ವ್ಯೂಹಾತ್ಮಕ ಸಂಗ್ರಹದಿಂದ ತೈಲ ಬಿಡುಗಡೆ
Team Udayavani, Apr 1, 2022, 6:48 AM IST
ವಾಷಿಂಗ್ಟನ್: ಉಕ್ಕೇನ್ ಬಿಕ್ಕಟ್ಟಿನ ನಡುವೆಯೇ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಅವರು ದೇಶದ ವ್ಯೂಹಾತ್ಮಕ ಸಂಗ್ರಹಣಾ ಕೇಂದ್ರದಿಂದ ಪ್ರತಿ ದಿನ 10 ಲಕ್ಷ ಬ್ಯಾರೆಲ್ವರೆಗೆ ಕಚ್ಚಾ ತೈಲ ಬಿಡುಗಡೆ ಮಾಡುವ ಆದೇಶಕ್ಕೆ ಸಹಿ ಹಾಕಿದ್ದಾರೆ. ಈ ಮೂಲಕ ದೇಶದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯಾಗದಂತೆ ತಡೆಯಲು ಕ್ರಮ ಕೈಗೊಂಡಿದ್ದಾರೆ.
ಮುಂದಿನ ಕೆಲವು ತಿಂಗಳವರೆಗೆ ವ್ಯೂಹಾತ್ಮಕ ಸಂಗ್ರಹದಿಂದ ಕಚ್ಚಾ ತೈಲ ಬಿಡುಗಡೆಯಾಗಲಿದೆ ಎಂದು ಅಮೆರಿಕ ಸರ್ಕಾರದ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಇದೇ ವೇಳೆ, ಒಪೆಕ್ ಮತ್ತು ಮಿತ್ರರಾಷ್ಟ್ರಗಳು ಕಚ್ಚಾ ತೈಲ ಉತ್ಪಾದನೆ ಹೆಚ್ಚಿಸಲು ಒಪ್ಪಿಕೊಂಡಿಲ್ಲ. 2020ರಲ್ಲಿ ಕೊರೊನಾ ಸೋಂಕು ಧಾಂಗುಡಿ ಶುರುವಾದ ಬಳಿಕ ಕಚ್ಚಾ ಉತ್ಪಾದನೆ ಕಡಿತಗೊಳಿಸಿದ್ದವು. ನಂತರ ಅದನ್ನು ಹೆಚ್ಚು ಮಾಡಲು ಬೇಡಿಕೆ ಬಂದಿದ್ದರೂ, ಅವುಗಳು ಒಪ್ಪಿಕೊಂಡಿಲ್ಲ.
ಭಾರತದ ಬೆಂಬಲ: ತನ್ನ ಮೀಸಲಿನಿಂದ ಭಾರೀ ಪ್ರಮಾಣದಲ್ಲಿ ಕಚ್ಚಾ ತೈಲ ಬಿಡುಗಡೆ ಮಾಡುವ ಅಮೆರಿಕದ ನಿರ್ಧಾರವನ್ನು ಭಾರತ ಸ್ವಾಗತಿಸಿದೆ. ದರ ಏರಿಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೈಗೊಂಡ ಈ ಕ್ರಮವನ್ನು ನಾವು ಬೆಂಬಲಿಸುತ್ತೇವೆ ಎಂದು ಕೇಂದ್ರ ಪೆಟ್ರೋಲಿಯಂ ಖಾತೆ ಸಹಾಯಕ ಸಚಿವ ರಾಮೇಶ್ವರ್ ತೇಲಿ ಹೇಳಿದ್ದಾರೆ. ಲೋಕಸಭೆಯಲ್ಲಿ ಮಾತನಾಡಿದ ಅವರು, “ಪ್ರಸ್ತುತ ಸಂದರ್ಭದಲ್ಲಿ ಯಾವುದು ಅಗತ್ಯವೋ ಅಂಥ ನಿರ್ಧಾರ ಕೈಗೊಳ್ಳಲು ನಾವು ಸಿದ್ಧರಿದ್ದೇವೆ. ಕಚ್ಚಾ ತೈಲ ಬೆಲೆ ಇಳಿಸುವ ನಿಟ್ಟಿನಲ್ಲಿ ವ್ಯೂಹಾತ್ಮಕ ಸಂಗ್ರಹದಿಂದ ತೈಲ ಬಿಡುಗಡೆ ಮಾಡುವ ಅಮೆರಿಕದ ನಿರ್ಧಾರವನ್ನು ಬೆಂಬಲಿಸಲಿದ್ದೇವೆ’ ಎಂದಿದೆ.
ಮಾತುಕತೆ ಮುಂದುವರಿಕೆ: ಈ ನಡುವೆ, ಉಕ್ರೇನ್ ಮತ್ತು ರಷ್ಯಾ ನಡುವೆ ಮತ್ತಷ್ಟು ಸಂಧಾನ ಮಾತುಕತೆಗೆ ವೇದಿಕೆ ಕಲ್ಪಿಸಲು ನಾವು ಸಿದ್ಧರಿದ್ದೇವೆ ಎಂದು ಟರ್ಕಿ ಗುರುವಾರ ಹೇಳಿದೆ. ಇತ್ತೀಚೆಗಿನ ಮಾತುಕತೆಯಿಂದ ಉತ್ತಮ ಬೆಳವಣಿಗೆಗಳು ಆಗಿವೆ. ಯುದ್ಧದ ತೀವ್ರತೆ ತಗ್ಗಿದೆ ಎಂದೂ ಟರ್ಕಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.