ಚೀನದಿಂದ ಆಪತ್ತು ಖಚಿತ
Team Udayavani, Feb 13, 2021, 7:15 AM IST
ವಾಷಿಂಗ್ಟನ್: “ನಾವು ಮುಂದುವರಿಯದೇ ಇದ್ದರೆ ನಮ್ಮ ಪಾಲಿನ ಅವಕಾಶವನ್ನು ಚೀನ ಕಬಳಿಸಲಿದೆ’- ಹೀಗೆಂದು ಅಮೆರಿಕದ ಸಂಸದರಿಗೆ ಅಧ್ಯಕ್ಷ ಜೋ ಬೈಡೆನ್ ಎಚ್ಚರಿಕೆ ನೀಡಿದ್ದಾರೆ. ಅಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಚೀನ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಜತೆಗೆ ಬರೋಬ್ಬರಿ ಎರಡು ಗಂಟೆಗಳ ಕಾಲ ಅಧ್ಯಕ್ಷ ಬೈಡೆನ್ ಮಾತನಾಡಿದ್ದಾರೆ.
ಈ ಸಂದರ್ಭದಲ್ಲಿ ಹಾಂಕಾಂಗ್‌ನಲ್ಲಿ ಪ್ರಜಾಪ್ರಭುತ್ವ ಪರ ಹೋರಾ ಟಗಾರರ ವಿರುದ್ಧ ಕೈಗೊಂಡಿರುವ ಕ್ರಮಗಳ ಬಗ್ಗೆ ಜೋ ಬೈಡೆನ್ ಕಟುವಾಗಿ ಆಕ್ಷೇಪ ಮಾಡಿದ್ದಾರೆ. ಅದಕ್ಕೆ ಉತ್ತರಿಸಿದ ಕ್ಸಿ ಜಿನ್‌ಪಿಂಗ್ “ಎರಡು ರಾಷ್ಟ್ರಗಳ ಜಗಳ ಜಗತ್ತಿಗೆ ಮಾರಕವಾದೀತು’ ಎಂದು ಸೂಚ್ಯವಾಗಿ ಹೇಳಿದ್ದಾರೆ.ಹೀಗಾಗಿ, ಡೊನಾಲ್ಡ್ ಟ್ರಂಪ್ ಅವಧಿಯಿಂದ ಶುರುವಾದ ಅಮೆರಿಕ- ಚೀನ ಜಗಳ ಹಾಲಿ ವರ್ಷವೂ ಮುಂದುವರಿ ಯುವುದು ಖಚಿತವಾಗಿದೆ
ಎರಡು ಗಂಟೆಯ ಮಾತುಕತೆಯಲ್ಲಿ ಉಭಯ ರಾಷ್ಟ್ರಗಳು ಹೊಂದಿರುವ ಹಲವು ಭಿನ್ನಾಭಿಪ್ರಾಯ ಗಳಿಗೆ ಪರಿಹಾರ ಕಂಡುಕೊಳ್ಳುವ ವಿಚಾರಗಳು ಪ್ರಸ್ತಾವವೇ ಆಗಲಿಲ್ಲ. ಗುರುವಾರ ಸಂಸದರ ಜತೆಗೆ ಮಾತನಾಡಿದ ಅಧ್ಯಕ್ಷ ಬೈಡೆನ್ ಚೀನ ಮುಂದಿಟ್ಟಿರುವ ಸವಾಲು ಎದುರಿಸಲು ಸಾರಿಗೆ, ಪರಿಸರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಹೂಡಿಕೆ ಮಾಡುತ್ತಿದ್ದಾರೆ. ನಾವೂ, ಸ್ಪರ್ಧೆಯಿಂದ ಮುಂದಡಿ ಇಡದೇ ಇದ್ದರೆ, ದೇಶಕ್ಕಿರುವ ಅವಕಾಶಗಳು ಚೀನ ಕಬಳಿಸುವುದು ಖಚಿತ ಎಂದರು.
ಸುಧಾರಿಸಲಿದೆ: ಅಮೆರಿಕದ ವಲಸೆ ವ್ಯವಸ್ಥೆಯಲ್ಲಿದ್ದ ನ್ಯೂನತೆ ತೆಗೆದು ಹಾಕಲು ಹೊಸ ಸರಕಾರ ಬದ್ಧವಾ ಗಿದೆ ಎಂದು ಶ್ವೇತಭವನದ ಹಿರಿಯ ಅಧಿಕಾರಿ ತಿಳಿಸಿದ್ದಾರೆ. ಬೈಡೆನ್ ಸಹಿ ಮಾಡಿದ ಆದೇಶಗಳು ಕೇವಲ ವ್ಯವಸ್ಥೆಯ ಸುಧಾರಣೆಯ ಒಂದು ಕ್ರಮ ಮಾತ್ರ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Donald Trump: ನೀಲಿ ಚಿತ್ರ ತಾರೆಗೆ ಲಂಚ: ಅಧಿಕಾರಕ್ಕೆ ಮೊದಲೇ ಟ್ರಂಪ್ ಕೇಸಿನ ತೀರ್ಪು
House Of Representatives: ಈ ಬಾರಿ ಅಮೆರಿಕ ಸಂಸತ್ತಲ್ಲಿ ಗರಿಷ್ಠ ಸಂಖ್ಯೆ ಹಿಂದುಗಳು!
HMPV; ಚಳಿಗಾಲದಲ್ಲಿ ಸೋಂಕು ಸಾಮಾನ್ಯ: ಗಾಬರಿ ಬೇಡ ಎಂದ ಚೀನ
Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ
PM Modi Gifts: 2023ರಲ್ಲಿ ಬೈಡನ್ ಪತ್ನಿ ಜಿಲ್ ಅವರಿಗೆ ಮೋದಿ 17 ಲಕ್ಷದ ಉಡುಗೊರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.