ಟೋಕಿಯೋ ತೊರೆದರೆ ಸಿಗಲಿದೆ ಕುಟುಂಬದ ಪ್ರತಿ ಮಗುವಿಗೆ 6.34ಲಕ್ಷ ರೂ.!
Team Udayavani, Jan 4, 2023, 8:00 AM IST
ಟೋಕಿಯೋ: ಜಪಾನ್‌ನಲ್ಲಿ ಎದುರಾಗಿರುವ ಪ್ರಾಂತೀಯ ಜನಸಂಖ್ಯಾ ಅಸಮತೋಲನವನ್ನು ಸರಿದೂಗಿಸುವ ನಿಟ್ಟಿನಲ್ಲಿ ಜಪಾನ್ ಸರ್ಕಾರ ಹೊಸಕ್ರಮ ಕೈಗೊಂಡಿದ್ದು, ರಾಜಧಾನಿ ಟೋಕಿಯೋ ತೊರೆಯಲು ಮುಂದಾಗುವ ಕುಟುಂಬದ ಪ್ರತಿ ಮಗುವಿಗೆ 1 ದಶಲಕ್ಷ ಯೆನ್ (6.34 ಲಕ್ಷ ರೂ.) ನೀಡುವುದಾಗಿ ಘೋಷಿಸಿದೆ.
ಕಳೆದ ವರ್ಷ ಮೊದಲಬಾರಿಗೆ ಜಪಾನ್‌ನಲ್ಲಿ ಜನಸಂಖ್ಯಾ ಕುಸಿತ ವರದಿಯಾಗಿದ್ದು, ಕೊರೋನಾ ಕಾರಣದಿಂದಾಗಿಯೇ ಜನಸಂಖ್ಯೆ ಕಡಿಮೆಯಾಗಿದೆ ಎಂದು ಜನಸಂಖ್ಯಾ ನೀತಿ ನಿರೂಪಕರು ಹೇಳಿದ್ದಾರೆ.
ಅದರಲ್ಲೂ ದೇಶದ ಗ್ರಾಮೀಣ ಭಾಗಗಳಲ್ಲಿ ಜನಸಂಖ್ಯಾ ಸಾಂದ್ರತೆ ಕಡಿಮೆಯಾಗಿದ್ದು, ಸೌಲಭ್ಯಗಳು ಉತ್ತಮವಾಗಿರುವ ನಗರ ಪ್ರದೇಶಗಳತ್ತ ಜನರು ವಲಸೆ ಹೋಗಿದ್ದಾರೆ ಎನ್ನಲಾಗಿದೆ.
ಈ ಹಿನ್ನೆಲೆ ಗ್ರಾಮೀಣ ಭಾಗಗಳಿಗೆ ಜನರು ಹಿಂದಿರುಗಲು ಮತ್ತು ನಗರಗಳಿಂದ ವಸತಿ ಬದಲಾಯಿಸುವಂತೆ ಮಾಡಲು ಸರ್ಕಾರ, ನಗರಗಳನ್ನು ತೊರೆಯುವ ಕುಟುಂಬಕ್ಕೆ 1.90 ಲಕ್ಷ ರೂ.ಗಳ ಸಹಾಯಧನ ಒದಗಿಸುವುದಾಗಿ ಈ ಹಿಂದೆ ತಿಳಿಸಿತ್ತು. ಈಗ ಈ ಸೌಲಭ್ಯವನ್ನು ಪರಿಷ್ಕರಿಸಿದ್ದು, ರಾಜಧಾನಿ ತೊರೆಯುವ ಕುಟುಂಬಗಳ ಪ್ರತಿ ಮಗುವಿಗೆ 6.34 ಲಕ್ಷ ರೂ. ನೀಡುವುದಾಗಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.