ಖಲಿಸ್ಥಾನ್ ಕಮಾಂಡೋ ಫೋರ್ಸ್ ಮುಖ್ಯಸ್ಥ ಪರಮ್ಜಿತ್ ಸಿಂಗ್ ಹತ್ಯೆ: ಮೂಲಗಳು
Team Udayavani, May 6, 2023, 8:16 PM IST
ಲಾಹೋರ್ : ಮೋಸ್ಟ್ ವಾಂಟೆಡ್ ಭಯೋತ್ಪಾದಕ ಮತ್ತು ಖಲಿಸ್ಥಾನ್ ಕಮಾಂಡೋ ಫೋರ್ಸ್ (ಕೆಸಿಎಫ್-ಪಂಜ್ವಾರ್ ಗುಂಪು) ಮುಖ್ಯಸ್ಥ ಪರಮ್ಜಿತ್ ಸಿಂಗ್ ಪಂಜ್ವಾರ್ ನನ್ನು ಪಾಕಿಸ್ಥಾನದ ಲಾಹೋರ್ನಲ್ಲಿ ಶನಿವಾರ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಲಾಹೋರ್ನಲ್ಲಿರುವ ಆತನ ನಿವಾಸದ ಬಳಿ ಮೋಟಾರ್ಸೈಕಲ್ನಲ್ಲಿ ಬಂದ ಇಬ್ಬರು ಬೆಳಗ್ಗೆ ಗುಂಡಿಕ್ಕಿ ಕೊಂದಿದ್ದಾರೆ. ಪಂಜಾಬ್ನ ತರ್ನ್ ತರಣ್ ಜಿಲ್ಲೆಯ ಪಂಜ್ವಾರ್ ಮೂಲದ 63 ವರ್ಷದ ಪರಮ್ಜಿತ್ ಸಿಂಗ್ ಮಾದಕ ದ್ರವ್ಯ ಮತ್ತು ಶಸ್ತ್ರಾಸ್ತ್ರಗಳ ಕಳ್ಳಸಾಗಣೆಯಲ್ಲಿ ತೊಡಗಿದ್ದ ಮತ್ತು ಜುಲೈ 2020 ರಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿಯಲ್ಲಿ ಭಯೋತ್ಪಾದಕ ಎಂದು ಹೆಸರಿಸಲಾಗಿತ್ತು.
ಆತ 1986 ರಲ್ಲಿ KCF ಗೆ ಸೇರಿದ್ದ, ನಂತರ ಮುಖ್ಯಸ್ಥರಾಗಿ ಪಾಕಿಸ್ಥಾನಕ್ಕೆ ಪಲಾಯಾನವಾಗಿದ್ದ. ಕೆಸಿಎಫ್ ಅನ್ನು ಯುಎಪಿಎ ಅಡಿಯಲ್ಲಿ ಭಯೋತ್ಪಾದಕ ಸಂಘಟನೆ ಎಂದು ಪಟ್ಟಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್ ಸೈಕ್ಲೋನ್, 6 ಲಕ್ಷ ಮನೆಗಳಿಗೆ ವಿದ್ಯುತ್ ಕಡಿತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.