“ಅಗ್ನಿ-5′ ಪರೀಕ್ಷೆ ವೈಫಲ್ಯ ಮುಚ್ಚಿಡಲು ಭಾರತದ ಪ್ರಯತ್ನ: ಚೀನಾ ಆರೋಪ
ಮೋದಿ ಸರ್ಕಾರ ಟೀಕಿಸಿ ಚೀನಾ ಸರ್ಕಾರಿ ಪತ್ರಿಕೆಯಲ್ಲಿ ಸಂಪಾದಕೀಯ
Team Udayavani, Nov 1, 2021, 6:38 AM IST
ಬೀಜಿಂಗ್:ಕೆಲ ದಿನಗಳ ಹಿಂದೆ “ಅಗ್ನಿ-5′ ಕ್ಷಿಪಣಿ ಪರೀಕ್ಷೆಯನ್ನು ಭಾರತ ಯಶಸ್ವಿಯಾಗಿ ನೆರವೇರಿಸಿದ್ದು ಚೀನಾವನ್ನು ಕೆರಳಿಸಿದೆ. ಭಾರತದಲ್ಲಿನ ಮಾಧ್ಯಮಗಳು ಅದನ್ನು ವೈಭವೀಕರಿಸಿ ವರದಿ ಮಾಡಿರುವುದಕ್ಕೆ ಆಕ್ಷೇಪ ಮಾಡಿದೆ. ಜತೆಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸೋಂಕಿನ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ವಿಫಲವಾಗಿದೆ ಎಂದೂ ಚೀನಾ ಟೀಕಿಸಿದೆ.
“ಸೋಂಕಿನಿಂದಾಗಿ ಭಾರತದ ಅರ್ಥ ವ್ಯವಸ್ಥೆ ಭಾರೀ ಸಮಸ್ಯೆ ಎದುರಿಸಿದೆ. ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅದನ್ನು ಸೂಕ್ತವಾಗಿ ನಿಭಾಯಿಸಿಲ್ಲ. ಮೂರು ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ಸಮಸ್ಯೆ ಪರಿಹರಿಸಲೂ ಭಾರತ ಸರ್ಕಾರ ಕ್ರಮ ಕೈಗೊಂಡಿಲ್ಲ’ ಎಂದು ಟೀಕಿಸಲಾಗಿದೆ.
ಇದನ್ನೂ ಓದಿ:ನ. 5ಕ್ಕೆ ಪ್ರಧಾನಿ ಉತ್ತರಾಖಂಡ ಭೇಟಿ : ಕಾರ್ಯಕ್ರಮ ರಂಗು ಹೆಚ್ಚಿಸಲಿರುವ ಸಾಧು-ಸಂತರು
“ದೇಶದಲ್ಲಿನ ಆಂತರಿಕ ವಿಚಾರಗಳಿಂದ ಜನರನ್ನೇ ಬೇರೆಡೆ ಸೆಳೆಯಲು ಮಾಡಿದ ಪ್ರಯತ್ನ’ ಎಂದು ಕಮ್ಯೂನಿಸ್ಟ್ ಪಾರ್ಟಿ ಆಫ್ ಚೀನಾದ ಮುಖವಾಣಿ “ಗ್ಲೋಬಲ್ ಟೈಮ್ಸ್’ ನಲ್ಲಿ ಬರೆಯಲಾಗಿರುವ ಸಂಪಾದಕೀಯದಲ್ಲಿ ಉಲ್ಲೇಖಿಸಲಾಗಿದೆ. ಇದರ ಜತೆಗೆ ಅಮೆರಿಕ ಕೂಡ ಭಾರತ ಮತ್ತು ಚೀನಾ ನಡುವೆ ಶಸ್ತ್ರಾಸ್ತ್ರ ಸಮರ ಉಂಟಾಗಲು ಕುಮ್ಮಕ್ಕು ನೀಡುತ್ತಿದೆ ಎಂದು ಅದರಲ್ಲಿ ಟೀಕಿಸಲಾಗಿದೆ. ಬೀಜಿಂಗ್ ಎಂದರೆ ಭಯಹುಟ್ಟಿಸುವ ರೀತಿಯಲ್ಲಿ ವರ್ತಿಸುತ್ತಿದೆ ಎಂದು ಬಿಂಬಿಸುವ ಪ್ರಯತ್ನ ನಡೆದಿದೆ ಎಂದು ದೂರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
America: ಬೋಯಿಂಗ್ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ
Vivek Ramaswamy: ವಿವೇಕ್‌ಗೆ ಟ್ರಂಪ್ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ
Viral: ಜನಪ್ರಿಯ ಟಿಕ್ ಟಾಕ್ ತಾರೆಯ ಖಾಸಗಿ ವಿಡಿಯೋ ಲೀಕ್.. ಭಾರೀ ವೈರಲ್
ಮಡೋನಾಗೆ ಯೋಗ ಕಲಿಸಿದ್ದ ಅಂತಾರಾಷ್ಟ್ರೀಯ ಯೋಗ ಗುರು ಮೈಸೂರಿನ ಶರತ್ ನಿಧನ
US ಅಧಿಕಾರಶಾಹಿ ಸ್ವಚ್ಛಗೊಳಿಸಲು ಮಸ್ಕ್, ವಿವೇಕ್ ರಾಮಸ್ವಾಮಿ ಆಯ್ಕೆ ಮಾಡಿದ ಟ್ರಂಪ್
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.