ಪಾಕ್‌ನಲ್ಲಿ ಕಾರ್ಯಾಚರಣೆ ಇಲ್ಲ
Team Udayavani, Feb 3, 2018, 9:45 AM IST
ವಾಷಿಂಗ್ಟನ್: ಪಾಕಿಸ್ಥಾನಕ್ಕೆ ಮಿಲಿಟರಿ ನೆರವು ಸ್ಥಗಿತಗೊಳಿಸಿರುವ ಅಮೆರಿಕ, ಆ ದೇಶದೊಳಗೆ ನುಗ್ಗಿ ಮಿಲಿಟರಿ ಕಾರ್ಯಾಚರಣೆ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಉಗ್ರರ ಸ್ವರ್ಗ ಎಂಬ ಟೀಕೆಗೆ ಗುರಿಯಾಗಿರುವ ಪಾಕಿಸ್ಥಾನದಲ್ಲಿ ಅಮೆರಿಕದ ಸೇನೆ ಕಾರ್ಯಾಚರಣೆ ನಡೆಸಿ ಉಗ್ರರ ಶಿಬಿರಗಳನ್ನು ನಾಶಗೊಳಿಸಲಿದೆ ಎಂದು ಕೆಲ ಮಾಧ್ಯಮಗಳು ವರದಿ ಮಾಡಿದ್ದ ಹಿನ್ನೆಲೆಯಲ್ಲಿ ಶ್ವೇತ ಭವನ ಸ್ಪಷ್ಟನೆ ನೀಡಿದೆ.
ಆದರೆ ಉಗ್ರಗಾಮಿಗಳನ್ನು ಮಟ್ಟಹಾಕುವ ನಿಟ್ಟಿನಲ್ಲಿ ಅಮೆರಿಕ ಪಾಕ್‌ನ ಸಹಕಾರ ಬಯಸಲಿದೆ ಎಂದು ಪೆಂಟಗನ್‌ನ ಹಿರಿಯ ಅಧಿಕಾರಿ ಲೆ| ಜ| ಕೆನ್ನೆತ್ ಎಫ್. ಮೆಕಿಂಜ್ ಹೇಳಿದ್ದಾರೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟ್ರಂಪ್ ಆಡಳಿತ ಜಾರಿ ಮಾಡಿರುವ ದಕ್ಷಿಣ ಏಷ್ಯಾಕ್ಕಾಗಿನ ವ್ಯೂಹಾತ್ಮಕ ನಿಲುವಿನಲ್ಲಿ ಪಾಕಿಸ್ಥಾನ ಮತ್ತು ಅಫ್ಘಾನಿಸ್ತಾನಗಳ ಜತೆಗೂಡಿ ಉಗ್ರ ನಿಗ್ರಹಕ್ಕೆ ಸಹಕಾರ ಕೋರಲಾಗುತ್ತದೆ ಎಂದಿದ್ದಾರೆ. ಅದರಲ್ಲಿ ಪಾಕಿಸ್ಥಾನಕ್ಕೆ ಹೆಚ್ಚಿನ ಅವಕಾಶ ಇದೆ ಎಂದು ಅವರು ಹೇಳಿದ್ದಾರೆ. ಹಲವು ವರ್ಷಗಳಿಂದ ಪಾಕಿಸ್ಥಾನ ಕೂಡ ಭಯೋತ್ಪಾದನೆಯ ಕರಿ ನೆರಳಿಗೆ ಸಿಕ್ಕಿ ನರಳಿದೆ. ಹೀಗಾಗಿ ಆ ರಾಷ್ಟ್ರದ ಸರಕಾರ ಈ ನಿಟ್ಟಿನಲ್ಲಿ ಸಹಕಾರ ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.