ಬಾಂಗ್ಲಾದಲ್ಲಿ ಇಂದು ಮಧ್ಯಂತರ ಸರ್ಕಾರ ರಚನೆ… ಮೊಹಮ್ಮದ್ ಯೂನುಸ್ ನೇತೃತ್ವ
Team Udayavani, Aug 8, 2024, 6:30 AM IST
ಢಾಕಾ: ಬಾಂಗ್ಲಾದೇಶದಲ್ಲಿ ಅರಾಜಕತೆ ಮುಂದವರಿದಿರುವಂತೆಯೇ ಗುರುವಾರ (ಆ.8) ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತ ಮೊಹಮ್ಮದ್ ಯೂನುಸ್ ನೇತೃತ್ವದ 15 ಸದಸ್ಯರ ಸರ್ಕಾರ ಪ್ರಮಾಣ ವಚನ ಸ್ವೀಕರಿಸಲಿದೆ ಎಂದು ಬಾಂಗ್ಲಾ ಸೇನಾ ಮುಖ್ಯಸ್ಥ ಜ. ವಕಾರ್-ಉಜ್-ಜಮಾನ್ ಹೇಳಿದ್ದಾರೆ. ಗುರು ವಾರ ರಾತ್ರಿ ಪ್ರಮಾಣ ವಚನ ಸ್ವೀಕಾರ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಢಾಕಾ ದಾದ್ಯಂತ ಬಿಗಿ ಬಂದೋ ಬಸ್ತ್ ಏರ್ಪಡಿಸಲಾಗಿದೆ.
ಹಸೀನಾ ಪಲಾಯನದ ಬೆನ್ನಲ್ಲೇ ಮಧ್ಯಂತರ ಸರ್ಕಾರ ರಚನೆಯ ಕುರಿತು ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ನೇತೃತ್ವದಲ್ಲಿ ಸಭೆ ನಡೆದಿತ್ತು. ಈ ವೇಳೆ ವಿದ್ಯಾರ್ಥಿ ಸಂಘಟನೆಗಳು ಮೊಹಮ್ಮದ್ ಯೂನುಸ್‌ಗೆ ದೇಶದ ಚುಕ್ಕಾಣಿ ನೀಡುವಂತೆ ಪಟ್ಟು ಹಿಡಿದಿದ್ದವು. ಅದರಂತೆ ಯೂನುಸ್‌ರನ್ನು ಮಧ್ಯಂತರ ಸರ್ಕಾರದ ಮುಖ್ಯಸ್ಥರನ್ನಾಗಿ ಶಹಬುದ್ದೀನ್ ನೇಮಿಸಿದ್ದಾರೆ. ಒಲಿಂಪಿಕ್ಸ್ ಹಿನ್ನೆಲೆಯಲ್ಲಿ ಪ್ಯಾರಿಸ್‌ಗೆ ತೆರಳಿದ್ದ ಯೂನುಸ್ ಈ ಜವಾಬ್ದಾರಿ ಹೊರಲು ಸಿದ್ಧರಾಗಿದ್ದು, ಬಾಂಗ್ಲಾದೇಶಕ್ಕೆ ಹಿಂದಿರುಗುತ್ತಿದ್ದಾರೆ. ಯೂನುಸ್ ಅವರಿಗೆ ಅಧಿಕಾರ ನೀಡುತ್ತಿರುವುದರ ಬಗ್ಗೆ ಬಾಂಗ್ಲಾ ಸೇನೆಯೂ ಸಹಮತ ವ್ಯಕ್ತಪಡಿಸಿದೆ.
ಶಾಂತಿ ಕಾಪಾಡಲು ಯೂನುಸ್ ಮನವಿ
ದೇಶವನ್ನು ಸಮಸ್ಯೆಗಳಿಂದ ಮುಕ್ತಗೊಳಿಸುವ ಗುರಿಯೊಂದಿಗೆ ಮಧ್ಯಂತರ ಸರ್ಕಾರ ರಚನೆಯಾಗುತ್ತಿದೆ. ಈ ಸಂದಿಗ್ಧ ಪರಿಸ್ಥಿತಿಯಲ್ಲಿ ತಾಳ್ಮೆಯನ್ನು ವಹಿಸಬೇಕು ಎಂದು ಮೊಹಮ್ಮದ್ ಯೂನುಸ್ ಅವರು ಮನವಿ ಮಾಡಿದ್ದಾರೆ.
205 ಮಂದಿ ಕರೆ ತಂದ ಏರಿಂಡಿಯಾ ವಿಮಾನ
ಢಾಕಾದಲ್ಲಿ ತೊಂದರೆಗೆ ಒಳಗಾಗಿದ್ದ 205 ಮಂದಿಯನ್ನು ಏರ್ ಇಂಡಿಯಾದ ವಿಶೇಷ ವಿಮಾನದಲ್ಲಿ ದೆಹಲಿಗೆ ಕರೆತರಲಾಗಿದೆ. ಭಾರತಕ್ಕೆ ಬಂದವರ ಪೈಕಿ 6 ಕೂಸುಗಳು ಮತ್ತು 199 ಪ್ರಯಾಣಿಕರು ಇದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್‌ಬುಕ್ ಬಳಸುವಂತಿಲ್ಲ!
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Australia: ಜಾಲತಾಣ ಬಳಕೆಗೆ ಕನಿಷ್ಠ 16 ವರ್ಷ ಮಿತಿ ನಿಗದಿ?
US: ಮೊದಲ ದಿನವೇ ಜಗತ್ತಿಗೆ ಟ್ರಂಪ್ “ಎನರ್ಜಿ’ ಶಾಕ್!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.