ಡೊನಾಲ್ಡ್ ಟ್ರಂಪ್‌ ವಲಸೆ ನೀತಿಗೆ ಐಟಿ ದಿಗ್ಗಜರ ಖಂಡನೆ


Team Udayavani, Jan 30, 2017, 3:45 AM IST

trump.jpg

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನೂತನ ವಲಸೆ ನೀತಿಯನ್ನು ಮಾಹಿತಿ ತಂತ್ರಜ್ಞಾನ ಕ್ಷೇತ್ರದ ದಿಗ್ಗಜರು ಕಟು ಮಾತಿನಲ್ಲಿ ಟೀಕಿಸಿದ್ದಾರೆ. ಹೊಸ ನೀತಿ ಘೋಷಣೆ ಯಾದ ಬೆನ್ನಲ್ಲೇ ಗೂಗಲ್‌ ಸಿಇಒ ಸುಂದರ್‌ ಪಿಚೈ, ಫೇಸ್‌ಬುಕ್‌ ಸಂಸ್ಥಾಪಕ ಮಾರ್ಕ್‌ ಜುಕರ್‌ಬರ್ಗ್‌ ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಮುಂದುವರಿದ ಭಾಗವಾಗಿ ಆ್ಯಪಲ್‌, ನೆಟ್‌ಫ್ಲಿಕ್ಸ್‌, ಮೈಕ್ರೋಸಾಫ್ಟ್, ಟೆಸ್ಲಾ, ಉಬರ್‌ ಸಹಿತ ಪ್ರಮುಖ ಕಂಪೆನಿಗಳ ಮುಖ್ಯ ಸ್ಥರು ಟ್ರಂಪ್‌ ನೀತಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮೈಕ್ರೋಸಾಫ್ಟ್ ಸಿಇಒ ಸತ್ಯ ನಾದೆಳ್ಲ ಮಾತ ನಾಡಿ, ನಾನೊಬ್ಬ ವಲಸಿಗನಾಗಿದ್ದುಕೊಂಡು ನಮ್ಮ ಕಂಪೆನಿ, ದೇಶ ಮತ್ತು ಇಡೀ ವಿಶ್ವಕ್ಕೆ ವಲಸೆ ಯಿಂದಾಗುವ ಧನಾತ್ಮಕ ಪರಿಣಾಮಗಳನ್ನು ಗಮನಿಸಿದ್ದೇನೆ. ಆದ್ದರಿಂದ ಈ ಕ್ರಮದ ವಿರುದ್ಧ ಹೋರಾಟ ಮುಂದುವರಿಯಲಿದೆ ಎಂದಿದ್ದಾರೆ. ಇದನ್ನು ಮೈಕ್ರೋಸಾಫ್ಟ್ ಅಧ್ಯಕ್ಷ ಬ್ರಾಡ್‌ ಸ್ಮಿತ್‌ ಕೂಡ ಬಹಿರಂಗವಾಗಿ ಬೆಂಬಲಿಸಿದ್ದಾರೆ. ಹೊಸ ನಿಯಮದಿಂದ ಮೈಕ್ರೋಸಾಫ್ಟ್ನ 76 ಉದ್ಯೋಗಿ ಗಳಿಗೆ ತೊಂದರೆಯಾಗಿದೆ ಎಂಬ ಮಾಹಿತಿಯನ್ನೂ ನೀಡಿದ್ದಾರೆ. ವಲಸೆ ನೀತಿಯನ್ನು ನಾವು ಗಂಭೀರವಾಗಿ ಪರಿಗಣಿಸುತ್ತೇವೆ.

ಮೈಕ್ರೋಸಾಫ್ಟ್ ಕಂಪೆನಿಯಲ್ಲಿ ಉದ್ಯೋಗಿಗಳ ಬಗ್ಗೆ ವೈಯಕ್ತಿಕ ವಾಗಿಯೂ ಗಮನ ಹರಿಸುತ್ತೇವೆ. ಅವರು ವಲಸಿಗರಾಗಿದ್ದರೂ ಅವರ ಬಗ್ಗೆ ಗಮನ ಹರಿಸುತ್ತೇವೆ ಎಂದು ಸ್ಮಿತ್‌ ಹೇಳಿದ್ದಾರೆ.  ಟ್ವೀಟರ್‌ ಸಿಇಒ ಜಾಕ್‌ ಡೋರ್ಸೆ, ಈ ನಿಷೇಧ ಬೇಸರ ಮೂಡಿಸಿದೆ ಎಂದಿದ್ದಾರೆ. ಆ್ಯಪಲ್‌ ಸಿಇಒ ಟಿಮ್‌ ಕುಕ್‌ ಮಾತನಾಡಿ ಅಧ್ಯಕ್ಷರು ಹೊರಡಿಸಿದ ಆದೇಶದಿಂದ ಕಳವಳಗೊಂಡಿರುವುದಾಗಿ ಹೇಳಿ ದ್ದಾರೆ. ವಲಸಿಗರಿಂದಲೇ ಆ್ಯಪಲ್‌ ಕಂಪೆನಿ ಹೆಚ್ಚಿನ ಯಶಸ್ಸು ಸಾಧಿಸಿದೆ ಎಂದು ಪ್ರತಿಪಾದಿಸಿದ್ದಾರೆ.

ಸಮರ್ಥನೆಗೆ ಯತ್ನ: ಹೊಸ ನೀತಿಗೆ ವಿಶ್ವದಾದ್ಯಂತ ಆಕ್ರೋಶ ವ್ಯಕ್ತವಾಗುತ್ತಲೇ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅದನ್ನು ಸಮರ್ಥಿಸಿ ಕೊಂಡಿದ್ದಾರೆ. ಈ ಕ್ರಮ ಇಡೀ ಮುಸ್ಲಿಂ ಜನಾಂಗದ ವಿರುದ್ಧವಾಗಿಲ್ಲ.  ಜತೆಗೆ ಈ ಕ್ರಮವನ್ನು ಬಹಳ ಮೃದುವಾಗಿ ಜಾರಿಗೊಳಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಈ ನಡುವೆ ಹೊಸ ನಿಯಮ ಖಂಡಿಸಿ ಅಮೆರಿಕದ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಪ್ರತಿಭಟನೆ ನಡೆಸಲಾಗಿದೆ.

ಟ್ರಂಪ್‌ಗೆ ಬಹಿಷ್ಕಾರ ಹೇರಿ: ಮುಸ್ಲಿಂ ದೇಶಗಳಿಗೆ ಹೇರಿರುವ ನಿಷೇಧವನ್ನು ಹಿಂಪಡೆಯುವ ವರೆಗೂ ಡೊನಾಲ್ಡ್‌ ಟ್ರಂಪ್‌ಗೆ ಬ್ರಿಟನ್‌ ಪ್ರವೇಶ ನಿರ್ಬಂ ಧಿಸಿ ಎಂದು ಅಲ್ಲಿನ ವಿರೋಧ ಪಕ್ಷದ ನಾಯಕ ಜೆರೋಮಿ ಕಾರ್ಬಿನ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲೇಬರ್‌ ಪಕ್ಷದ ನಾಯಕರೂ ಆಗಿರುವ ಜರೋಮಿ, ಟ್ರಂಪ್‌ನ ನೀತಿಗಳನ್ನು ಪ್ರಧಾನಿ ಥೇರೆಸಾ ಮೇ ಅವರು ಒಪ್ಪಿಕೊಳ್ಳಬಾರದು ಎಂದು ಒತ್ತಾಯಿಸಿದ್ದಾರೆ.

ಟ್ರಂಪ್‌ ಕ್ರಮಕ್ಕೆ ನ್ಯಾಯಾ ಲಯ ತಡೆ: ಟ್ರಂಪ್‌ ಅವರು ಶನಿವಾರ ಮುಸ್ಲಿಂ ವಲಸೆ ವಿರೋಧಿ ಆದೇಶ ಜಾರಿ ಮಾಡುತ್ತಿದ್ದಂತೆ ಇಬ್ಬರು ಇರಾನ್‌ ನಾಗರಿಕರನ್ನು ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು. ಇದರ ವಿರುದ್ಧ ಅಮೆರಿಕ ನಾಗರಿಕ ಹಕ್ಕು ಸಂಘಟನೆ ಅರ್ಜಿ ಸಲ್ಲಿಸಿತ್ತು. ಇದನ್ನು ಪರಿಗಣಿಸಿರುವ ನ್ಯಾಯಾಲಯ ಟ್ರಂಪ್‌ ಕ್ರಮಕ್ಕೆ ತಾತ್ಕಾಲಿಕ ತಡೆ ನೀಡಿ,  ಅಮೆರಿಕದ ನಾಗರಿಕತ್ವ ಮತ್ತು ವಲಸೆ ಇಲಾಖೆಯಿಂದ ಮಾನ್ಯತೆ ಹೊಂದಿರುವ ನಿರಾಶ್ರಿತರು ಮತ್ತು ಇನ್ನಿತರ ಪ್ರಮಾಣಿತ ವೀಸಾ ಹೊಂದಿರುವವರನ್ನು ಹೊರಹಾಕದಂತೆ ಸೂಚಿಸಿದೆ.

ಟ್ರಂಪ್‌ರತ್ತ ಗುಂಡು ಹಾರಿಸಿದ್ದ’ ಭಾರತೀಯ ಶಿಕ್ಷಕಿ ಅಮಾನತು
ಹೌಸ್ಟನ್‌:
ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪ್ರಮಾಣ ವಚನ ಸ್ವೀಕಾರ ವೀಡಿಯೋ ಮೇಲೆ ವಾಟರ್‌ ಗನ್‌ನಿಂದ ಶೂಟ್‌ ಮಾಡಿದ್ದ ಭಾರತೀಯ ಮೂಲದ ಶಿಕ್ಷಕಿ ಪಾಯಲ್‌ ಮೋದಿಯನ್ನು ಅಮಾನತುಗೊಳಿಸಲಾಗಿದೆ. ಜ.20ರಂದು ಟ್ರಂಪ್‌ ಪ್ರಮಾಣವಚನ ಸ್ವೀಕಾರ ಸಮಾರಂಭ ಟಿವಿಯಲ್ಲಿ ಪ್ರಸಾರವಾಗುತ್ತಿದ್ದಾಗ ಅದರ ಮೇಲೆ ಡಲ್ಲಾಸ್‌ನ ಆ್ಯಡಮ್ಸನ್‌ ಪ್ರೌಢಶಾಲೆಯಲ್ಲಿ ಶಿಕ್ಷಕಿಯಾಗಿರುವ ಪಾಯಲ್‌ ಪಿಚಕಾರಿಯಿಂದ ಶೂಟ್‌ ಮಾಡಿ, ಸಾಯಿ ಎಂದು ಅರಚಿದ್ದರು. 8 ಸೆಕೆಂಡ್‌ಗಳ ಈ ವೀಡಿಯೋ ಇನ್‌ಸ್ಟಾಗ್ರಾಂನಲ್ಲಿ ಪ್ರಕಟವಾಗಿತ್ತು. ಇದು ವಿಶ್ವಾದ್ಯಂತ ಗುಲ್ಲೆಬ್ಬಿಸಿತ್ತು.

ಐಸಿಸ್‌ ನಾಶಕ್ಕೆ ಯೋಜನೆ ಸಿದ್ಧಪಡಿಸಿ: ಸೇನೆಗೆ ಟ್ರಂಪ್‌ ಸೂಚನೆ
ಅಧಿಕಾರಕ್ಕೆ ಬರುವ ಮುನ್ನ ಇಸ್ಲಾಂ ಉಗ್ರಗಾಮಿ ಸಂಘಟನೆ ಐಸಿಸ್‌ ನಿಷೇಧಕ್ಕೆ ಕಠಿನ ತೆಗೆದುಕೊಳ್ಳುವುದಾಗಿ ಘೋಷಿಸಿದ್ದ ಟ್ರಂಪ್‌ ಈಗ ಆ ನಿಟ್ಟಿನಲ್ಲಿ ಮೊದಲ ಹೆಜ್ಜೆ ಇಟ್ಟಿದ್ದಾರೆ. 30 ದಿನದೊಳಗೆ ಐಸಿಸ್‌ ನಾಶಕ್ಕೆ ಸಮಗ್ರ ಯೋಜನೆ ಸಿದ್ಧಪಡಿಸುವಂತೆ ತನ್ನ ಸೇನಾಡಳಿತಕ್ಕೆ ಸೂಚಿಸಿದ್ದಾರೆ. ಐಸಿಸ್‌ ಅತ್ಯಂತ ಅಪಾಯಕಾರಿ, ಆಕ್ರಮಣಕಾರಿ ಸಂಘಟನೆ, ಅದು ತನ್ನದೇ ರಾಜ್ಯವನ್ನು ಕಟ್ಟುವ ಹುನ್ನಾರ ಹೊಂದಿದೆ. ಆದ್ದರಿಂದಲೇ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಟ್ರಂಪ್‌ ವಿವರಿಸಿದ್ದಾರೆ.

ಟಾಪ್ ನ್ಯೂಸ್

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

13-

Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.