಿ ಇಬ್ಬರು ಇಂಜಿನಿಯರಿಂಗ್ ವ್ಯಾಸಂಗ ಮಾಡಿದ್ದರು.
ಯಾವ ಕಾರಣಕ್ಕಾಗಿ ಅವರು ಪ್ರಪಾತಕ್ಕೆ ಬಿದ್ದಿದ್ದಾರೆ ಎನ್ನುವುದು ತಿಳಿದು ಬಂದಿಲ್ಲ. ನಾವು ಆ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಇದೊಂದು ದುರಂತ ಎಂದು ಪಾರ್ಕ್‌ನ ವಕ್ತಾರ ಜಾಮೀ ರಿಚರ್ಡ್ಸ್ ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Israel; ಪ್ರಧಾನಿ ನಿವಾಸಕ್ಕೆ ಬಾಂಬ್ ದಾಳಿ: 3 ಮಂದಿ ಸೆರೆ
PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
MUST WATCH
ಹೊಸ ಸೇರ್ಪಡೆ
T20 series: ಪಾಕಿಸ್ಥಾನಕ್ಕೆ ವೈಟ್‌ವಾಶ್ ಟಿ20: ಆಸ್ಟ್ರೇಲಿಯ 3-0 ಜಯಭೇರಿ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
BGT 2024: ಐಪಿಎಲ್ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್!
Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ
Hosanagar: ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ: 29 ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.