US Presidential Election: ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿ ಕಮಲಾ ಹ್ಯಾರಿಸ್ ಆಯ್ಕೆ
Team Udayavani, Aug 3, 2024, 9:55 AM IST
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಯಾಗಿ ಉಪಾಧ್ಯಕ್ಷೆ ಭಾರತ ಮೂಲದ ಕಮಲಾ ಹ್ಯಾರಿಸ್ ಹೆಸರು ಅಂತಿಮವಾಗಿ ಆಯ್ಕೆಯಾಗಿದೆ.
ಅಮೆರಿಕ ಅಧ್ಯಕ್ಷ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸುವುದಕ್ಕೆ ಅಗತ್ಯವಿರುವಷ್ಟು ಡೆಮಾಕ್ರಟಿಕ್ ಪಕ್ಷದ ಪ್ರತಿನಿಧಿಗಳ ಮತಗಳನ್ನು ಪಡೆಯುವಲ್ಲಿ ಕಮಲಾ ಹ್ಯಾರಿಸ್ ಅವರು ಯಶಸ್ವಿಯಾಗಿದ್ದಾರೆ ಎಂದು ಡೆಮಾಕ್ರಟಿಕ್ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಜೇಮ್ ಹ್ಯಾರಿಸನ್ ಶುಕ್ರವಾರ ಹೇಳಿದ್ದಾರೆ.
ಈ ಕುರಿತು ಹೇಳಿಕೆ ನೀಡಿದ ಕಮಲಾ ಹ್ಯಾರಿಸ್ ಅಮೆರಿಕ ಅಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರು ಅಂತಿಮಗೊಂಡಿರುವುದು ಗೌರವ ತಂದಿದೆ, ವರ್ಚುವಲ್ ನಾಮನಿರ್ದೇಶನ ಪ್ರಕ್ರಿಯೆಯ ಅವಧಿ ಮುಗಿದ ಬಳಿಕ ಅಂದರೆ ಮುಂದಿನ ವಾರ ನಾಮನಿರ್ದೇಶನವನ್ನು ನಾನು ಅಧಿಕೃತವಾಗಿ ಸ್ವೀಕರಿಸುತ್ತೇನೆ ಎಂದು ಹೇಳಿಕೊಂಡಿದ್ದಾರೆ.
ಈ ಹಿಂದೆ ಅಮೆರಿಕ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದ ಜೋ ಬೈಡೆನ್ ತನ್ನ ಕೊನೆಯ ಕ್ಷಣದಲ್ಲಿ ಚುನಾವಣಾ ಕಣದಿಂದ ಹಿಂದೆ ಸರಿದ ನಿಟ್ಟಿನಲ್ಲಿ ಕಮಲಾ ಅವರ ಹೆಸರು ಮುಂಚೂಣಿಯಲ್ಲಿತ್ತು ಅಲ್ಲದೆ ಡೆಮಾಕ್ರಟಿಕ್ ಪಕ್ಷದಲ್ಲೂ ಹ್ಯಾರಿಸ್ ಪರ ಒಲವು ಕಂಡುಬಂದಿತ್ತು ಇದೀಗ ಅಂತಿಮ ಹಂತಕ್ಕೆ ಬಂದು ತಲುಪಿದ್ದು ಅಧ್ಯಕ್ಷೀಯ ಚುನಾವಣೆಗೆ ಕಮಲಾ ಹ್ಯಾರಿಸ್ ಹೆಸರು ಅಂತಿಮಗೊಂಡಿದೆ, ಜೊತೆಗೆ ಜೋ ಬೈಡೆನ್ ಕೂಡ ಕಮಲಾ ಪರ ಪ್ರಚಾರ ನಡೆಸುವುದಾಗಿ ಹೇಳಿಕೊಂಡಿದ್ದಾರೆ.
ಅದರಂತೆ ನವೆಂಬರ್ 5ರಂದು ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಮತ್ತು ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಿರುದ್ಧ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಕಮಲಾ ಹ್ಯಾರಿಸ್ ಚುನಾವಣೆ ಎದುರಿಸಲಿದ್ದಾರೆ.
ಇದನ್ನೂ ಓದಿ: Gadget Review: ಒನ್ ಪ್ಲಸ್ ಪ್ಯಾಡ್ 2… ಲ್ಯಾಪ್ ಟಾಪ್ ಅನುಭವ ನೀಡುವ ಟ್ಯಾಬ್
I am honored to be the Democratic nominee for President of the United States. I will officially accept the nomination next week.
This campaign is about people coming together, fueled by love of country, to fight for the best of who we are.
Join us: https://t.co/abmve926Hz
— Kamala Harris (@KamalaHarris) August 2, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
Pakistan;ಬಲೂಚಿಸ್ಥಾನದಲ್ಲಿ ಉಗ್ರರ ವಿರುದ್ಧ ಸಮಗ್ರ ಕಾರ್ಯಾಚರಣೆಗೆ ಮುಂದಾದ ಪಾಕ್
Modi; 56 ವರ್ಷಗಳಲ್ಲಿ ಗಯಾನಾಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ
‘New Phase’ of War: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅಣ್ವಸ್ತ್ರ ದಾಳಿ ಎಚ್ಚರಿಕೆ!
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.