Japan ಅಚ್ಚರಿಯ ರಾಜಕೀಯ ಬೆಳವಣಿಗೆ: ಸ್ಪರ್ಧಿಸುವುದಿಲ್ಲ ಎಂದ ಪ್ರಧಾನಿ ಕಿಶಿಡಾ
ನಿರ್ಧಾರ ಹೊಸ ಪ್ರಧಾನಿಯನ್ನು ಹೊಂದಲು ದಾರಿ..
Team Udayavani, Aug 14, 2024, 9:32 AM IST
ಟೋಕಿಯೋ: ಜಪಾನ್ ನ ಅಚ್ಚರಿಯ ರಾಜಕೀಯ ಬೆಳವಣಿಗೆಯೊಂದರಲ್ಲಿ ಪ್ರಧಾನಿ ಫ್ಯೂಮಿಯೋ ಕಿಶಿಡಾ ಸೆಪ್ಟೆಂಬರ್‌ನಲ್ಲಿ ಬರಲಿರುವ ಪಕ್ಷದ ನಾಯಕತ್ವದ ಮತದಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದು, ಜಪಾನ್‌ಗೆ ಹೊಸ ಪ್ರಧಾನಿಯನ್ನು ಹೊಂದಲು ದಾರಿ ಮಾಡಿಕೊಟ್ಟಿದೆ.
2021 ರಲ್ಲಿ ಕಿಶಿಡಾ ಅವರು ಆಡಳಿತ ಲಿಬರಲ್ ಡೆಮಾಕ್ರಟಿಕ್ ಪಕ್ಷದ(LDP) ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಅವರ ಮೂರು ವರ್ಷಗಳ ಅವಧಿಯು ಸೆಪ್ಟೆಂಬರ್‌ನಲ್ಲಿ ಮುಕ್ತಾಯಗೊಳ್ಳುತ್ತದೆ.
ಕಿಶಿಡಾ ರೇಸ್ ನಿಂದ ಹೊರಗುಳಿದಿರುವುದರಿಂದ ನೂತನ ನಾಯಕ ಪ್ರಧಾನ ಮಂತ್ರಿಯಾಗಲಿದ್ದಾರೆ. ಏಕೆಂದರೆ LDP ಜಪಾನ್ ನ ಸಂಸತ್ತಿನ ಎರಡೂ ಸದನಗಳನ್ನು ನಿಯಂತ್ರಿಸುತ್ತದೆ.
ಅವರು ಸೆಪ್ಟೆಂಬರ್ ನಲ್ಲಿ ನಡೆಯಲಿರುವ ಪಕ್ಷದ ನಾಯಕತ್ವ ಮತದಾನದಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿರುವುದು ಪಕ್ಷದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ ಎಂದು ತೋರಿಸುವ ಪ್ರಯತ್ನವಾಗಿದ್ದು, ಹೊಸ ನಾಯಕನಿಗೆ ಅವಕಾಶ ಮಾಡಿಕೊಟ್ಟು ಮಾದರಿಯಾಗಿದ್ದಾರೆ ಎಂದು ಹೇಳಲಾಗಿದೆ. ಸ್ಥಳೀಯ ಚುನಾವಣೆಯು ಅವರ ವರ್ಚಸ್ಸನ್ನು ಕಡಿಮೆ ಮಾಡಿತ್ತು. ಎಲ್‌ಡಿಪಿ ಸಂಸದರು ಮುಂದಿನ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ಹೊಸ ಮುಖದ ಅಗತ್ಯವನ್ನು ವ್ಯಕ್ತಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.