ಭಾರತದ ಕುಗ್ರಾಮಗಳತ್ತ ಅಲ್‌ಖೈದಾ ಉಗ್ರ ದೃಷ್ಟಿ
Team Udayavani, Feb 20, 2018, 12:19 PM IST
ವಾಷಿಂಗ್ಟನ್: ಭಾರತ ಉಪಖಂಡದ ಅಲ್‌ಖೈದಾ (ಎಕ್ಯುಐಎಸ್) ಉಗ್ರ ಸಂಘಟನೆಯು ಭಾರತ ಹಾಗೂ ಬಾಂಗ್ಲಾದೇಶಗಳ ಕುಗ್ರಾಮಗಳ ಯುವಜನರನ್ನು ನೇಮಿಸಿಕೊಳ್ಳಲಾರಂಭಿಸಿದೆ ಎಂದು ವಿಶ್ವಸಂಸ್ಥೆಯ ಪರಿವೀಕ್ಷಣಾ ಸಮಿತಿಯ ವರದಿಯೊಂದು ತಿಳಿಸಿದೆ.
ಇದಲ್ಲದೆ, ದಕ್ಷಿಣ ಹಾಗೂ ಪೂರ್ವ ಆಫ್ಘಾನಿಸ್ತಾನದ ಭಾಗಗಳಲ್ಲಿ ಅಲ್ ಖೈದಾದ ಸುಮಾರು 180 ಉಗ್ರರು, ಸಲಹೆಗಾರರು ಹಾಗೂ ತರಬೇತುದಾರರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇವರು ಆಯ್ದ ವ್ಯಕ್ತಿಗಳ ಜತೆಗೆ ಸಮಾಲೋಚನೆ ನಡೆಸಿ ಅವರನ್ನು ತಮ್ಮತ್ತ ಸೆಳೆಯುತ್ತಿದ್ದಾರೆಂದು ಹೇಳಲಾಗಿದೆ.
ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸ್ಥಾಪಿಸಿರುವ ಈ ಸಮಿತಿ ಮಂಡಿಸಿ ರುವ 22ನೇ ವರದಿ ಇದಾಗಿದ್ದು, ಇದರಲ್ಲಿ, ಅಲ್‌ಖೈದಾ ನಾಯಕ ಐಮನ್ ಅಲ್-ಜವಾಹಿರಿ, ಆಫ್ಘಾನಿಸ್ತಾನ-ಪಾಕಿಸ್ತಾನ ಗಡಿ ಭಾಗದಲ್ಲೇ ಅವಿತಿದ್ದಾನೆಂದೂ, ಆಫ್ಘಾನಿಸ್ತಾನದಲ್ಲಿ 20ಕ್ಕೂ ಹೆಚ್ಚು ಉಗ್ರರ ಗುಂಪುಗಳು ಕಾರ್ಯನಿರ್ವಹಿಸುತ್ತಿವೆ. ತಾಲಿಬಾನಿ ಉಗ್ರರ ತಂಡವೇ ಅತಿ ದೊಡ್ಡ ಉಗ್ರರ ತಂಡವಾಗಿದ್ದು ಇದರಲ್ಲಿ 40ರಿಂದ 50 ಸಾವಿರ ಉಗ್ರರಿದ್ದಾರೆ ಎಂದು ಹೇಳಲಾಗಿದೆ.
ಉಗ್ರ ಹಫೀಜ್ ವಿರುದ್ಧ ಕ್ರಮ ಇಲ್ಲ : ಮುಂಬೈ ದಾಳಿಕೋರ ಹಫೀಜ್ ಸಯೀದ್ ನಾಯಕತ್ವದ ಜಮಾತ್-ಉದ್-ದಾವಾ, ಫಾಲಾ-ಐ- ಇನ್ಸಾನಿಯತ್ ಸಂಸ್ಥೆಗಳ ವಿರುದ್ಧ ಹೆಚ್ಚಿನ ಕ್ರಮ ಕೈಗೊಳ್ಳದಿರಲು ಪಾಕಿಸ್ತಾನ ಪ್ರಧಾನಿ ಶಾಹೀದ್ ಖಖಾನ್ ಅಬ್ಟಾಸಿ ನಿರ್ಧರಿಸಿದ್ದಾರೆ. ಕ್ರಮದಿಂದ ರಾಜಕೀಯ ಬಿಕ್ಕಟ್ಟು ಏರ್ಪಡುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಂಸ್ಥೆಗಳ ಮೇಲಿನ ನಿಷೇಧ ಮುಂದುವರಿಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BJP Congress;ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರಿಗೆ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.