ನೋಟು ಅಮಾನ್ಯ, ಜಿಎಸ್‌ಟಿಯಿಂದ ಭಾರತದ ಪ್ರಗತಿ ಕುಂಠಿತ: ಅಮೆರಿಕ
Team Udayavani, Feb 22, 2018, 3:44 PM IST
ವಾಷಿಂಗ್ಟನ್ : ನೋಟು ಅಮಾನ್ಯ ಮತ್ತು ಜಿಎಸ್‌ಟಿ ಅನುಷ್ಠಾನದಿಂದಾಗಿ ಭಾರತದ ಆರ್ಥಿಕ ಪ್ರಗತಿ ಕುಂಠಿತಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತೆ ಹೇಳಿದೆ.
ಭಾರತ ಸೇರಿದಂತೆ ನಾಲ್ಕು ಪ್ರಮುಖ ದೇಶಗಳೊಂದಿಗಿನ ಅಮೆರಿಕದ ದ್ವಿಪಕ್ಷೀಯ ವಾಣಿಜ್ಯ ಕೊರತೆ ಹಿಂದಿನ ವರ್ಷದ ಅವಧಿಗೆ ಹೋಲಿಸಿದಾಗ 2017ರ ಮೊದಲ ಮೂರು ತ್ತೈಮಾಸಿಕದಲ್ಲಿ ಹೆಚ್ಚಿದೆ ಎಂದು ವಾಷಿಂಗ್ಟನ್ ಹೇಳಿದೆ.
1948ರಿಂದಲೂ ಗ್ಯಾಟ್ ಒಪ್ಪಂದಕ್ಕೆ ಸಹಿ ಹಾಕಿರುವ ಭಾರತ ಮತ್ತು ಬ್ರಝಿಲ್ ಸೇರಿದ ದೇಶಗಳು ತುಂಬಾ ಕಡಿಮೆ ರೀತಿಯಲ್ಲಿ ವಾಣಿಜ್ಯ ಮುಕ್ತವಾಗಿವೆ; ಉನ್ನತ ದರಗಳನ್ನು ಅವು ಕಾಯ್ದಕೊಂಡಿವೆ ಮತ್ತು ಸಾರ್ವತ್ರಿಕ ಬದ್ಧತೆಯನ್ನು ತಪ್ಪಿಸಿಕೊಂಡಿವೆ ಎಂದು ಅಧ್ಯಕ್ಷರ ಆರ್ಥಿಕ ವರದಿಯಲ್ಲಿ ಹೇಳಲಾಗಿದೆ. ಈ ವರದಿಯಲ್ಲಿ ಅಮೆರಿಕ ಆರ್ಥಿಕತೆಯ ಭವಿಷ್ಯ ಅತ್ಯುಜ್ವಲವಾಗಿರುವುದನ್ನು ಅತ್ಯಾಕರ್ಷಕವಾಗಿ ಚಿತ್ರಿಸಲಾಗಿದೆ.
ಭಾರತದಲ್ಲಿ ಶೇ.90ರಷ್ಟು ವ್ಯಾಪಾರ ವಹಿವಾಟುಗಳು ನಗದಿನಲ್ಲಿ ನಡೆಯುತ್ತವೆ. 2016ರ ನವೆಂಬರ್‌ನಲ್ಲಿ ಭಾರತ ಸರಕಾರ ಕೈಗೊಂಡ 500 ಮತ್ತು 1,000 ರೂ. ನೋಟುಗಳ ಅಪನಗದೀಕರಣದಿಂದ ಶೇ.86ರಷ್ಟು ನಗದು ಚಲಾವಣೆಯಿಂದ ಅಮಾನ್ಯಗೊಂಡವು; ಇದರಿಂದಾಗಿ ದೇಶದ ಆರ್ಥಿಕತೆಗೆ ತೀವ್ರವಾದ ಹೊಡೆತ ಬಿತ್ತು. ಅನಂತರದಲ್ಲಿ ಜಾರಿಯಾದ ಜಿಎಸ್‌ಟಿಯಿಂದಾಗಿಯೂ ಆರ್ಥಿಕ ಪ್ರಗತಿ ಕುಂಠಿತಗೊಂಡಿತು ಎಂದು ಅಮೆರಿಕ ಅಧ್ಯಕ್ಷರ ಆರ್ಥಿಕ ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್
Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ
Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ
NIA; ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣದ ಆರೋಪಿ ವಿಮಾನ ನಿಲ್ದಾಣದಲ್ಲೇ ಬಂಧನ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.