ಕಾಬೂಲ್ನಲ್ಲಿ ಉಗ್ರರ ಅಟ್ಟಹಾಸ: ಬಾಂಬ್ ದಾಳಿಗೆ 40 ಬಲಿ
Team Udayavani, Jan 27, 2018, 5:09 PM IST
ಕಾಬೂಲ್: ಅಫ್ಘಾನ್ ರಾಜಧಾನಿಯಲ್ಲಿ ಉಗ್ರರು ಶನಿವಾರ ಪ್ರಬಲ ಬಾಂಬ್ ದಾಳಿ ನಡೆಸಿ ಅಟ್ಟಹಾಸ ಮೆರೆದಿದ್ದಾರೆ. ಭೀಕರ ದಾಳಿಯಲ್ಲಿ ಕನಿಷ್ಠ 40 ಮಂದಿ ಸಾವನ್ನಪ್ಪಿದ್ದು, 140 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಆಂತರಿಕ ಸಚಿವಾಲಯದ ಕಚೇರಿಯ ಸಮೀಪದಲ್ಲೇ ಬಾಂಬ್ ಸ್ಫೋಟಗೊಂಡಿದೆ. ಮಧ್ಯಾಹ್ನ 12.45 ರ ವೇಳೆಗೆ ಬಾಂಬ್ ಸ್ಫೋಟಗೊಂಡು ಸುತ್ತಮುತ್ತಲೂ ದಟ್ಟ ಹೊಗೆ ಆವರಿಸಿದೆ ಎಂದು ವರದಿಯಾಗಿದೆ.
ಯುರೋಪಿಯನ್ ಯೂನಿಯನ್ ಮತ್ತು ಶಾಂತಿ ಸಮಿತಿಯ ಕಚೇರಿಗಳನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಲಾಗಿದೆ.
ಗಾಯಾಳುಗಳ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚುವ ಎಲ್ಲಾ ಲಕ್ಷಣಗಳಿವೆ.
ಅಂಬುಲೆನ್ಸ್ನಲ್ಲಿ ಬಂದ ಉಗ್ರ ದಾಳಿ ನಡೆಸಿದ್ದಾನೆ ಎಂದು ಹೇಳಲಾಗಿದೆ.
ತಾಲಿಬಾನ್ ಉಗ್ರ ಸಂಘಟನೆಯ ವಕ್ತಾರ ಝಬಿವುಲ್ಲಾ ದಾಳಿಯ ಹೊಣೆ ಹೊತ್ತಿದ್ದಾನೆ.
ವಾರದ ಹಿಂದೆ ಕಾಬೂಲ್ ನ ಐಷಾರಾಮಿ ಹೊಟೇಲ್ ಮೇಲೆ ನಡೆದ ಉಗ್ರ ದಾಳಿಯಲ್ಲಿ 22 ಮಂದಿ ದಾರುಣವಾಗಿ ಸಾವನ್ನಪ್ಪಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.