Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ
Team Udayavani, May 20, 2024, 8:51 AM IST
ಟೆಹ್ರಾನ್: ಅಜರ್‌ಬೈಜಾನ್ ನಿಂದ ಮರಳುತ್ತಿದ್ದ ವೇಳೆ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಕೊನೆಯುಸಿರೆಳೆದಿದ್ದಾರೆ. ರವಿವಾರ ನಡೆದ ಘಟನೆಯಲ್ಲಿ ಇರಾನ್ ಅಧ್ಯಕ್ಷರು ಮೃತಪಟ್ಟಿದ್ದಾರೆ ಎಂದು ಇದೀಗ ಖಚಿತಪಡಿಸಲಾಗಿದೆ.
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ, ವಿದೇಶಾಂಗ ಸಚಿವ ಹೊಸೇನ್ ಅಮೀರಬ್ ದೊಲ್ಲಾಹಿಯನ್ ಮತ್ತು ಇರಾನ್‌ನ ಪರಮೋಚ್ಚ ನಾಯಕ ಖೊಮೇನಿಯವರ ಪ್ರತಿನಿಧಿ ಸೇರಿ ನಾಲ್ವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನವಾಗಿತ್ತು.
ಇರಾನ್ ಮಾಧ್ಯಮಗಳ ಪ್ರಕಾರ, ಹೆಲಿಕಾಪ್ಟರ್‌ನ ಅವಶೇಷಗಳು ಪತ್ತೆಯಾದ ಕೆಲವೇ ನಿಮಿಷಗಳಲ್ಲಿ, ಇರಾನ್ ಅಧ್ಯಕ್ಷ ರೈಸಿ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ವಿಮಾನದಲ್ಲಿದ್ದ ಇರಾನ್ ವಿದೇಶಾಂಗ ಸಚಿವರೂ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದೆ.
ರವಿವಾ ಪರ್ವತಗಳಲ್ಲಿ ಪತನಗೊಂಡ ಹೆಲಿಕಾಪ್ಟರ್ ನ ಅವಶೇಷಗಳನ್ನು ರಕ್ಷಣಾ ತಂಡ ಪತ್ತೆ ಮಾಡಿದೆ.
ಅಧ್ಯಕ್ಷರ ಹೆಲಿಕಾಪ್ಟರ್‌ಗೆ ಬೆಂಗಾವಲಾಗಿ ತೆರಳಿದ್ದ ಇನ್ನೆರಡು ಹೆಲಿಕಾಪ್ಟರ್‌ಗಳು ವಾಪಸಾಗಿದ್ದು, ಪ್ರತಿಕೂಲ ಹವಾಮಾನದಿಂದಾಗಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಘಟನೆ ಸಂಭವಿಸಿದ ಸ್ಥಳ ಇರಾನ್‌ನ ದೊಡ್ಡ ಪಟ್ಟಣಗಳಲ್ಲಿ ಒಂದಾಗಿರುವ ತಬ್ರಿಜ್‌ನಿಂದ ಸುಮಾರು 100 ಕಿ.ಮೀ. ದೂರದಲ್ಲಿದೆ. ಪ್ರತಿಕೂಲ ಹವಾಮಾನ, ರಾತ್ರಿಯಾದ ಕಾರಣ ಶೋಧ ಕಾರ್ಯಕ್ಕೆ ಅಡ್ಡಿಯಾಗಿತ್ತು.
Footage of the President’s helicopter crash in #Iran has been released by authorities.
There are no signs of survivors.
If this results in an Iranian uprising I don’t know which side I’ll pick, because I’ve virtue signaled for both in the past. pic.twitter.com/sLcoO8hI1l
— Justin Trudeau’s Ego (@Trudeaus_Ego) May 20, 2024
ಇರಾನ್ ನ ರಾಜಧಾನಿ ಟೆಹ್ರಾನ್ ನಿಂದ ಸುಮಾರು 600 ಕಿಲೋಮೀಟರ್ ದೂರದಲ್ಲಿರುವ ವಾಯುವ್ಯ ಇರಾನ್ ನಲ್ಲಿರುವ ಅಜೆರ್‌ಬೈಜಾನ್‌ನ ಗಡಿಗೆ ಭೇಟಿ ನೀಡಿ ಹಿಂದಿರುಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್‌ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.