ಕಮಲಾ ಮೂಲದ ಬಗ್ಗೆ ಚರ್ಚೆ; ಶ್ವೇತ ಭವನದಲ್ಲಿ ಸೇವೆ ಸಲ್ಲಿಸಲು ಅರ್ಹತೆ ಇಲ್ಲ: ಟ್ರಂಪ್
Team Udayavani, Aug 15, 2020, 6:11 AM IST
ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಜೋ ಬೈಡೆನ್, ಉಪಾಧ್ಯಕ್ಷ ಹುದ್ದೆಯ ಅಭ್ಯರ್ಥಿ ಕಮಲಾ ಹ್ಯಾರಿಸ್ ವಿಲ್ಮಿಂಗ್ಟನ್‌ನನಲ್ಲಿ ಕೊರೊನಾಕ್ಕೆ ಸಂಬಂಧಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವಾಷಿಂಗ್ಟನ್: ಕಮಲಾ ಹ್ಯಾರಿಸ್ ಅವರನ್ನು ಡೆಮಾಕ್ರಟಿಕ್ ಪಕ್ಷದಿಂದ ಉಪಾಧ್ಯಕ್ಷ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ ಮರುಕ್ಷಣದಿಂದಲೇ ಅವರ ಮೂಲವನ್ನು ಕೆದಕಲಾಗುತ್ತಿದೆ. ಕಮಲಾರ ತಂದೆ ಜಮೈಕಾ ಮೂಲದವರು, ತಾಯಿ ಭಾರತ ಮೂಲದವರು. ಹಾಗಾಗಿ, ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸುವ ಹಕ್ಕೇ ಇದೆಯೇ ಇಲ್ಲವೇ ಎಂಬ ಚರ್ಚೆಗಳು ಸಾಮಾಜಿಕ ಜಾಲತಾಣಗಳಲ್ಲಿ ಆರಂಭವಾಗಿವೆ.
ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಕೂಡ ಇಂಥದ್ದೇ ಸಂದರ್ಭ ಎದುರಿಸಿದ್ದರು. ಈಗ ಅದೇ ಸಂದರ್ಭ ಕಮಲಾ ಅವರ ಪಾಲಿಗೂ ಬಂದಿದೆ. ಇತ್ತೀಚೆಗೆ, ವೈಟ್ ಹೌಸ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಮೆರಿಕದ ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೈಟ್‌ಹೌಸ್‌ನಲ್ಲಿ ಸೇವೆ ಸಲ್ಲಿಸಲು ಬೇಕಾಗಿರುವ ಅರ್ಹತೆ ಕಮಲಾ ಹ್ಯಾರಿಸ್ ಅವರಿಗಿಲ್ಲ. ಅವರ ತಂದೆ-ತಾಯಿಯ ಮೂಲವೇ ಬೇರೆಯಾಗಿರುವುದರಿಂದ ಅರ್ಹತೆ ಅವರಿಗೆ ಇರಲಾರದು ಎಂದಿದ್ದೂ ಸಹ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದೆ.
ವಿಶ್ಲೇಷಕರು ಏನಂತಾರೆ?: ಅಸಲು ವಿಷಯವೇನೆಂದರೆ, ಕಮಲಾ ವಿರೋಧಿಗಳು ಎತ್ತಿರುವ ಆಕ್ಷೇಪ ವಾಸ್ತವಕ್ಕೆ ದೂರವಾದದ್ದು ಎಂದು ಹಲವಾರು ವಿಶ್ಲೇಷಕರು ತಿಳಿಸಿದ್ದಾರೆ. ಕಮಲಾ ಹ್ಯಾರಿಸ್ ತಂದೆ ಜಮೈಕಾದವರು ಹಾಗೂ ತಾಯಿ ಭಾರತೀಯರಾಗಿದ್ದರೂ ಕಮಲಾ ಅವರು ಹುಟ್ಟಿ ಬೆಳೆದದ್ದು ಅಮೆರಿಕದಲ್ಲೇ. ಆಕ್ಲೆಂಡ್‌ನಲ್ಲಿ ಹುಟ್ಟಿದ ಅವರು ಕ್ಯಾಲಿಫೋರ್ನಿಯಾದಲ್ಲಿ ಬೆಳೆದು ಅಲ್ಲೇ ಪ್ರವರ್ಧಮಾನಕ್ಕೆ ಬಂದವರು. ಹಾಗಾಗಿ ಅವರು ಅಮೆರಿಕ ಪ್ರಜೆಯೇ ಆಗಿದ್ದಾರೆ. ಆದ್ದರಿಂದ ಅವರಿಗೆ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಎಲ್ಲ ರೀತಿಯ ಅರ್ಹತೆಯೂ ಇದೆ ಎಂದು ಅವರು ತಿಳಿಸಿದ್ದಾರೆ.
ಭಾರತ ವ್ಯಾಪಿ ಹವಾ!
ಅಮೆರಿಕದ 2ನೇ ಮಹೋನ್ನತ ಹುದ್ದೆಗೆ ಲಗ್ಗೆಯಿಡಲು ಅವಕಾಶ ಪಡೆದ ಕಮಲಾ ಹ್ಯಾರಿಸ್ ಅವರ ಬಗ್ಗೆ ಭಾರತೀಯ ಸಾಮಾಜಿಕ ಜಾಲತಾಣದಲ್ಲಿ ಸಂಭ್ರಮ, ಸಂತಸ ವ್ಯಕ್ತವಾಗುತ್ತಿದೆ. ಭಾರತದಲ್ಲಿ ಅವರ ಕುಟುಂಬಕ್ಕೆ ಆಪ್ತರಾಗಿದ್ದ ಕೆಲವರು ಕಮಲಾ ಹ್ಯಾರಿಸ್ ಹಾಗೂ ಅವರ ಸಹೋದರಿ ಮಾಯಾ ಹ್ಯಾರಿಸ್ ಅವರು ಚೆನ್ನೈ ಬೇಸಂಟ್ ನಗರ್‌ನಲ್ಲಿರುವ ತಮ್ಮ ಅಜ್ಜಿ-ತಾತನ ಮನೆಗೆ ಹಲವಾರು ವರ್ಷಗಳ ಹಿಂದೆ ಭೇಟಿ ನೀಡಿದ್ದಾಗ ತಗೆಸಿಕೊಂಡಿದ್ದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.