ಬಾಂಗ್ಲಾ ಮಾಜಿ ಪ್ರಧಾನಿ ಖಾಲಿದಾಗೆ 5 ವರ್ಷ ಜೈಲು
Team Udayavani, Feb 9, 2018, 8:15 AM IST
ಢಾಕಾ: ಭ್ರಷ್ಟಾಚಾರ ಪ್ರಕರಣದಲ್ಲಿ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿಯ ನಾಯಕಿ, ಮಾಜಿ ಪ್ರಧಾನಿ ಖಾಲಿದಾ ಜಿಯಾ (72)ಗೆ ಐದು ವರ್ಷಗಳ ಕಠಿಣ ಜೈಲು ಶಿಕ್ಷೆಯಾಗಿದೆ. ಬಾಂಗ್ಲಾ ರಾಜಧಾನಿ ಢಾಕಾದಲ್ಲಿರುವ ವಿಶೇಷ ನ್ಯಾಯಾಲಯ ಗುರುವಾರ ಈ ತೀರ್ಪು ನೀಡಿದೆ.
ಜಿಯಾರ ಪುತ್ರ ತಾರೀಖ್ ರೆಹಮಾನ್ ಹಾಗೂ ಇತರೆ ನಾಲ್ವರು ಆರೋಪಿಗಳಿಗೆ ಈ ಪ್ರಕರಣದಲ್ಲಿ ಹತ್ತು ವರ್ಷಗಳ ಕಾಲ ಕಾರಾಗೃಹವಾಸ ಶಿಕ್ಷೆ ವಿಧಿಸಿ ಕೋರ್ಟ್ ಆದೇಶಿಸಿದೆ. ಈ ಬೆಳವಣಿಗೆಯಿಂದಾಗಿ ಡಿಸೆಂಬರ್‌ನಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಅವರು ಸ್ಪರ್ಧಿಸುವುದಕ್ಕೆ ನಿಷೇಧ ಹೇರುವ ಸಾಧ್ಯತೆಗಳು ಅಧಿಕವಾಗಿವೆ. ತೀರ್ಪು ಪ್ರಕಟವಾದ ಬಳಿಕ ಬಾಂಗ್ಲಾದೇಶದಾದ್ಯಂತ ಗಲಭೆಗಳು ಆರಂಭವಾಗಿವೆ.
ತೀರ್ಪು ಪ್ರಕಟವಾಗುವ ವೇಳೆ ಖಾಲಿದಾ ಜಿಯಾ ಕೋರ್ಟಲ್ಲಿ ಹಾಜರಿದ್ದರು. ಈ ನಡುವೆ ಬಾಂಗ್ಲಾದೇಶದ ಮಾಜಿ ಪ್ರಧಾನಿ ಪುತ್ರ ಯು.ಕೆ.ನಲ್ಲಿ ಆಶ್ರಯ ಪಡೆದಿದ್ದಾರೆ ಎಂದು ಹೇಳಲಾಗಿದೆ. ಜಿಯಾರ ಪತಿ ದಿ. ಜಿಯಾವುರ್ ರೆಹಮಾನ್ ಹೆಸರಲ್ಲಿರುವ ಝಿಯಾ ಅನಾಥಶ್ರಮ ಟ್ರಸ್ಟ್‌ಗೆ 2,50,000 ಅಮೆರಿಕನ್ ಡಾಲರ್ ವಿದೇಶಿ ದೇಣಿಗೆ ಸ್ವೀಕರಿಸಿದ್ದರಲ್ಲಿ ಅವ್ಯವಹಾರವಾಗಿದೆ ಎಂದು ಆರೋಪಿಸಲಾಗಿತ್ತು. ಜಿಯಾ ಮತ್ತು ಮೂವರು ಆಪ್ತರು 4 ಲಕ್ಷ ಅಮೆರಿಕನ್ ಡಾಲರ್ ಮೊತ್ತವನ್ನು ನಿಯಮಕ್ಕೆ ವಿರುದ್ಧವಾಗಿ ಪಡೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು. ಇದಲ್ಲದೆ ಮತ್ತೂಂದು ಪ್ರಕರಣದಲ್ಲಿ ಬಾಂಗ್ಲಾದ ಪ್ರತಿಪಕ್ಷ ನಾಯಕಿಯ ಪುತ್ರ ಸೇರಿದಂತೆ ಐವರ ವಿರುದ್ಧ 2.77 ಲಕ್ಷ ಅಮೆರಿಕ ಡಾಲರ್ ಮೊತ್ತ ದುರುಪಯೋಗ ಮಾಡಿದ ಆರೋಪದಲ್ಲಿಯೂ ಕೇಸು ದಾಖಲಾಗಿತ್ತು. ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಕೆಳಹಂತದ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.