ಅಂತರ್ ಕಾಲೇಜು ಕಬಡ್ಡಿ: ಆಳ್ವಾಸ್‌ಗೆ ಅವಳಿ ಪ್ರಶಸ್ತಿ
Team Udayavani, Jan 15, 2017, 9:08 AM IST
ಮೂಡಬಿದಿರೆ: ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಮೂಡಬಿದಿರೆಯ ಸಂಚಲನ್ ಮತ್ತು ಸ್ವಾಮಿ ವಿವೇಕಾನಂದ ಜನ್ಮ ದಿನೋತ್ಸವ ಸಮಿತಿ ವತಿಯಿಂದ ಸ್ವರಾಜ್ಯ ಮೈದಾನದಲ್ಲಿ ನಡೆದ ರಾಷ್ಟ್ರೀಯ ಯುವ ದಿನಾಚರಣೆ -2017 ಅಂತರ್ ಕಾಲೇಜು ಮಟ್ಟದ “ವಿವೇಕ ಟ್ರೋಫಿ’ ಕಬಡ್ಡಿ ಪಂದ್ಯಾಟದಲ್ಲಿ ಪುರುಷರ ಮತ್ತು ಮಹಿಳೆಯರ ವಿಭಾಗಗಳಲ್ಲಿ ಆಳ್ವಾಸ್ ಕಾಲೇಜು ತಂಡಗಳು ವಿವೇಕ ಟ್ರೋಫಿಯನ್ನು ಗೆದ್ದುಕೊಂಡಿವೆ.
ಪುರುಷರ ವಿಭಾಗದಲ್ಲಿ ಉಜಿರೆ ಎಸ್‌ಡಿಎಂ ಕಾಲೇಜು ದ್ವಿತೀಯ ಹಾಗೂ ಪುತ್ತೂರು ಸವಣೂರು ರಶ್ಮಿ ಕಾಲೇಜಿನ ತಂಡ ತೃತೀಯ ಸ್ಥಾನವನ್ನು ಪಡೆದುಕೊಂಡಿವೆ. ಮಹಿಳೆಯರ ವಿಭಾಗದಲ್ಲಿ ಆಳ್ವಾಸ್ ಕಾಲೇಜು ಪ್ರಥಮ, ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜು ದ್ವಿತೀಯ ಹಾಗೂ ವಾಮದಪದವು ಸರಕಾರಿ ಕಾಲೇಜು ತೃತೀಯ ಸ್ಥಾನವನ್ನು ಪಡೆದುಕೊಂಡಿವೆ. ಪುರುಷರ ವಿಭಾಗದಲ್ಲಿ ಉತ್ತಮ ಹಿಡಿತಗಾರನಾಗಿ ಆಳ್ವಾಸ್‌ನ ಮಲ್ಲಿಕಾರ್ಜುನ, ಉತ್ತಮ ಆಟಗಾರರಾಗಿ ಆಳ್ವಾಸ್‌ನ ವಿಶ್ವರಾಜ್, ಹಾಗೂ ಉಜಿರೆ ಎಸ್‌ಡಿಎಂನ ಪ್ರತಾಪ್ ಸರ್ವಾಂಗೀಣ ಆಟಗಾರ ಪ್ರಶಸ್ತಿ ಪಡೆದಿದ್ದಾರೆ.
ಮಹಿಳೆಯರ ವಿಭಾಗದಲ್ಲಿ ಉತ್ತಮ ಆಟಗಾರ್ತಿಯಾಗಿ ಆಳ್ವಾಸ್‌ನ ಆತ್ಮೀಯ, ಉತ್ತಮ ಹಿಡಿತಗಾರ್ತಿಯಾಗಿ ಪಲ್ಲವಿ ಹಾಗೂ ಸರ್ವಾಂಗೀಣ ಆಟಗಾರ್ತಿಯಾಗಿ ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜಿನ ಕಾವ್ಯಾ ಪ್ರಶಸ್ತಿಗಳನ್ನು ಗೆದ್ದುಕೊಂಡಿದ್ದಾರೆ.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ.ಮೋಹನ ಆಳ್ವರ ಅಧ್ಯಕ್ಷತೆಯಲ್ಲಿ ಮಾಜಿ ಸಚಿವ ಕೆ. ಅಮರನಾಥ ಶೆಟ್ಟಿ ಬಹುಮಾನ ವಿತರಿಸಿದರು.
ಪ್ರಜ್ಞಾ ಪ್ರವಾಹ ಚಿಂತಕರ ವೇದಿಕೆಯ ಕ್ಷೇತ್ರೀಯ ಸಂಚಾಲಕ ರಘುನಂದನ ವಿಶೇಷ ಉಪನ್ಯಾಸ ನೀಡಿದರು. ಚೌಟರ ಅರಮನೆಯ ಕುಲದೀಪ ಎಂ. ಮತ್ತು ಉದ್ಯಮಿ ನಾರಾಯಣ ಪಿ.ಎಂ. ಉಪಸ್ಥಿತರಿದ್ದರು.
ವೇದಿಕೆಯಲ್ಲಿಪುರಸಭಾ ಸದಸ್ಯ ಬಾಹುಬಲಿ ಪ್ರಸಾದ್, ಸಮಿತಿಯ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಎಂ.ಉಪಸ್ಥಿತರಿದ್ದರು.
ಸಮಿತಿಯ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಸ್ವಾಗತಿಸಿದರು. ಆಳ್ವಾಸ್‌ನ ಪ್ರಮೋದ್ ಕುಮಾರ್ ಶೆಟ್ಟಿ ವಿಜೇತರ ವಿವರ ನೀಡಿದರು. ಡಾ| ಗುರು ಬಾಗೇವಾಡಿ ಕಾರ್ಯಕ್ರಮ ನಿರೂ ಪಿಸಿದರು. ಸಂಚಲನ್ ಸಮಿತಿಯ ಸಂಚಾಲಕ ಸೂರಜ್ ಜೈನ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!
America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ
Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್ ಸ್ಪಷ್ಟನೆ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.